ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

PSL 2023: ಪಿಎಸ್‌ಎಲ್ ಸೌಹಾರ್ದ ಪಂದ್ಯದ ವೇಳೆ ಬಾಂಬ್‌ ಸ್ಫೋಟ ವರದಿ: ಕೆಲ ಕಾಲ ಪಂದ್ಯ ಸ್ಥಗಿತ

PSL 2023: Blast Scare Outsude Bugti Stadiun During Quetta Gladiators vs Peshawar Zalmi Match

ಪಾಕಿಸ್ತಾನ ಸೂಪರ್ ಲೀಗ್ ಪಂದ್ಯಾವಳಿ ಆರಂಭಕ್ಕೆ ಮುನ್ನ ನಡೆದ ಸೌಹಾರ್ದ ಪಂದ್ಯದ ಸಂದರ್ಭದಲ್ಲಿ ಕ್ವೆಟ್ಟಾ ಬುಗ್ಟಿ ಸ್ಟೇಡಿಯಂ ಹೊರಗಡೆ ಬಾಂಬ್ ಸ್ಫೋಟವಾಗಿದೆ ಎಂದು ವರದಿಯಾಗಿದೆ.

ಇದರಿಂದಾಗಿ ಕೆಲ ಕಾಲ ಕ್ವೆಟ್ಟಾ ಗ್ಲಾಡಿಯೇಟರ್ಸ್ vs ಪೇಶಾವರ್ ಝಲ್ಮಿ ನಡುವಿನ ಪಂದ್ಯವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಯಿತು. ಕೆಲ ಹೊತ್ತಿನ ಬಳಿಕ ಪಂದ್ಯವನ್ನು ಮತ್ತೆ ಆರಂಭಿಸಲಾಯಿತು. ಬಾಬರ್ ಅಜಂ, ಸರ್ಫರಾಜ್ ಅಹ್ಮದ್ ಸೇರಿದಂತೆ ಪ್ರಮುಖ ಆಟಗಾರರು ಈ ಪಂದ್ಯದಲ್ಲಿ ಆಡುತ್ತಿದ್ದಾರೆ.

ಕೆಲವು ಮೂಲಗಳು ಬಾಂಬ್ ವರದಿಯಾಗಿದೆ ಎಂದು ಹೇಳಿದ್ದರೆ, ಇನ್ನೂ ಕೆಲವು ಸುದ್ದಿ ಮೂಲಗಳ ಪ್ರಕಾರ ಸ್ಟೇಡಿಯಂ ಹೊರಗಡೆ ಬೆಂಕಿ ಹಚ್ಚಿದ್ದು, ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

ಭಾರತ vs ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ ಈ ತಂಡವೇ ಗೆಲ್ಲಲಿದೆ ಎಂದ ಮೈಕಲ್ ವಾನ್ಭಾರತ vs ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ ಈ ತಂಡವೇ ಗೆಲ್ಲಲಿದೆ ಎಂದ ಮೈಕಲ್ ವಾನ್

ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಕ್ರೀಡಾಂಗಣದಲ್ಲಿ ಕೆಲಕಾಲ ಗೊಂದಲ ಉಂಟಾಯಿತು. ಕ್ರೀಡಾಂಗಣದ ಹೊರಗೆ ಹೊಗೆಯಾಡುತ್ತಿರುವ ವಿಡಿಯೋವನ್ನು ಟ್ವಿಟರ್ ನಲ್ಲಿ ಹಂಚಿಕೊಳ್ಳಲಾಗಿದೆ. ಕೆಲವು ಕಿಡಿಗೇಡಿಗಳು ಬೆಂಕಿಯನ್ನು ಹಚ್ಚಿದ್ದರು ಎಂದು ಹೇಳಲಾಗಿದೆ. ಅಲ್ಲದೆ ಕ್ರೀಡಾಂಗಣದ ಹೊರಗಿನಿಂದ ಕಲ್ಲು ತೂರಾಟ ಮಾಡಲಾಗಿದೆ. ಇದರಿಂದಾಗಿ ಕ್ರೀಡಾಂಗಣದಲ್ಲಿ ಕೆಲಕಾಲ ಭಯಗೊಂಡರು.

ಬುಗ್ಟಿ ಸ್ಟೇಡಿಯಂನಿಂದ 4 ಕಿಲೋ ಮೀಟರ್ ದೂರದಲ್ಲಿರುವ ಪೊಲೀಸ್ ಲೈನ್ ಬಳಿ ಕ್ವೆಟ್ಟಾದಲ್ಲಿ ಸ್ಫೋಟ ಸಂಭವಿಸಿದೆ. ಪಿಎಸ್‌ಎಲ್‌ ಎಕ್ಸಿಬಿಷನ್ ಪಂದ್ಯಕ್ಕಾಗಿ ಹೆಚ್ಚಿನ ಭದ್ರತೆ ಒದಗಿಸಿದ್ದಾಗಲೂ ಈ ರೀತಿಯ ಘಟನೆ ಸಂಭವಿಸಿರುವುದು ಪಾಕಿಸ್ತಾನದಲ್ಲಿ ಭದ್ರತೆಯ ಬಗ್ಗೆ ಆತಂಕವನ್ನು ಹೆಚ್ಚಿಸಿದೆ.

ಹಲವು ದಿನಗಳಿಂದ ಬಾಂಬ್ ಸ್ಫೋಟ

ಪಾಕಿಸ್ತಾನದಲ್ಲಿ ಹಲವು ದಿನಗಳಿಂದ ಬಾಂಬ್ ಸ್ಫೋಟಗಳು ಸಂಭವಿಸುತ್ತಿರುವುದು ಆತಂಕವನ್ನು ಹೆಚ್ಚಿಸಿದೆ. ಪಾಕಿಸ್ತಾನಕ್ಕೆ ಹಲವು ದೇಶಗಳ ತಂಡಗಳು ಇತ್ತೀಚೆಗೆ ಕ್ರಿಕೆಟ್ ಆಡಲು ಪ್ರವಾಸ ಕೈಗೊಳ್ಳುತ್ತಿವೆ, ಆದರೆ ಈಗ ನಡೆಯುತ್ತಿರುವ ಘಟನೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನ ಕ್ರಿಕೆಟ್ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಭಾವುವಾರ ಕ್ವೆಟ್ಟಾದಲ್ಲಿ ಸಂಭವಿಸಿರುವ ಸ್ಫೋಟದಲ್ಲಿ ಐವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಡಾನ್.ಕಾಂ ವರದಿ ಮಾಡಿರುವ ಪ್ರಕಾರ, ಗಾಯಾಳುಗಳನ್ನು ಕ್ವೆಟ್ಟಾದ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ), ಕಾನೂನುಬಾಹಿರ ಸಂಘಟನೆಯು ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಸ್ಫೋಟ ಮಾಡಲಾಗಿದೆ ಎಂದು ಹೇಳಿದೆ.

ಕೆಲವು ದಿನಗಳ ಹಿಂದೆ ಪೇಶಾವರ ಪೊಲೀಸ್ ಲೈನ್ಸ್ ಪ್ರದೇಶದಲ್ಲಿ ಭೀಕರ ಬಾಂಬ್ ಸ್ಫೋಟ ಸಂಭವಿಸಿತ್ತು. ಇದು ಕೂಡ ಪೊಲೀಸ್ ಅಧಿಕಾರಿಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗಿತ್ತು. ಫೆಬ್ರವರಿ 13ರಂದು ಪಾಕಿಸ್ತಾನ ಸೂಪರ್ ಲೀಗ್ ಆರಂಭವಾಗಲಿದ್ದು, ಟೂರ್ನಿಯ ಮೇಲೆ ಪರಿಣಾಮ ಬೀರಲಿದೆ.

PSL 2023: Blast Scare Outsude Bugti Stadiun During Quetta Gladiators vs Peshawar Zalmi Match

ಏಷ್ಯಾಕಪ್ ಸ್ಥಳಾಂತರಕ್ಕೆ ಪಟ್ಟು

2023ರ ಏಷ್ಯಾಕಪ್‌ ಪಾಕಿಸ್ತಾನದಲ್ಲಿ ನಡೆಯಲು ತೀರ್ಮಾನಿಸಲಾಗಿತ್ತು, ಆದರೆ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣ ಮಾಡುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿತ್ತು. ಪಾಕಿಸ್ತಾನ ಬಿಸಿಸಿಐ ತೀರ್ಮಾನಕ್ಕೆ ವಿರೋಧ ವ್ಯಕ್ತಪಡಿಸಿತ್ತು. ಈಗ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಘಟನೆಗಳು ಪಾಕಿಸ್ತಾನಕ್ಕೆ ಹಿನ್ನಡೆ ಉಂಟುಮಾಡಿವೆ.

Story first published: Sunday, February 5, 2023, 16:24 [IST]
Other articles published on Feb 5, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X