ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟೀಕೆಗಳ ನಡುವೆ ಕೋಚ್ ರಾಹುಲ್ ದ್ರಾವಿಡ್‌ಗೆ ಬೆಂಬಲ ವ್ಯಕ್ತಪಡಿಸಿದ ಅಶ್ವಿನ್

R Ashwin Backs Rahul Dravid For Takes Break From India vs New Zealand Series

ಭಾರತ ನ್ಯೂಜಿಲೆಂಡ್ ಪ್ರವಾಸದ ವೇಳೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ವಿಶ್ರಾಂತಿ ಪಡೆಯುವ ನಿರ್ಧಾರಕ್ಕೆ ರವಿಶಾಸ್ತ್ರಿ ಟೀಕೆ ಮಾಡಿದ್ದರು. ಆದರೆ, ಭಾರತದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ರಾಹುಲ್ ದ್ರಾವಿಡ್ ಬೆಂಬಲಕ್ಕೆ ನಿಂತಿದ್ದಾರೆ.

ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ಗಾಗಿ ತಯಾರಿ ನಡೆಸುವಾಗ ದ್ರಾವಿಡ್ ಮತ್ತು ತಂಡದ ಆಟಗಾರರು ಮಾನಸಿಕ ಮತ್ತು ದೈಹಿಕವಾಗಿ ಸಾಕಷ್ಟು ದಣಿದಿದ್ದಾರೆ, ಆದ್ದರಿಂದಲೇ ದ್ರಾವಿಡ್ ಮತ್ತು ಇತರೆ ಸಹಾಯಕ ಸಿಬ್ಬಂದಿ ವಿಶ್ರಾಂತಿ ಪಡೆದಿದ್ದಾರೆ ಎಂದು ಹೇಳಿದರು.

ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (ಎನ್‌ಸಿಎ) ಪ್ರಸ್ತುತ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ನ್ಯೂಜಿಲೆಂಡ್ ಪ್ರವಾಸದಲ್ಲಿ ಭಾರತ ತಂಡದ ಕೋಚ್ ಆಗಿದ್ದಾರೆ. ಹೃಷಿಕೇಶ್ ಕಾನಿಟ್ಕರ್ ಬ್ಯಾಟಿಂಗ್ ಕೋಚ್ ಆಗಿದ್ದು, ಸಾಯಿರಾಜ್ ಬಹುತಲೆ ಬೌಲಿಂಗ್ ಕೋಚ್ ಆಗಿ ಕೆಲಸ ಮಾಡುತ್ತಿದ್ದು, ಮುನಿಶ್ ಬಾಲಿ ಫೀಲ್ಡಿಂಗ್ ಕೋಚ್ ಆಗಿದ್ದಾರೆ.

Ind vs Nz 2nd T20: ಪಿಚ್ ರಿಪೋರ್ಟ್, ಹೆಡ್ ಟು ಹೆಡ್ ರೆಕಾರ್ಡ್, ಸಂಭಾವ್ಯ ಪ್ಲೇಯಿಂಗ್ 11Ind vs Nz 2nd T20: ಪಿಚ್ ರಿಪೋರ್ಟ್, ಹೆಡ್ ಟು ಹೆಡ್ ರೆಕಾರ್ಡ್, ಸಂಭಾವ್ಯ ಪ್ಲೇಯಿಂಗ್ 11

ಆಸ್ಟ್ರೇಲಿಯಾ ಟಿ20 ವಿಶ್ವಕಪ್ ನಂತರ ಹಿರಿಯ ಆಟಗಾರರಿಗೂ ಕೂಡ ನ್ಯೂಜಿಲೆಂಡ್ ಪ್ರವಾಸದಿಂದ ವಿಶ್ರಾಂತಿ ನೀಡಲಾಗಿದೆ. ಹಲವು ಯುವ ಆಟಗಾರರು ನ್ಯೂಜಿಲೆಂಡ್ ವಿರುದ್ಧದ ಟಿ20 ಮತ್ತು ಏಕದಿನ ಸರಣಿಯಲ್ಲಿ ಅವಕಾಶ ಪಡೆದಿದ್ದಾರೆ. ಆದರೆ, ಕೋಚ್ ದ್ರಾವಿಡ್ ಬಗ್ಗೆ ಮಾತ್ರ ಸಾಕಷ್ಟು ಟೀಕೆ ವ್ಯಕ್ತವಾಗುತ್ತಿದೆ.

ಬಾಂಗ್ಲಾದೇಶ ಪ್ರವಾಸ ಮಾಡಲಿದೆ ಟೀಂ ಇಂಡಿಯಾ

ಬಾಂಗ್ಲಾದೇಶ ಪ್ರವಾಸ ಮಾಡಲಿದೆ ಟೀಂ ಇಂಡಿಯಾ

ಟಿ20 ವಿಶ್ವಕಪ್‌ಗಾಗಿ ತಂಡದ ಆಟಗಾರರು ಮತ್ತು ಸಿಬ್ಬಂದಿ ಸಾಕಷ್ಟು ಕಠಿಣ ಪರಿಶ್ರಮ ಪಟ್ಟಿದ್ದಾರೆ. ನಾನು ಅವರ ಪರಿಶ್ರಮವನ್ನು ಹತ್ತಿರದಿಂದ ನೋಡಿರುವ ಕಾರಣ ಇದನ್ನು ಹೇಳುತ್ತಿದ್ದೇನೆ ಎಂದು ಹೇಳಿದರು.

ನ್ಯೂಜಿಲೆಂಡ್ ಪ್ರವಾಸದಲ್ಲಿ ಹಾರ್ದಿಕ್ ಪಾಂಡ್ಯ ಟಿ20 ತಂಡಕ್ಕೆ ನಾಯಕನಾಗಿದ್ದರೆ, ಏಕದಿನ ಸರಣಿಗೆ ಶಿಖರ್ ಧವನ್ ನಾಯಕರಾಗಿದ್ದಾರೆ. ನ್ಯೂಜಿಲೆಂಡ್ ಪ್ರವಾಸದ ನಂತರ ಭಾರತ ತಂಡ ಟೆಸ್ಟ್ ಮತ್ತು ಏಕದಿನ ಸರಣಿಗಾಗಿ ಬಾಂಗ್ಲಾದೇಶಕ್ಕೆ ತೆರಳಲಿದೆ, ಆದ್ದರಿಂದಲೇ ದ್ರಾವಿಡ್ ಮತ್ತು ತಂಡ ವಿರಾಮ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

ಟೀಮ್ ಇಂಡಿಯಾ ಆಯ್ಕೆ ಮಂಡಳಿ ಕಿತ್ತೆಸೆದ ಬಿಸಿಸಿಐನಿಂದ ಮತ್ತೊಂದು ಮಹತ್ವದ ನಿರ್ಧಾರ?

ಹಲವು ಸರಣಿಗಳನ್ನು ಆಡಲಿದೆ ಟೀಂ ಇಂಡಿಯಾ

ಹಲವು ಸರಣಿಗಳನ್ನು ಆಡಲಿದೆ ಟೀಂ ಇಂಡಿಯಾ

"ಟಿ20 ವಿಶ್ವಕಪ್‌ನ ಪ್ರತಿ ಪಂದ್ಯಕ್ಕಾಗಿ ಅವರು ಸಾಕಷ್ಟು ಯೋಜನೆಗಳನ್ನು ಮಾಡಿದ್ದರು. ಒಂದು ತಿಂಗಳು ಸತತ ಓಡಾಟದಿಂದ ಬಳಲಿದ್ದಾರೆ. ಅವರಿಗೆ ವಿಶ್ರಾಂತಿಯ ಅಗತ್ಯವಿದೆ. ನ್ಯೂಜಿಲೆಂಡ್ ಸರಣಿ ಮುಗಿದ ನಂತರ ಬಾಂಗ್ಲಾದೇಶಕ್ಕೆ ಪ್ರವಾಸ ಮಾಡಬೇಕಿದೆ, ಸತತವಾಗಿ ಸರಣಿಗಳನ್ನು ಆಡಬೇಕಿದೆ" ಎಂದು ಸಮರ್ಥನೆ ನೀಡಿದರು.

2023ರಲ್ಲಿ ಏಕದಿನ ವಿಶ್ವಕಪ್ ನಡೆಯುವುದರಿಂದ ಅದಕ್ಕೂ ಮುನ್ನ ಭಾರತ ತಂಡ 25 ಏಕದಿನ ಪಂದ್ಯಗಳನ್ನು ಆಡಲಿದೆ. ಬಾಂಗ್ಲಾದೇಶದ ನಂತರ, ಶ್ರೀಲಂಕಾ, ಆಸ್ಟ್ರೇಲಿಯಾ ವಿರುದ್ಧ ಸರಣಿಗಳನ್ನು ಆಡಲಿದೆ.

ಕೋಚ್ ದ್ರಾವಿಡ್ ಬಗ್ಗೆ ರವಿಶಾಸ್ತ್ರಿ ಟೀಕೆ

ಕೋಚ್ ದ್ರಾವಿಡ್ ಬಗ್ಗೆ ರವಿಶಾಸ್ತ್ರಿ ಟೀಕೆ

ಭಾರತದ ಮಾಜಿ ಕೋಚ್ ರವಿಶಾಸ್ತ್ರಿ, ರಾಹುಲ್ ದ್ರಾವಿಡ್ ಮತ್ತು ಸಹಾಯಕ ಸಿಬ್ಬಂದಿಗೆ ವಿಶ್ರಾಂತಿ ನೀಡುವುದು ಉತ್ತಮ ನಿರ್ಧಾರವಲ್ಲ ಎಂದು ಟೀಕಿಸಿದ್ದರು. ಕೋಚ್ ಮತ್ತು ಅವರ ಸಿಬ್ಬಂದಿ ಹೀಗೆ ವಿಶ್ರಾಂತಿ ಪಡೆಯುವುದು ಸರಿಯಾದ ನಿರ್ಧಾರವಲ್ಲ ಎಂದು ಹೇಳಿದ್ದರು.

ಏಪ್ರಿಲ್-ಮೇ ತಿಂಗಳಿನಲ್ಲಿ ಐಪಿಎಲ್ ನಡೆಯುವುದರಿಂದ ಭಾರತ ತಂಡ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡುವುದಿಲ್ಲ, ಆ ಸಮಯದಲ್ಲಿ ಹೇಗಿದ್ದರೂ ಕೋಚ್ ಮತ್ತು ಸಿಬ್ಬಂದಿಗೆ ವಿಶ್ರಾಂತಿ ಸಿಗುವುದರಿಂದ ಈಗ ವಿಶ್ರಾಂತಿ ಪಡೆಯುತ್ತಿರುವುದಕ್ಕೆ ಟೀಕೆ ಮಾಡಿದ್ದರು.

Story first published: Saturday, November 19, 2022, 16:15 [IST]
Other articles published on Nov 19, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X