IPL 2025: ಡೆತ್ ಓವರ್‌ಗಳಲ್ಲಿ ಬಿಗುವಿನ ದಾಳಿ ನಡೆಸಿದ ಪಂಜಾಬ್‌ಗೆ ಜಯ
ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕೆ ಇಳಿದ ಕನ್ನಡಿಗ ವೈಶಾಖ್ ವಿಜಯಕುಮಾರ್ ಅವರ ಬಿಗುವಿನ ದಾಳಿಯಿಂದ ಪಂಜಾಬ್ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಇಂಡಿಯನ್ ಪ್ರೀಮಿಯರ್ ಲೀಗ್‌ನ ಐದನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 11 ರನ್ ಗಳಿಂದ ಮಣಿಸಿದ ಪಂಜಾಬ್ ಕಿಂಗ್ಸ್ ಶುಭಾರಂಭ ಮಾಡಿದೆ.
ಅಹಮದಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 243 ರನ್ ಸಿಡಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 232 ರನ್ ಸೇರಿಸಿ ಸೋಲು ಕಂಡಿತು. ವಿಜಯ್ ಕುಮಾರ್ ವೈಶಾಖ್ ಡೆತ್ ಓವರ್‌ಗಳಲ್ಲಿ ಬಿಗುವಿನ ದಾಳಿ ನಡೆಸಿ ಗೆಲುವಿನಲ್ಲಿ ಮಿಂಚಿದರು. ಇವರು 3 ಓವರ್ ಬೌಲಿಂಗ್ ನಡೆಸಿ 28 ರನ್ ನೀಡಿ ಟೈಟನ್ಸ್ ತಂಡಕ್ಕೆ ಕಾಡಿದರು.

ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡದ ಪರ ಆರಂಭಿಕರಾಗಿ ಪ್ರಿಯಾಂಶ್ ಆರ್ಯ ಹಾಗೂ ಪ್ರಭಸಿಮ್ರನ್ ಸಿಂಗ್ (5 ರನ್) ಉತ್ತಮ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ ಮೊದಲನೇ ವಿಕೆಟ್‌ಗೆ 3.1 ಓವರ್‌ಗಳಲ್ಲಿ 28 ರನ್ ಸೇರಿಸಿತು.
ಎರಡನೇ ವಿಕೆಟ್‌ಗೆ ಪ್ರಿಯಾಂಶ್ ಜೊತೆಗೆ ಇನಿಂಗ್ಸ್ ಮುನ್ನಡೆಸುವ ಜವಾಬ್ದಾರಿಯನ್ನು ಹೊತ್ತುಕೊಂಡ ಶ್ರೇಯಸ್ ಅಮೋಘ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ ಪವರ್ ಪ್ಲೇನಲ್ಲಿ ತಂಡಕ್ಕೆ ಆಧಾರವಾಯಿತು. ಅಲ್ಲದೆ ಈ ಅವಧಿಯಲ್ಲಿ ಮತ್ತೆ ವಿಕೆಟ್ ಬೀಳದಂತೆ ಕಾಯ್ದುಕೊಂಡಿತು. ಈ ಜೋಡಿ 21 ಎಸೆತಗಳಲ್ಲಿ 51 ರನ್ ಸೇರಿಸಿತು. ಈ ಅವಧಿಯಲ್ಲಿ ಪ್ರಿಯಾಂಶ್ 23 ಎಸೆತಗಳಲ್ಲಿ 7 ಬೌಂಡರಿ, 2 ಸಿಕ್ಸರ್ ಸಹಾಯದಿಂದ 47 ರನ್ ಸಿಡಿಸಿ ರಶೀದ್ ಖಾನ್‌ಗೆ ವಿಕೆಟ್ ಒಪ್ಪಿಸಿದರು.
ಶ್ರೇಯಸ್ ಅಬ್ಬರ
ಉಳಿದಂತೆ ಪಂಜಾಬ್ ತಂಡದ ಮಧ್ಯಮ ಕ್ರಮಾಂಕದ ಅಜ್ಲತುಲ್ಲಾ ಓಮರ್ಝಾಯಿ, ಗ್ಲೇನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೋಯಿನಿಸ್ ಜವಾಬ್ದಾರಿ ಮರೆತರು. 6ನೇ ವಿಕೆಟ್‌ಗೆ ಶ್ರೇಯಸ್ ಅಯ್ಯರ್ ಹಾಗೂ ಶಶಾಂಕ್ ಸಿಂಗ್ ಜೋಡಿ 28 ಎಸೆತಗಳಲ್ಲಿ ಅಜೇಯ 81 ರನ್‌ಗಳ ಜತೆಯಾಟವನ್ನು ನೀಡಿ ತಂಡಕ್ಕೆ ಆಧರವಾಯಿತು. ಈ ಜೋಡಿಗೆ ಕಟ್ಟಿ ಹಾಕುವಲ್ಲಿ ಗುಜರಾತ್ ತಂಡದ ಬೌಲರ್‌ಗಳು ವಿಫಲರಾದರು. ಶಶಾಂಕ್ ಸಿಂಗ್ 16 ಎಸೆತಗಳಲ್ಲಿ 6 ಬೌಂಡರಿ, 2 ಸಿಕ್ಸರ್ ಸಹಾಯದಿಂದ 275 ಸ್ಟ್ರೈಕ್ ರೇಟ್‌ನಲ್ಲಿ 44 ಅಜೇಯ ರನ್ ಬಾರಿಸಿದರು.

ಶ್ರೇಯಸ್ ಅಯ್ಯರ್ ಚಾಂಪಿಯನ್ಸ್ ಟ್ರೋಫಿಯಲ್ಲಿ ತೋರಿಸಿದ್ದ ಸ್ಥಿರ ಬ್ಯಾಟಿಂಗ್ ಪ್ರದರ್ಶನವನ್ನು ಐಪಿಎಲ್‌ನಲ್ಲೂ ಮುಂದುವರೆಸಿದರು. ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ 42 ಎಸೆತಗಳಲ್ಲಿ 5 ಬೌಂಡರಿ ನೆರವಿನಿಂದ 9 ಸಿಕ್ಸರ್ ಬಾರಿಸಿ ಅಜೇಯ 97 ರನ್ ಬಾರಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು.
ಉತ್ತಮ ಜೊತೆಯಾಟಗಳು
ಸವಾಲಿನ ಮೊತ್ತವನ್ನು ಹಿಂಬಾಲಿಸಿದ ಗುಜರಾತ್ ಟೈಟನ್ಸ್ ಪರ ಸಾಯಿ ಸುದರ್ಶನ್ ಹಾಗೂ ನಾಯಕ ಶುಭಮನ್ ಗಿಲ್ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಈ ಜೊಡಿ ಮೊದಲ ವಿಕೆಟ್‌ಗೆ 35 ಎಸೆತಗಳಲ್ಲಿ 61 ರನ್ ಜೊತೆಯಾಟಗಳ ಕಾಣಿಕೆ ನೀಡಿತು. ಶುಭಮನ್ ಗಿಲ್ 14 ಎಸೆತಗಳಲ್ಲಿ 33 ರನ್ ಸಿಡಿಸಿ ಔಟ್ ಆದರು.
ಎರಡನೇ ವಿಕೆಟ್‌ಗೆ ಸಾಯಿ ಸುದರ್ಶನ್ ಜೊತೆಗೂಡಿದ ಜೋಸ್ ಬಟ್ಲರ್ ಜೋಡಿ ಆರ್ಭಟಿಸಿದರು. ಈ ಜೋಡಿಯನ್ನು ಕಟ್ಟಿ ಹಾಕುವಲ್ಲಿ ಪಂಜಾಬ್ ವಿಫಲವಾಯಿತು. ಈ ಜೋಡಿ 40 ಎಸೆತಗಳಲ್ಲಿ 84 ರನ್ ಸಿಡಿಸಿತು. ಆರಂಭಿಕ ಸಾಯಿ ಸುದರ್ಶನ್ 5 ಬೌಂಡರಿ, 6 ಸಿಕ್ಸರ್ ಸಹಾಯದಿಂದ 74 ರನ್ ಸಿಡಿಸಿ ಅರ್ಷದೀಪ್ ಸಿಂಗ್ ತೋಡಿದ ಖೆಡ್ಡಾಗೆ ಬಲಿಯಾದರು.
ಬಟ್ಲರ್ ಅರ್ಧಶತಕ
ಮೂರನೇ ವಿಕೆಟ್‌ಗೆ ಜೋಸ್ ಬಟ್ಲರ್ ಹಾಗೂ ಶೆರ್ಫೇನ್ ರುದರ್ಫೋರ್ಡ್ ಜೋಡಿ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಈ ಜೋಡಿ 33 ಎಸೆತಗಳಲ್ಲಿ 54 ರನ್ ಗಳ ಜೊತೆಯಾಟದ ಕಾಣಿಕೆ ನೀಡಿತು. ಬಟ್ಲರ್ 33 ಎಸೆತಗಳಲ್ಲಿ 4 ಬೌಂಡರಿ, 2 ಸಿಕ್ಸರ್ ಸಹಾಯದಿಂದ 54 ರನ್ ಸಿಡಿಸಿ ಔಟ್ ಆದರು.
ಕೆಳ ಕ್ರಮಾಂಕದ ಬ್ಯಾಟರ್‌ಗಳು ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಪರಿಣಾಮ ಗುಜರಾತ್ ಟೈಟಾನ್ಸ್ ಪಂದ್ಯವನ್ನು ಸೋತಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications