Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

PBKS vs CSK IPL 2024: ಪಂಜಾಬ್‌-ಚೆನ್ನೈ ನಡುವೆ ಕಾದಾಟ; ಟಾಸ್, ತಂಡದ‌ ವರದಿ

ಭಾನುವಾರ ಮೇ 3 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌)ನ 53ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್‌) ಎದುರು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡವು ಆಡುತ್ತಿದೆ. ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂ ಪಂಜಾಬ್‌ ಮತ್ತು ಚೆನ್ನೈ ಪಂದ್ಯ ಆರಂಭವಾಗಿದೆ.

ಮೊದಲು ಟಾಸ್‌ ಗೆದ್ದ ಪಂಜಾಬ್‌ ಕಿಂಗ್ಸ್‌ ತಂಡದ ನಾಯಕ ಸ್ಯಾಮ್‌ ಕರ್ರನ್‌ ಬೌಲಿಂಗ್‌ ಆಯ್ಕೆ ಮಾಡಿದ್ದಾರೆ. ಹೀಗಾಗಿ ಋತುರಾಜ್‌ ಗಾಯಕ್ವಾಡ್‌ ನೇತೃತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಮೊದಲು ಬ್ಯಾಟಿಂಗ್‌ ಮಾಡಲಿದೆ.

Punjab Kings vs Chennai Super Kings Preview IPL 2024 Toss Report

ಚೆನ್ನೈ ತಂಡವು ಪ್ರಸ್ತುತ ಐಪಿಎಲ್‌ನಲ್ಲಿ ಆಡಿರುವ 10 ಪಂದ್ಯಗಳಲ್ಲಿ 5 ಸೋಲು ಮತ್ತು 5 ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಇತ್ತ ಸ್ಯಾಮ್‌ ಕರ್ರಾನ್‌ ಮುನ್ನೆಡೆಸುತ್ತಿರುವ ಪಂಜಾಬ್‌ ಆಡಿರುವ 10 ಪಂದ್ಯಗಳಲ್ಲಿ 4ರಲ್ಲಿ ಗೆದ್ದು, 6ರಲ್ಲಿ ಸೋತಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.

ಪಿಬಿಕೆಸ್‌ vs ಸಿಎಸ್‌ಕೆ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ :

ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್ 2024ರ ರೋಚಕ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.

ಪಿಬಿಕೆಸ್‌ vs ಸಿಎಸ್‌ಕೆ ಆಡುವ 11ರ ಬಳಗ :

ಪಂಜಾಬ್‌ ಕಿಂಗ್ಸ್‌ ತಂಡ: ಜಾನಿ ಬೈರ್‌ಸ್ಟೋವ್, ರಿಲೀ ರೊಸೊವ್, ಶಶಾಂಕ್ ಸಿಂಗ್, ಸ್ಯಾಮ್ ಕರ್ರಾನ್(ನಾಯಕ), ಜಿತೇಶ್ ಶರ್ಮಾ(ವಿ.ಕೀ), ಅಶುತೋಷ್ ಶರ್ಮಾ, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ರಾಹುಲ್ ಚಾಹರ್, ಕಗಿಸೊ ರಬಾಡ, ಅರ್ಶ್‌ದೀಪ್ ಸಿಂಗ್.

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ: ಅಜಿಂಕ್ಯ ರಹಾನೆ, ರುತುರಾಜ್ ಗಾಯಕ್ವಾಡ್ (ನಾಯಕ), ಡೇರಿಲ್ ಮಿಚೆಲ್, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿ.ಕೀ), ಮಿಚೆಲ್ ಸ್ಯಾಂಟ್ನರ್, ಶಾರ್ದೂಲ್ ಠಾಕೂರ್, ರಿಚರ್ಡ್ ಗ್ಲೀಸನ್, ತುಷಾರ್ ದೇಶಪಾಂಡೆ.

Story first published: Sunday, May 5, 2024, 15:10 [IST]
Other articles published on May 5, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+