ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಕೌಂಟಿಯಲ್ಲಿ ಆಡಲು ಅಶ್ವಿನ್ ಸಿದ್ಧತೆ

R Ashwin may play a match for Surrey before Tests series against England

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಗೆ ಇನ್ನು ಕೂಡ ಕೆಲ ದಿನಗಳ ವಿರಾಮವಿದೆ. ಭಾರತೀಯ ಕ್ರಿಕೆಟ್ ತಂಡದ ಆಟಗಾರರು ಸದ್ಯ ಬಿಡುವಿನಲ್ಲಿದ್ದು ರಜೆಯ ಅವಧಿಯನ್ನು ಕಳೆಯುತ್ತಿದ್ದಾರೆ. ಈ ಅವಧಿಯನ್ನು ಕೌಂಟಿ ಕ್ರಿಕೆಟ್ ಆಡುವ ಮೂಲಕ ಸದುಪಯೋಗಪಡಿಸಿಕೊಳ್ಳಲು ಟೀಮ್ ಇಂಡಿಯಾದ ಅನುಭವಿ ಸ್ಪಿನ್ನರ್ ಆರ್ ಅಶ್ವಿನ್ ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಕ್ರಿಕ್‌ಇನ್ಫೋ ವರದಿಯನ್ನು ಮಾಡಿದ್ದು ಸರ್ರೆ ತಂಡದ ಪರವಾಗಿ ಆರ್ ಅಶ್ವಿನ್ ಮುಂದಿನ ಪಂದ್ಯವನ್ನು ಆಡಲಿದ್ದಾರೆ ಎನ್ನಲಾಗಿದೆ. ಜುಲೈ 11ರಿಂದ ಸರ್ರೆ ತಂಡ ಸೋಮರ್ಸೆಟ್ ವಿರುದ್ಧ ಪಂದ್ಯವನ್ನು ಆಡಲಿದೆ. ಓವಲ್‌ನಲ್ಲಿ ನಡೆಯುವ ಈ ಪಂದ್ಯದಲ್ಲಿ ಅಶ್ವಿನ್ ಆಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಆರ್ ಅಶ್ವಿನ್ ಈ ಹಿಂದೆ ನಾಟಿಂಗ್‌ಹ್ಯಾಮ್‌ಶೈರ್ ಹಾಗೂ ವರ್ಸೆಸ್ಟರ್‌ಶೈರ್ ಪರವಾಗಿ ಕೌಂಟಿ ಕ್ರಿಕೆಟ್ ಆಡಿದ ಅನುಭವ ಹೊಂದಿದ್ದಾರೆ.

ವಿರಾಟ್ ಕೊಹ್ಲಿ vs ರೋಹಿತ್ ಶರ್ಮಾ: ಭಾರತದ ನಾಯಕರಾಗಿ ಯಾರು ಮೇಲು ಗೊತ್ತಾ?!ವಿರಾಟ್ ಕೊಹ್ಲಿ vs ರೋಹಿತ್ ಶರ್ಮಾ: ಭಾರತದ ನಾಯಕರಾಗಿ ಯಾರು ಮೇಲು ಗೊತ್ತಾ?!

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಸೋತ ಬಳಿಕ ಟೀಮ್ ಇಂಡಿಯಾ ಆಟಗಾರರು 20 ದಿನಗಳ ವಿಶ್ರಾಂತಿಯಲ್ಲಿದ್ದಾರೆ. ಜುಲೈ 15 ರಿಂದು ಭಾರತ ತಂಡದ ಆಟಗಾರರ ಮತ್ತೆ ಒಟ್ಟಾಗಲಿದ್ದು ಅಭ್ಯಾಸವನ್ನು ಆರಂಬಿಸಲಿದ್ದಾರೆ. ಆದಕ್ಕೂ ಮುನ್ನ ಕೌಂಟಿ ಕ್ರಿಕೆಟ್‌ನಲ್ಲಿ ಆಡುವ ಮೂಲಕ ಇಂಗ್ಲೆಂಡ್ ವಿರುದ್ಧದ ಸರಣಿಗೆ ಸಿದ್ಧತೆ ನಡೆಸುವ ಯೋಜನೆಯಲ್ಲಿ ಆರ್ ಅಶ್ವಿನ್ ಇದ್ದಾರೆ.

ಆರ್ ಅಶ್ವಿನ್ ಹಾಗೂ ಸರ್ರೆ ಮ್ಯಾನೇಜ್‌ಮೆಂಟ್ ಈಗಾಗಲೇ ಒಪ್ಪಂದವನ್ನು ಮಾಡಿಕೊಂಡಿದೆ ಎಂದು ಕ್ರಿಕ್ ಇನ್‌ಫೋ ವರದಿ ಮಾಡಿದೆ. ಹೀಗಾಗಿ ಆರ್ ಅಶ್ವಿನ್ ಕೌಂಟಿ ಕ್ರಿಕೆಟ್‌ನಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಲಾಗಿದೆ.

ಇನ್ನು ಇಂಗ್ಲೆಂಡ್ ವಿರುದ್ಧದ ಸರಣಿಗೂ ಅಭ್ಯಾಸ ಪಂದ್ಯಕ್ಕಾಗಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬೇಡಿಕೆಯನ್ನು ಇಟ್ಟಿದ್ದರು. ಆರಂಭದಲ್ಲಿ ಇದಕ್ಕೆಪೂರಕ ಸ್ಪಂದನೆ ದೊರೆಯದಿದ್ದರೂ ನಂತರ ಕೌಂಟಿ ಇಲೆವೆನ್ ವಿರುದ್ಧ ಅಭ್ಯಾಸ ಪಂದ್ಯ ನಡೆಸಲಾಗುತ್ತದೆ ಎಂದಿದೆ. ಆದರೆ ಈ ಪಂದ್ಯದ ದಿನಾಂಕದ ಬಗ್ಗೆ ಇನ್ನೂ ಸ್ಪಷ್ಟನೆಯಿಲ್ಲ.

ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ರಾಹುಲ್ (ವಿಕೆಟ್ ಕೀಪರ್), ಶುಬ್ಮನ್ ಗಿಲ್ (ಗಾಯಗೊಂಡಿದ್ದು ಸರಣಿಯಿಂದ ಹೊರಗುಳಿಯುವ ಸಾಧ್ಯತೆಯಿದೆ), ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ, ಮಾಯಾಂಕ್ ಅಗರ್ವಾಲ್, ಹನುಮಾ ವಿಹಾರಿ, ವಾಷಿಂಗ್ಟನ್ ಸುಂದರ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಆಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದುಲ್ ಠಾಕೂರ್, ಉಮೇಶ್ ಯಾದವ್.

Story first published: Wednesday, July 7, 2021, 17:36 [IST]
Other articles published on Jul 7, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X