ಭಾನುವಾರ ಮೇ 3, ವಾರಂತ್ಯದಲ್ಲಿ ನಡೆಯುವ ಡಬಲ್ ಡಕ್ಕರ್ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 53ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡಗಳು ಮುಖಾಮುಖಿಯಾಗುತ್ತಿವೆ. ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಪಂಜಾಬ್ ಮತ್ತು ಚೆನ್ನೈ ಪಂದ್ಯಕ್ಕೆ ಆತಿಥ್ಯ ವಹಿಸಿದೆ.
ಈಗಾಗಲೇ ಐದು ಪಂದ್ಯಗಳನ್ನು ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 6ನೇ ಗೆಲುವಿನ ಹುಡುಕಾಟದಲ್ಲಿದೆ. ಜೊತೆಗೆ ಪ್ಲೇ ಆಪ್ ರೇಸ್‌ನಲ್ಲಿ ಉಳಿದುಕೊಳ್ಳವ ನಿರೀಕ್ಷೆಯಲ್ಲಿದೆ. ಇನ್ನೊಂದೆಡೆ ಚೆನ್ನೈ ವಿರುದ್ಧ ಪಂಜಾಬ್ ಪಂದ್ಯ ಗೆಲ್ಲುವ ಒತ್ತಾಡದಲ್ಲಿದೆ. ಒಂದು ವೇಳೆ ಚೆನ್ನೈ ಎದುರು ಪಂಜಾಬ್ ಸೋತರೆ ಪ್ಲೇ ಆಪ್ ಕನಸು ಭಗ್ನವಾಗಲಿದೆ.

ಐಪಿಎಲ್ 2024ರಲ್ಲಿ ಉಭಯ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿವೆ. ಮೇ 2 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ನ 49ನೇ ಪಂದ್ಯದಲ್ಲಿ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪಂಜಾಬ್ ಕಿಂಗ್ಸ್ ತಂಡ 7 ವಿಕೆಟ್‌ಗಳಿಂದ ಭರ್ಜರಿಯಾಗಿ ಸೋಲಿಸಿತ್ತು. ಐಪಿಎಲ್ ಟೂರ್ನಿಯಲ್ಲಿ ಈವರೆಗೆ ಒಟ್ಟು 29 ಬಾರಿ ಉಭಯ ತಂಡಗಳು ಮುಖಾಮುಖಿಯಾಗಿವೆ. ಚೆನ್ನೈ ಸೂಪರ್ ಕಿಂಗ್ಸ್ ತಂಡವು 15 ಪಂದ್ಯದಲ್ಲಿ ಗೆಲುವು ಸಾಧಿಸಿದರೆ, ಪಂಜಾಬ್ ಕಿಂಗ್ಸ್ 14 ಬಾರಿ ಜಯ ಕಂಡಿದೆ. ಹೀಗಾಗಿ ಚೆನ್ನೈ ಒಂದು ಪಂದ್ಯ ಮೇಲುಗೈ ಸಾಧಿಸಿದೆ.
ಋತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ತಂಡವು ಪ್ರಸ್ತುತ ಆಡಿರುವ 10 ಪಂದ್ಯಗಳಲ್ಲಿ 5 ಸೋಲು ಮತ್ತು ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಇತ್ತ ಸ್ಯಾಮ್ ಕರ್ರಾನ್ ಮುನ್ನೆಡೆಸುತ್ತಿರುವ ಪಂಜಾಬ್ ಆಡಿರುವ 10 ಪಂದ್ಯಗಳಲ್ಲಿ 4ರಲ್ಲಿ ಗೆದ್ದು, 6ರಲ್ಲಿ ಸೋತಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್ 2024ರ ರೋಚಕ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.

ಪಂಜಾಬ್ ಕಿಂಗ್ಸ್ ಸಂಭ್ಯಾವ ತಂಡ : ಜಾನಿ ಬೈರ್‌ಸ್ಟೋವ್, ಸ್ಯಾಮ್ ಕರ್ರಾನ್ (ನಾಯಕ), ರಿಲೀ ರೊಸೊವ್, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಅಶುತೋಷ್ ಶರ್ಮಾ, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಹಾರ್, ಅರ್ಶ್‌ದೀಪ್ ಸಿಂಗ್.
ಚೆನ್ನೈ ಸೂಪರ್ ಕಿಂಗ್ಸ್ ಸಂಭ್ಯಾವ ತಂಡ : ಅಜಿಂಕ್ಯ ರಹಾನೆ, ರುತುರಾಜ್ ಗಾಯಕ್ವಾಡ್ (ನಾಯಕ), ಡ್ಯಾರಿಲ್ ಮಿಚೆಲ್, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ರಿಚರ್ಡ್ ಗ್ಲೀಸನ್, ತುಷಾರ ದೇಶಪಾಂಡೆ.