ಟಿ20 ವಿಶ್ವಕಪ್‌ನಲ್ಲಿ ಈ ಆಟಗಾರನಿಗೆ ಸ್ಥಾನ ನೀಡಿರುವುದು ಆತನ ಸಮಾಧಾನಕ್ಕಷ್ಟೇ!; ಗವಾಸ್ಕರ್ ವ್ಯಂಗ್ಯ

ಸದ್ಯ ಕ್ರಿಕೆಟ್ ಅಭಿಮಾನಿಗಳ ಚಿತ್ತ ಸೆಪ್ಟೆಂಬರ್ 19ರಿಂದ ಯುಎಇಯಲ್ಲಿ ಮುಂದುವರಿಯಲಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯಾರ್ಧದ ಮೇಲಿದೆ. ಹೀಗೆ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಕ್ರಿಕೆಟ್ ಜಗತ್ತಿನಲ್ಲಿ ದೊಡ್ಡ ಮಟ್ಟದ ಸುದ್ದಿ ಮಾಡುತ್ತಿರುವಾಗಲೇ ಇದೇ ಯುಎಇಯಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಲಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಕೂಡ ತಿಂಗಳಿಗೂ ಮೊದಲೇ ಸದ್ದು ಮಾಡಲಾರಂಭಿಸಿದೆ.
ಹೌದು, ಅಕ್ಟೋಬರ್ 17ರಿಂದ ನವೆಂಬರ್ 14ರವರೆಗೆ ಯುಎಇಯಲ್ಲಿ ನಡೆಯಲಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲಿರುವ ವಿವಿಧ ದೇಶಗಳು ತಮ್ಮ ತಂಡದ ಆಟಗಾರರ ಪಟ್ಟಿಯನ್ನು ಇತ್ತೀಚೆಗಷ್ಟೇ ಪ್ರಕಟಿಸಿದ್ದವು. ಹೀಗೆ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ವಿವಿಧ ತಂಡಗಳು ಪ್ರಕಟವಾದ ನಂತರ ಭಾರೀ ದೊಡ್ಡ ಮಟ್ಟದ ಚರ್ಚೆಗೂ ಸಹ ಕಾರಣವಾಗಿದ್ದವು. ಅದರಲ್ಲಿಯೂ ಬಿಸಿಸಿಐ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಿದ ನಂತರ ಈ ಚರ್ಚೆಗಳು ದೊಡ್ಡ ಮಟ್ಟಕ್ಕೆ ತಲುಪಿದವು. ಹಾಗೂ ಟೂರ್ನಿಗೆ ಪ್ರಕಟವಾಗಿರುವ ತಂಡಗಳಲ್ಲಿ ಯಾವ ತಂಡ ಬಲಿಷ್ಠವಾಗಿದೆ, ಯಾವ ತಂಡ ಕಳಪೆ ಆಟಗಾರರಿಂದ ಕೂಡಿದೆ ಮತ್ತು ಯಾವ ತಂಡ ಟ್ರೋಫಿಯನ್ನು ಜಯಗಳಿಸಲಿದೆ ಎಂಬ ಊಹೆಗಳನ್ನು ಮಾಜಿ ಕ್ರಿಕೆಟಿಗರು ಮತ್ತು ಕ್ರಿಕೆಟ್ ಪಂಡಿತರು ಮಾಡತೊಡಗಿದರು.
ಇನ್ನು ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟಿಸಲಾದ ಭಾರತ ತಂಡದಲ್ಲಿ ಅವಕಾಶ ಸಿಗದ ಕೆಲ ಆಟಗಾರರ ಕುರಿತು ಮಾಜಿ ಕ್ರಿಕೆಟಿಗರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರೆ, ಹಲವಾರು ವರ್ಷಗಳ ನಂತರ ಟಿ ಟ್ವೆಂಟಿ ತಂಡದಲ್ಲಿ ಸ್ಥಾನ ಪಡೆದ ಆಟಗಾರರ ಕುರಿತು ಕೂಡ ಕೆಲ ಮಾಜಿ ಕ್ರಿಕೆಟಿಗರು ತುಟಿ ಬಿಚ್ಚಿದ್ದಾರೆ. ಇದೀಗ ಈ ವಿಷಯದ ಕುರಿತಾಗಿ ಭಾರತೀಯ ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೂಡ ಮಾತನಾಡಿದ್ದು ಟೀಮ್ ಇಂಡಿಯಾದ ಓರ್ವ ಆಟಗಾರನಿಗೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಅವಕಾಶ ನೀಡಿರುವುದು ಕೇವಲ ಆತನ ಸಮಾಧಾನಕ್ಕಷ್ಟೇ ಎಂಬರ್ಥದಲ್ಲಿ ಈ ಕೆಳಕಂಡಂತೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ರವಿಚಂದ್ರನ್ ಅಶ್ವಿನ್ ಸಮಾಧಾನಕ್ಕೆ ಟಿ ಟ್ವೆಂಟಿ ವಿಶ್ವಕಪ್ ತಂಡದಲ್ಲಿ ಸ್ಥಾನ
ಇತ್ತೀಚೆಗಷ್ಟೇ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಯಾವುದೇ ಪಂದ್ಯದಲ್ಲಿಯೂ ಕೂಡ ರವಿಚಂದ್ರನ್ ಅಶ್ವಿನ್ ಅವರಿಗೆ ಆಡುವ ಬಳಗದಲ್ಲಿ ಅವಕಾಶವನ್ನು ನೀಡಲಿಲ್ಲ. ಹೀಗಾಗಿ ರವಿಚಂದ್ರನ್ ಅಶ್ವಿನ್ ಅವರನ್ನು ಸಮಾಧಾನಪಡಿಸಲು ಆತನಿಗೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟವಾಗಿರುವ ಭಾರತ ತಂಡದಲ್ಲಿ ಅವಕಾಶವನ್ನು ನೀಡಲಾಗಿದೆ ಅಷ್ಟೇ ಎಂದು ಸುನಿಲ್ ಗವಾಸ್ಕರ್ ವ್ಯಂಗ್ಯವಾಡಿದ್ದಾರೆ.

ತಂಡದಲ್ಲಿ ಅವಕಾಶ ಸಿಕ್ಕಿದೆ ಆದರೆ ಆಡುವ ಬಳಗದಲ್ಲಿ ಅವಕಾಶ ಸಿಗಲಿದೆಯಾ?
ಇನ್ನೂ ಮುಂದುವರೆದು ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟಿಸಲಾಗಿರುವ ಭಾರತ ತಂಡದಲ್ಲಿ ರವಿಚಂದ್ರನ್ ಅಶ್ವಿನ್ ಅವರಿಗೆ ಅವಕಾಶ ಸಿಕ್ಕಿರುವುದರ ಕುರಿತು ಮಾತನಾಡಿರುವ ಸುನಿಲ್ ಗವಾಸ್ಕರ್ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ರವಿಚಂದ್ರನ್ ಅಶ್ವಿನ್ ಅವರಿಗೆ ಆಡುವ ಬಳಗದಲ್ಲಿ ಸ್ಥಾನ ಸಿಗುವುದರ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸರಣಿಗೆ ಪ್ರಕಟವಾಗಿದ್ದ ಭಾರತ ತಂಡದಲ್ಲಿ ರವಿಚಂದ್ರನ್ ಅಶ್ವಿನ್ ಅವರನ್ನು ಆಯ್ಕೆ ಮಾಡಲಾಗಿತ್ತು ಆದರೆ ಆಡುವ ಬಳಗದಲ್ಲಿ ಮಾತ್ರ ಅವಕಾಶವನ್ನು ನೀಡಲಿಲ್ಲ. ಅದೇ ರೀತಿ ಟಿ ಟ್ವೆಂಟಿ ವಿಶ್ವಕಪ್ ತಂಡದಲ್ಲಿ ಈಗ ರವಿಚಂದ್ರನ್ ಅಶ್ವಿನ್ ಅವರಿಗೆ ಸ್ಥಾನ ನೀಡಿದ್ದು ಆಡುವ ಬಳಗದಲ್ಲಿ ಅವಕಾಶ ಸಿಗಲಿದೆಯಾ ಎಂಬುದಕ್ಕೆ ಕಾಲವೇ ಉತ್ತರಿಸಬೇಕಿದೆ ಎಂದು ಸುನೀಲ್ ಗವಾಸ್ಕರ್ ಹೇಳಿದ್ದಾರೆ.

ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟಿಸಲಾಗಿರುವ ಭಾರತ ತಂಡ
ಇದೇ ಅಕ್ಟೋಬರ್ ತಿಂಗಳಿನಿಂದ ಯುಎಇಯಲ್ಲಿ ಆರಂಭವಾಗಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟಿಸಲಾಗಿರುವ ಭಾರತ ತಂಡದಲ್ಲಿ ಸ್ಥಾನ ಪಡೆದುಕೊಂಡಿರುವ ಆಟಗಾರರ ಪಟ್ಟಿ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ , ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್ ಶಮಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications