ಪಾಕಿಸ್ತಾನದ ಯಾಸಿರ್ ಕೆಳಕ್ಕೆ ಹಾಕಿ ಮೇಲಕ್ಕೇರಿದ ಅಶ್ವಿನ್
ಬೆಂಗಳೂರು, ಜುಲೈ27 : ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 7 ವಿಕೆಟ್ ಕಬಳಿಸಿದ ಭಾರತದ ಆಫ್ ಸ್ಪಿನ್ನರ್ ಆರ್ ಅಶ್ವಿನ್ ಅವರು ಐಸಿಸಿ ಬೌಲರ್ ಗಳ ಶ್ರೇಯಾಂಕ ಪಟ್ಟಿಯಲ್ಲಿ ಮತ್ತೊಮ್ಮೆ ಅಗ್ರಸ್ಥಾನಕ್ಕೇರಿದ್ದಾರೆ. ಈ ಮೂಲಕ ಪಾಕಿಸ್ತಾನದ ಸ್ಪಿನ್ನರ್ ಯಾಸಿರ್ ಶಾರನ್ನು ಎರಡನೇ ಸ್ಥಾನಕ್ಕೆ ದೂಡಿದ್ದಾರೆ.
ವಿಂಡೀಸ್ ವಿರುದ್ಧದ ಆಂಟಿಗ್ವಾ ಟೆಸ್ಟ್ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಗಳಿಸಿದ ಅಶ್ವಿನ್ ಅವರು 2015 ರ ವರ್ಷಾಂತ್ಯದ ತನಕ ಹಾಗೂ ಪಾಕಿಸ್ತಾನದ ಇಂಗ್ಲೆಂಡ್ ಟೆಸ್ಟ್ ಸರಣಿ ಆರಂಭದ ತನಕ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರು.

ಗಾಯದ ಸಮಸ್ಯೆಯಿಂದ ಪಾಕಿಸ್ತಾನದ ಸರಣಿ ಮಿಸ್ ಮಾಡಿಕೊಂಡಿರುವ ಇಂಗ್ಲೆಂಡಿನ ಬೌಲರ್ ಜೇಮ್ಸ್ ಆಂಡರ್ಸನ್, ಸ್ಟುವರ್ಟ್ ಬ್ರಾಡ್ ಹಾಗೂ ಡೇಲ್ ಸ್ಟೈನ್ ಟಾಪ್ 5 ಸ್ಥಾನಗಳಲ್ಲಿದ್ದಾರೆ.
ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಸ್ಟೀವ್ ಸ್ಮಿತ್ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಗಳಿಸಿದ ವಿರಾಟ್ ಕೊಹ್ಲಿ ಅವರು ಎರಡು ಸ್ಥಾನ ಮೇಲಕ್ಕೇರಿ 12ನೇ ಸ್ಥಾನದಲ್ಲಿದ್ದಾರೆ. ಇದೇ ಪಂದ್ಯದಲ್ಲಿ ಶತಕ ಸಿಡಿಸಿದ ಅಶ್ವಿನ್ ಅವರು ಬ್ಯಾಟಿಂಗ್ ಕ್ರಮಾಂಕದಲ್ಲಿ 3 ಸ್ಥಾನ ಏರಿಕೆ ಕಂಡು 45ನೇ ಸ್ಥಾನಕ್ಕೇರಿದ್ದಾರೆ. (ಪಿಟಿಐ)
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications