T20 World Cup: ಫೈನಲ್ ಬಳಿಕ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ಮತ್ತೊಬ್ಬ ಸ್ಟಾರ್ ಕ್ರಿಕೆಟಿಗ ದೂರ
ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ವಿಶ್ವದ ಶ್ರೇಷ್ಠ ಬ್ಯಾಟರ್‌ಗಳಲ್ಲಿ ಒಬ್ಬರು. ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾವನ್ನು ಚಾಂಪಿಯನ್ ಮಾಡಿದ ನಂತರ ಇಬ್ಬರೂ ಆಟಗಾರರು ಚುಟುಕು ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು.
ಇವರಿಬ್ಬರನ್ನು ಹೊರತು ಪಡಿಸಿ ವಿಶ್ವಕಪ್ ಫೈನಲ್ ಬಳಿಕ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ಮತ್ತೊಬ್ಬ ಸ್ಟಾರ್ ಕ್ರಿಕೆಟಿಗ ದೂರ ಸರಿದ್ದಾರೆ. ಆದರೆ ಅವರು ಟೀಮ್ ಇಂಡಿಯಾದ ಆಟಗಾರರಲ್ಲ.
ದಕ್ಷಿಣ ಆಫ್ರಿಕಾದ ಸ್ಟಾರ್ ವಿಕೆಟ್‌ಕೀಪರ್- ಬ್ಯಾಟರ್ ಕ್ವಿಂಟನ್ ಡಿ ಕಾಕ್ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ಹೊರಗುಳಿದಿದ್ದಾರೆ.

ದಕ್ಷಿಣ ಆಫ್ರಿಕಾ ತಂಡ ಪ್ರಕಟ
ಸೆಪ್ಟೆಂಬರ್ 18 ರಿಂದ ದಕ್ಷಿಣ ಆಫ್ರಿಕಾ ತಂಡವು ಅಫ್ಘಾನಿಸ್ತಾನ ಮತ್ತು ಐರ್ಲೆಂಡ್ ವಿರುದ್ಧ ಸೀಮಿತ ಸರಣಿಗಳನ್ನು ಆಡಲಿದೆ. ಇದಕ್ಕಾಗಿ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ತಂಡವನ್ನು ಪ್ರಕಟಿಸಿದೆ. ದಕ್ಷಿಣ ಆಫ್ರಿಕಾ ತಂಡವು ಐರ್ಲೆಂಡ್ ವಿರುದ್ಧ 2 ಟಿ20 ಪಂದ್ಯಗಳ ಸರಣಿ ಮತ್ತು ಯುಎಇಯಲ್ಲಿ ಅಫ್ಘಾನಿಸ್ತಾನ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ.
ಈ ಎರಡೂ ಸರಣಿಗಳಲ್ಲಿ ತಂಡದ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಆದರೆ ಕ್ವಿಂಟನ್ ಡಿ ಕಾಕ್ ಹೆಸರು ನೋಡದೇ ಅಭಿಮಾನಿಗಳು ಕಂಗಾಲಾಗಿದ್ದಾರೆ. ಡಿ ಕಾಕ್ ಈಗಾಗಲೇ ಟೆಸ್ಟ್ ಮತ್ತು ಏಕದಿನ ಪಂದ್ಯಗಳಿಂದ ನಿವೃತ್ತಿ ಹೊಂದಿದ್ದು, ವಿಶ್ವಕಪ್ ಫೈನಲ್ ಬಳಿಕ ಟಿ20ಯಿಂದ ದೂರ ಉಳಿದಿರವುದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.
ಕೋಚ್ ಹೇಳಿದ್ದೇನು?
ಟಿ20 ವಿಶ್ವಕಪ್ ಫೈನಲ್ ಬಳಿಕ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ಕ್ವಿಂಟನ್ ಡಿ ಕಾಕ್ ದೂರ ಇರುವ ಬಗ್ಗೆ ದಕ್ಷಿಣ ಆಫ್ರಿಕಾ ತಂಡ ಹೆಡ್ ಕೋಚ್ ರಾಬ್ ವಾಲ್ಟರ್ ಅವರನ್ನು ಕೇಳಿದಾಗ, ಅವರ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ನನ್ನ ಮತ್ತು ಅವರ ನಡುವೆ ದಕ್ಷಿಣ ಆಫ್ರಿಕಾ ಪರ ಆಡಬೇಕೆ ಅಥವಾ ಬೇಡವೇ ಎಂಬ ಯಾವುದೇ ಚರ್ಚೆ ನಡೆದಿಲ್ಲ. ಅವರು ಆಟವಾಡಲು ಬಯಸಿದಾಗ ನನ್ನನ್ನು ಸಂಪರ್ಕಿಸಬಹುದು ನಾನು ಅವಕಾಶ ನೀಡುತ್ತೇನೆ ಎಂದಿದ್ದಾರೆ.
ಈಗ ದಕ್ಷಿಣ ಆಫ್ರಿಕಾ ತಂಡದ ಕೋಚ್ ಹೇಳಿಕೆಯಿಂದ ಅಭಿಮಾನಿಗಳು ಮತ್ತಷ್ಟು ಗೊಂದಲಕ್ಕೆ ಒಳಗಾಗಿದ್ದಾರೆ. ಇನ್ನು ದಕ್ಷಿಣ ಆಫ್ರಿಕಾ ಪರ ಡಿ ಕಾಕ್ ಯಾವಾಗ ಕಾಣಿಸಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ಏಕದಿನ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ
ಭಾರತದಲ್ಲಿ ನಡೆದ 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಡಿ ಕಾಕ್ ದಕ್ಷಿಣ ಆಫ್ರಿಕಾ ತಂಡದ ನಾಯಕತ್ವ ವಹಿಸಿದ್ದರು. ಅವರ ನೇತೃತ್ವದಲ್ಲಿ ಹರಿಣಗಳ ಪಡೆ ಟೂರ್ನಿಯುದಕ್ಕೂ ಭರ್ಜರಿ ಪ್ರದರ್ಶನ ನೀಡಿತ್ತು. ಡಿ ಕಾಕ್ ಕೂಡ ಉತ್ತಮ ರನ್ ಕಲೆ ಹಾಕಿದ್ದರು.
ಆದರೆ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ ಸೋಲು ಕಂಡಿತ್ತು. ಇತ್ತ ಒಂದೇ ಆವೃತ್ತಿಯಲ್ಲಿ ದಕ್ಷಿಣ ಆಫ್ರಿಕಾ ಪರ ಡಿ ಕಾಕ್ (594 ರನ್) ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications