ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಇಂಗ್ಲೆಂಡ್‌ಗೆ ಎಚ್ಚರಿಕೆ ಸಂದೇಶ ರವಾನಿಸಿದ ಅಶ್ವಿನ್

ಲಂಡನ್, ಜುಲೈ 14: ಟೀಮ್ ಇಂಡಿಯಾದ ಅನುಭವಿ ಆಟಗಾರ ಆರ್ ಅಶ್ವಿನ್ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಭರ್ಜರಿ ಸಿದ್ಧತೆಯನ್ನು ನಡೆಸಿದ್ದಾರೆ. ಟೆಸ್ಟ್ ಸರಣಿಗೂ ಮುನ್ನ ಸಿಕ್ಕಿದ್ದ ಬಿಡುವಿನ ಅವಧಿಯಲ್ಲಿ ಕೌಂಟಿ ಪಂದ್ಯವೊಂದನ್ನು ಆಡಿ ಆರ್ ಅಶ್ವಿನ್ ಇಂಗ್ಲೆಂಡ್ ವಿರುದ್ಧದ ಸರಣಿಗೆ ಸಿದ್ಧತೆಯನ್ನು ನಡೆಸಿದ್ದಾರೆ. ಈ ಪಂದ್ಯದಲ್ಲಿ ಎದುರಾಳಿ ಇಂಗ್ಲೆಂಡ್‌ಗೆ ಎಚ್ಚರಿಕೆಯ ಸಂದೇಶವನ್ನು ಕೂಡ ಕಳುಹಿಸುವಲ್ಲಿ ಅಶ್ವಿನ್ ಯಶಸ್ವಿಯಾಗಿದ್ದಾರೆ.
ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಆರ್ ಅಶ್ವಿನ್ ಸರ್ರೆ ತಂಡದ ಪರವಾಗಿ ಕಣಕ್ಕಿಳಿದಿದ್ದು ಸೋಮರ್ಸೆಟ್ ತಂಡದ ವಿರುದ್ಧ ಆಡಿದ್ದಾರೆ. ಈ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಆರ್ ಅಶ್ವಿನ್ ಸಾಧಾರಣ ಪ್ರದರ್ಶನವನ್ನು ನೀಡಿದ್ದರು. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಅದ್ಭುತ ದಾಳಿಯನ್ನು ನಡೆಸಿದ್ದು ಐದು ವಿಕೆಟ್‌ಗಳ ಗೊಂಚಲು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಆರ್ ಅಶ್ವಿನ್ ಭರ್ಜರಿ ಸಿದ್ಧತೆ
ಲಂಡನ್‌ನ ಕಿಯಾ ಓವಲ್‌ನಲ್ಲಿ ಈ ಪಂದ್ಯ ನಡೆಯುತ್ತಿದ್ದು ಆರ್ ಅಶ್ವಿನ್ ದಾಳಿಗೆ ಎದುರಾಳಿ ಸೋಮರ್ಸೆಟ್ ತಂಡದ ದಾಂಡಿಗರು ತರೆಗೆಲೆಗಳಂತೆ ವಿಕೆಟ್ ಕಳೆದುಕೊಳ್ಳುತ್ತಿದ್ದಾರೆ. ಸೆಕೆಂಡ್ ಇನ್ನಿಂಗ್ಸ್‌ನಲ್ಲಿ ಲಂಚ್ ವಿರಾಮದ ವೇಳೆಗೆ 13 ಓವರ್‌ಗಳನ್ನು ಆರ್ ಅಶ್ವಿನ್ ಎಸೆದಿದ್ದರು. ಈ ಸಂದರ್ಭದಲ್ಲಿ ಅವರು 23 ರನ್‌ಗಳನ್ನು ನೀಡಿ ಅವರು 5 ವಿಕೆಟ್‌ಗಳನ್ನು ತನ್ನ ಖಾತೆಗೆ ಸೇರಿಸಿಕೊಂಡಿದ್ದರು. ಈ ಮೂಲಕ ಭರ್ಜರಿ ಸಿದ್ಧತೆಯನ್ನು ನಡೆಸಿದ್ದಾರೆ.

ಎರಡನೇ ಇನ್ನಿಂಗ್ಸ್‌ನಲ್ಲಿ ಅಬ್ಬರ
ಮೊದಲ ಇನ್ನಿಂಗ್ಸ್‌ನಲ್ಲಿ ಆರ್ ಅಶ್ವಿನ್ 42 ಓವರ್‌ಗಳನ್ನು ಎಸೆದಿದ್ದು 96 ರನ್‌ಗಳನ್ನು ನೀಡಿದ್ದರು. 9 ಮೇಡನ್ ಓವರ್‌ಗಳನ್ನು ಮಾಡಿದ್ದರಾದರೂ ಒಂದು ವಿಕೆಟ್ ಮಾತ್ರವೇ ಪಡೆಯಲು ಸಾಧ್ಯವಾಗಿತ್ತು. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ತಾನೆಂತಾ ಬೌಲರ್ ಎಂಬುದನ್ನು ಎದುರಾಳಿ ದಾಂಡಿಗರಿಗೆ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

ಆಗಸ್ಟ್ 4 ರಿಂದ ಸರಣಿ ಆರಂಭ
ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿ ಆಗಸ್ಟ್ 4ರಿಂದ ಆರಂಭವಾಗಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಭಾಗವಹಿಸಿದ್ದ ಟೀಮ್ ಇಂಡಿಯಾ ಆಟಗಾರರು ಬಳಿಕ 20 ದಿನಗಳ ವಿರಾಮವನ್ನು ಪಡೆದುಕೊಂಡಿದ್ದರು. ಇಂದು ವಿರಾಮದ ಅವಧಿ ಅಂತ್ಯವಾಗುತ್ತಿದ್ದು ಮತ್ತೆ ಸದಸ್ಯರೆಲ್ಲರೂ ಒಟ್ಟಾಗಲಿದ್ದಾರೆ. ಟೆಸ್ಟ್ ಸರಣಿಯ ಆರಂಭಕ್ಕೂ ಮುನ್ನ ಭಾರತೀಯ ತಂಡದ ಆಟಗಾರರು ಕೌಂಟಿ ಇಲವೆನ್ ತಂಡದ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ಆಡಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications