ICC Awards: ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟ್ ಆಟಗಾರರ ಪ್ರಶಸ್ತಿ ರೇಸ್‌ನಲ್ಲಿ ಅಶ್ವಿನ್
ಐಸಿಸಿ ಪ್ರತಿ ವರ್ಷ ನೀಡುವ ಪ್ರಶಸ್ತಿಗೆ ಆಟಗಾರರನ್ನು ನಾಮ ನಿರ್ದೇಶನ ಮಾಡಿದೆ. ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟ್ ಆಟಗಾರ ಪ್ರಶಸ್ತಿಯನ್ನು ಪಡೆಯಲು ನಾಲ್ಕು ಆಟಗಾರರು ಸಜ್ಜಾಗಿದ್ದಾರೆ. ಈ ರೇಸ್‌ನಲ್ಲಿ ಮೂವರು ಸ್ಟಾರ್ ಬ್ಯಾಟರ್‌ಗಳಿದ್ದು, ಒಬ್ಬ ಆಲ್ ರೌಂಡರ್ ಸೇರಿದ್ದಾರೆ.
ವರ್ಷದ ಟೆಸ್ಟ್ ಆಟಗಾರರ ಪ್ರಶಸ್ತಿ ಪಡೆಯುವ ರೇಸ್‌ನಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ಹೆಸರು ಸಹ ಸೇರಿದೆ. ಇವರು 2016 ಹಾಗೂ 2021ರಲ್ಲೂ ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದರು.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಪರ ಅಮೋಘ ಪ್ರದರ್ಶನ ನೀಡಿದ ಬೌಲರ್. ತವರಿನಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯ ನಾಲ್ಕು ಪಂದ್ಯಗಳಲ್ಲಿ ಅಶ್ವಿನ್ 25 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇವರು ಆಸೀಸ್ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಬೌಲರ್ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದಾರೆ.
ಆರ್‌ಅಶ್ವಿನ್ ಆಡಿದ ಏಳು ಪಂದ್ಯಗಳಲ್ಲಿ 41 ವಿಕೆಟ್ ಪಡೆದು ಪ್ರಶಸ್ತಿ ಪಡೆಯಲು ಮುಂಚೂಣಿಯಲ್ಲಿ ನಿಂತಿದ್ದಾರೆ.
ಟ್ರಾವಿಸ್ ಹೆಡ್
ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್‌ನ ಸೆಮಿಫೈನಲ್ ಹಾಗೂ ಫೈನಲ್‌ನಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ ಟ್ರಾವಿಸ್ ಹೆಡ್ ಪ್ರಶಸ್ತಿ ಪಡೆಯುವ ರೇಸ್‌ನಲ್ಲಿದ್ದಾರೆ. ಇವರು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನಾರಗಿದ್ದಾರು. ಟ್ರಾವಿಡ್ ಹೆಡ್ 12 ಪಂದ್ಯಗಳಲ್ಲಿ 919 ರನ್ ಸಿಡಿಸಿ ಮಿಂಚಿದ್ದಾರೆ.

ಉಸ್ಮಾನ್ ಖವಾಜಾ
ಆಸ್ಟ್ರೇಲಿಯಾದ ಸ್ಟಾರ್ ಆರಂಭಿಕ ಆಟಗಾರ ಉಸ್ಮಾನ್ ಖವಾಜಾ ಸಹ ಈ ವರ್ಷ ಸ್ಥಿರ ಪ್ರದರ್ಶನ ನೀಡಿದ ಆಟಗಾರ. ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಖವಾಜಾ ಭರ್ಜರಿ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದ್ದಾರೆ. ಅಲ್ಲದೆ ಭಾರತ ವಿರುದ್ಧದ ಸರಣಿಯಲ್ಲೂ ಅತಿ ಹೆಚ್ಚು ರನ್ ಸಾಧನೆ ಮಾಡಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಖವಾಜಾ ಸ್ಥಿರ ಪ್ರದರ್ಶನ ನೀಡಿದ್ದಾರೆ. ಅಲ್ಲದೆ 496 ರನ್ ಕಲೆ ಹಾಕಿದ್ದಾರೆ. ಪ್ರಸಕ್ತ ವರ್ಷ ಖವಾಜಾ 1210 ರನ್ ಸಿಡಿಸಿ ಅಬ್ಬರಿಸಿದ್ದಾರೆ.
ಜೋ ರೂಟ್
ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರ ಜೋ ರೂಟ್ ಈ ವರ್ಷ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಕಳೆದ ವರ್ಷ ಆಡಿದ 8 ಪಂದ್ಯಗಳಲ್ಲಿ 787 ರನ್ ಸಾಧನೆ ಮಾಡಿದ್ದಾರೆ. ಅಲ್ಲದೆ 8 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇನ್ನು ಇಂಗ್ಲೆಂಡ್ ತಂಡದ ಮಿಡ್ಲ್ ಆರ್ಡರ್‌ಗೆ ರೂಟ್ ಆಧಾರ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications