Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

CCL 2025 Final: ಚೆನ್ನೈ ಮಣಿಸಿ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡ ಪಂಜಾಬ್

ಮೈಸೂರಿನ ಶ್ರೀಕಂಠ ನರಸಿಂಹರಾಜ ದತ್ತ ಒಡೆಯರ್ ಸ್ಟೇಡಿಯಂನಲ್ಲಿ ಚೆನ್ನೈ ರೈನೋಸ್ ಮತ್ತು ಪಂಜಾಬ್ ದೆ ಶೇರ್ ತಂಡಗಳ ನಡುವೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್)ನ ಫೈನಲ್ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಚೆನ್ನೈ ರೈನೋಸ್ ತಂಡವನ್ನು ಸೋಲಿಸಿ ಪಂಜಾಬ್ ದೆ ಶೇರ್ ಚಾಂಪಿಯನ್ ಪಟ್ಟ ಆಲಂಕರಿಸಿದೆ. ಪಂಜಾಬ್ ದೆ ಶೇರ್ ತಂಡ ಚೊಚ್ಚಲ ಸಿಸಿಎಲ್ ಪ್ರಶಸ್ತಿ ಗೆಲ್ಲುವ ಮೂಲಕ ಇತಿಹಾಸ ಬರೆದಿದ್ದಾರೆ.

ಚೆನ್ನೈ ನೀಡಿದ 72 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಪಂಜಾಬ್ 12 ಎಸೆತಗಳು ಬಾಕಿ ಇರುವಾಗಲೇ ಗೆಲುವಿನ ನಗೆ ಬೀರಿತು. ಇದರೊಂದಿಗೆ ಕಳೆದ 10 ವರ್ಷಗಳಿಂದ ಸಿಸಿಎಲ್ ಪ್ರಶಸ್ತಿ ಗೆಲ್ಲುವ ಪಂಜಾಬ್ ತಂಡದ ಕನಸು ನನಸಾಗಿದೆ.

Punjab De Sher won first CCL trophy by defeating Chennai Rhinos

ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ದಿ ಶೇರ್ ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಇತ್ತ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಚೆನ್ನೈ ಮೊದಲ 10 ಓವರ್‌ನ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಕಳೆದುಕೊಂಡು 89 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಪಂಜಾಬ್ ದಿ ಶೇರ್ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 103 ರನ್ ಕಲೆಹಾಕಿತು. ಆ ಮೂಲಕ 14 ರನ್ ಗಳ ಮುನ್ನಡೆ ಪಡೆದುಕೊಂಡಿತು.

ಇದಕ್ಕೆ ಪ್ರತಿಯಾಗಿ 2ನೇ ಇನ್ನಿಂಗ್ಸ್ ಆರಂಭಿಸಿದ ಚೆನ್ನೈ ರೈನೋಸ್ ತಂಡ 6 ವಿಕೆಟ್ ನಷ್ಟಕ್ಕೆ ಕೇವಲ 85 ರನ್ ಮಾತ್ರ ಕಲೆಹಾಕಿ ಪಂಜಾಬ್ ಗೆಲುವಿಗೆ 71ರನ್ ಗಳ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಪಂಜಾಬ್ 8 ಓವರ್‌ನಲ್ಲೇ 2 ವಿಕೆಟ್ ಕಳೆದುಕೊಂಡು 75 ರನ್ ಗಳಿಸಿತು. ಇದರೊಂದಿಗೆ ಪಂಜಾಬ್ 8 ವಿಕೆಟ್‌ಗಳ ಅಂತರದಲ್ಲಿ ಅಮೋಘ ಗೆಲುವು ಸಾಧಿಸಿತು.

Story first published: Sunday, March 2, 2025, 23:36 [IST]
Other articles published on Mar 2, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+