Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್‌ಗೆ ಪದಾರ್ಪಣೆ ಮಾಡಿದ ಕರ್ನಾಟಕದ ಆರ್‌ ಸ್ಮರಣ್‌

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌)ನಲ್ಲಿ ಹಲವು ರಾಜ್ಯಗಳ ಆಟಗಾರರು ಕಣಕ್ಕೆ ಇಳಿಯುತ್ತಿದ್ದಾರೆ. ಈ ವೇಳೆ ಸಿಕ್ಕ ಅವಕಾಶವನ್ನು ಬಳಸಿಕೊಂಡು ದೊಡ್ಡ ಇನಿಂಗ್ಸ್‌ ಕಟ್ಟುತ್ತಿದ್ದಾರೆ. ಅಲ್ಲದೆ ಅಭಿಮಾನಿಗಳ ಮನ ಗೆಲ್ಲುತ್ತಿದ್ದಾರೆ. ಈ ಐಪಿಎಲ್‌ನಲ್ಲಿ ಕರ್ನಾಟಕದ ಸ್ಟಾರ್ ಆಟಗಾರರು ಕಣಕ್ಕೆ ಇಳಿದಿದ್ದಾರೆ. ಕರ್ನಾಟಕದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಕಣಕ್ಕೆ ಇಳಿಯುತ್ತಿದ್ದು ದೊಡ್ಡ ಇನಿಂಗ್ಸ್‌ ಮೂಲಕ ಮಿಂಚುತ್ತಿದ್ದಾರೆ.

ಕರ್ನಾಟಕದ ಸ್ಟಾರ್ ಆಟಗಾರ ದೇವದತ್ ಪಡಿಕ್ಕಲ್‌ ಸಹ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡದ ಪರ ಆರ್ಭಟಿಸುತ್ತಿದ್ದಾರೆ. ಆರ್‌ಸಿಬಿ ತಂಡದ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುತ್ತಿರುವ ದೇವದತ್ ಬಿಗ್ ಇನಿಂಗ್ಸ್‌ ಮೂಲಕ ತಂಡಕ್ಕೆ ನೆರವಾಗುತ್ತಿದ್ದಾರೆ. ಗುಜರಾತ್ ಟೈಟಾನ್ಸ್ ಪರ ಪ್ರಸಿದ್ಧ್ ಕೃಷ್ಣ, ರಾಜಸ್ಥಾನ್ ರಾಯಲ್ಸ್ ಪರ ಯಶ್ ರಾಜ್‌ ಪುಂಜಾ ಸಹ ಕಣಕ್ಕೆ ಇಳಿದಿದ್ದಾರೆ. ಈಗ ಈ ಸಾಲಿಗೆ ಮತ್ತೊಂದು ಹೆಸರು ಸೇರ್ಪಡೆಯಾಗಿದೆ.

R Smaran

19ನೇ ಆವೃತ್ತಿ ಐಪಿಎಲ್‌ನ 45ನೇ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಕಾದಾಟ ನಡೆಸಿದವು. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಎಸ್‌ಆರ್‌ಎಚ್‌ ಮೊದಲು ಬ್ಯಾಟ್ ಮಾಡಿತು. ಈ ವೇಳೆ ತಂಡದಲ್ಲಿ ಕರ್ನಾಟಕದ ಅನುಭವಿ ಆಟಗಾರ ರವಿಚಂದ್ರನ್‌ ಸ್ಮರಣ್‌ ಅವರಿಗೆ ಅವಕಾಶ ನೀಡಲಾಯಿತು. ಈ ಅವಕಾಶವನ್ನು ಬಳಸಿಕೊಂಡು ದೊಡ್ಡ ಇನಿಂಗ್ಸ್‌ ಕಟ್ಟುವಲ್ಲಿ ಇವರು ವಿಫಲರಾಗಿದ್ದಾರೆ.

ಸನ್‌ರೈಸರ್ಸ್ ತಂಡದ ಅನುಭವಿ ಆಟಗಾರ ಹೆನ್ರಿಕ್ ಕ್ಲಾಸೆನ್‌ 11 ರನ್‌ ಬಾರಿಸಿ ಕ್ಯಾಮರೂನ್‌ ಗ್ರೀನ್‌ ಎಸೆತದಲ್ಲಿ ಔಟ್ ಆಗುತ್ತಿದ್ದಂತೆ ಕ್ರೀಸ್‌ಗೆ ಇಳಿದ ರವಿಚಂದ್ರನ್‌ ಸ್ಮರಣ್‌ ಕ್ಯಾಮರೂನ್‌ ಗ್ರೀನ್‌ ಅವರ ಎಸೆತದಲ್ಲಿ ಪುಲ್‌ ಮಾಡಿ ಬೌಂಡರಿ ಬಾರಿಸಿದರು. ಆದರೆ ವರುಣ್‌ ಚಕ್ರವರ್ತಿ ಅವರ ಸ್ಪಿನ್ ಅರಿಯುವಲ್ಲಿ ವಿಫಲರಾಗಿ ಔಟ್ ಆದರು.

ರವಿಚಂದ್ರನ್‌ ಸ್ಮರಣ್‌ ಸಾಧನೆ

ಆರ್‌ ಸ್ಮರಣ್ ಕರ್ನಾಟಕದ ಮಧ್ಯಮ ಕ್ರಮಾಂಕದ ಸ್ಟಾರ್ ಆಟಗಾರ. ಇವರು ಕಳೆದ ರಣಜಿ ಟ್ರೋಫಿಯಲ್ಲಿ ಅಮೋಘ ಬ್ಯಾಟಿಂಗ್ ನಡೆಸಿದ್ದಾರೆ. ಇವರು ಆಡಿದ 9 ಪಂದ್ಯಗಳಲ್ಲಿ 86ರ ಸರಾಸರಿಯಲ್ಲಿ 950 ರನ್‌ ಕಲೆ ಹಾಕಿದ್ದಾರೆ. ಈ ವೇಳೆ 4 ಶತಕ ಹಾಗೂ 3 ಅರ್ಧಶತಕಗಳು ಸೇರಿವೆ. ಇವರು ಕರ್ನಾಟಕದ ಪರ ವಿಜಯ್ ಹಜಾರೆ ಟ್ರೋಫಿಯಲ್ಲೂ ಬ್ಯಾಟ್ ಮಾಡಿದ್ದಾರೆ. ಇವರು ಆಡಿದ 8 ಪಂದ್ಯಗಳಲ್ಲಿ 194 ರನ್‌ ಸಿಡಿಸಿದ್ದಾರೆ. ಇವರು ಕರ್ನಾಟಕದಲ್ಲಿ ನಡೆಯುವ ಮಹಾರಾಜ್ ಟ್ರೋಫಿಯಲ್ಲೂ ಆರ್ಭಟ ನಡೆಸಿದ್ದಾರೆ. ಇವರು ಆಡಿದ 11 ಪಂದ್ಯಗಳಲ್ಲಿ 69ರ ಸರಾಸರಿಯಲ್ಲಿ 415 ರನ್‌ ಸಿಡಿಸಿದ್ದಾರೆ. ಈ ವೇಳೆ ಇವರು 5 ಅರ್ಧಶತಕಗಳನ್ನು ಸಹ ಸಿಡಿಸಿದ್ದಾರೆ.

ಎಸ್‌ಆರ್‌ಎಚ್‌ ಆಲೌಟ್

ಸನ್‌ರೈಸರ್ಸ್‌ ಹೈದರಾಬಾದ್ ತಂಡ ಮೊದಲು ಬ್ಯಾಟ್ ಮಾಡಿ 19 ಓವರ್‌ಗಳಲ್ಲಿ 165 ರನ್‌ಗಳಿಗೆ ಆಲೌಟ್ ಅಯಿತು. ಈ ವೇಳೆ ಟ್ರಾವಿಸ್‌ ಹೆಡ್‌ (61), ಇಶಾನ್ ಕಿಶನ್‌ (42) ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಧಾರವಾದರು.

Story first published: Sunday, May 3, 2026, 17:51 [IST]
Other articles published on May 3, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+