Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ರನ್‌ ಕಲೆ ಹಾಕಲು ಪರದಾಡಿದ ಟಾಪ್ ಆರ್ಡರ್ಸ್: ಆಸೀಸ್‌ಗೆ 131 ರನ್‌ ಗುರಿ

ಟೀಮ ಇಂಡಿಯಾದ ಟಾಪ್‌ ಆರ್ಡರ್ ಬ್ಯಾಟರ್‌ಗಳು ಪರ್ತ್‌ನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ರನ್‌ ಕಲೆ ಹಾಕುವಲ್ಲಿ ವಿಫಲರಾಗಿದ್ದಾರೆ. ಪದೆ ಪದೇ ಮಳೆ ಕಾಟ ನೀಡಿದ್ದ ಮೊದಲ ಪಂದ್ಯವನ್ನು 26 ಓವರ್‌ಗಳಿಗೆ ಇಳಿಸಲಾಯಿತು. 7 ತಿಂಗಳು ಬಳಿಕ ಅಂಗಳಕ್ಕೆ ಇಳಿದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ರನ್‌ ಕಲೆ ಹಾಕುವಲ್ಲಿ ಪರದಾಟ ನಡೆಸಿದರು. ಆದರೂ ಸಹ ಮಧ್ಯಮ ಕ್ರಮಾಂಕದಲ್ಲಿ ಅಕ್ಷರ್ ಪಟೇಲ್ ಹಾಗೂ ಕೆಎಲ್ ರಾಹುಲ್ ಅವರ ಸಮಯೋಚಿತ ಆಟದ ನೆರವಿನಿಂದ ಭಾರತ 137 ರನ್‌ಗಳ ಕಲೆ ಹಾಕಿದೆ. ಡಿಎಲ್‌ಎಸ್‌ನಿಂದಾಗಿ ಆಸೀಸ್‌ 26 ಓವರ್‌ಗಳಲ್ಲಿ 131 ರನ್‌ ಕಲೆ ಹಾಕಬೇಕಿದೆ.

ಟಾಸ್‌ ಸೊತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ಬೌಲರ್‌ಗಳ ಬಿಗುವಿನ ದಾಳಿಯನ್ನು ಎದುರಿಸುವಲ್ಲಿ ವಿಫಲರಾದರು. ರೋಹಿತ್ ಶರ್ಮಾ (8), ಶುಭಮನ್‌ ಗಿಲ್ (10), ವಿರಾಟ್ ಕೊಹ್ಲಿ (0), ಉಪನಾಯಕ ಶ್ರೇಯಸ್ ಅಯ್ಯರ್ (11) ರನ್ ಕಲೆ ಹಾಕುವಲ್ಲಿ ವಿಫಲರಾದರು. ಪರಿಣಾಮ ಟೀಮ್ ಇಂಡಿಯಾ ಆರಂಭದಲ್ಲಿ ಒತ್ತಡಕ್ಕೆ ಸಿಲುಕಿತು. ಈ ಹಂತದಲ್ಲಿ ಜೊತೆಯಾಟಗಳು ಬಾರದೇ ಇದ್ದಿದ್ದರಿಂದ ಟೀಮ್ ಇಂಡಿಯಾ ಒತ್ತಡಕ್ಕೆ ಸಿಲುಕಿತು.

Rahul Axar Rescue India After Top-Order Flop in Rain-Hit Perth ODI

ಐದನೇ ವಿಕೆಟ್‌ಗೆ ಕೆಎಲ್ ರಾಹುಲ್ ಹಾಗೂ ಅಕ್ಷರ್ ಪಟೇಲ್ ಜೋಡಿ ತಂಡದ ಪರ ಭರವಸೆಯನ್ನು ಮೂಡಿಸಿದರು. ಜೋಡಿ 40 ಎಸೆತಗಳಲ್ಲಿ 39 ರನ್‌ಗಳನ್ನು ಸೇರಿಸಿ ತಂಡ ಸ್ಪರ್ಧಾತ್ಮಕ ಮೊತ್ತ ಕಲೆ ಹಾಕುವತ್ತ ದೃಷ್ಟಿ ನೆಡಲು ಕಾರಣವಾಯಿತು. ಆಲ್‌ರೌಂಡರ್‌ ಅಕ್ಷರ್ ಪಟೇಲ್ 38 ಎಸೆತಗಳಲ್ಲಿ 3 ಬೌಂಡರಿ ನೆರವಿನಿಂದ 31 ರನ್‌ ಸಿಡಿಸಿ ಔಟ್ ಆದರು.

ಕೊನೆಯಲ್ಲಿ ಬಿರುಸಿನ ಬ್ಯಾಟಿಂಗ್

ಆರನೇ ವಿಕೆಟ್‌ಗೆ ಆಲ್‌ರೌಂಡರ್ ವಾಷಿಂಗ್ಟನ್‌ ಸುಂದರ್ ಹಾಗೂ ಕೆಎಲ್ ರಾಹುಲ್ ಜೋಡಿ ಸಹ 21 ಎಸೆತಗಳಲ್ಲಿ 31 ರನ್‌ ಸೇರಿಸಿತು. ವಾಷಿಂಗ್ಟನ್‌ ಸುಂದರ್ 10 ರನ್‌ಗಳಿಗೆ ಆಟ ಮುಗಿಸಿದರು. ವಿಕೆಟ್‌ ಕೀಪರ್ ಬ್ಯಾಟರ್ ಕೆಎಲ್ ರಾಹುಲ್ 31 ಎಸೆತಗಳಲ್ಲಿ 2 ಬೌಂಡರಿ, 2 ಸಿಕ್ಸರ್ ಸಹಾಯದಿಂದ 38 ರನ್‌ ಸಿಡಿಸಿ ತಂಡಕ್ಕೆ ಆಧಾರವಾದರು. ಕೆಳಕ್ರಮಾಂಕದಲ್ಲಿ ಆಲ್‌ರೌಂಡರ್‌ ನಿತೀಶ್ ಕುಮಾರ್ ರೆಡ್ಡ 2 ಬಿಗ್‌ ಸಿಕ್ಸರ್ ಬಾರಿಸಿ ತಂಡದ ಮೊತ್ತವನ್ನು 130ರ ಗಡಿ ದಾಟಿಸುವಲ್ಲಿ ಸಫಲರಾದರು. ನಿತೀಶ್ ಕುಮಾರ್ ರೆಡ್ಡಿ 11 ಎಸೆತಗಳಲ್ಲಿ ಅಜೇಯ 19 ರನ್ ಬಾರಿಸಿ ತಂಡಕ್ಕೆ ಆಧಾರವಾದರು.

ಆಸ್ಟ್ರೇಲಿಯಾದ ಪರ ಸ್ಟಾರ್ ವೇಗದ ಬೌಲರ್ ಜೋಶ್ ಹ್ಯಾಜಲ್‌ವುಡ್, ಮಿಚೆಲ್ ಓವನ್‌, ಮ್ಯಾಥ್ಯೂ ಕುಹ್ನೆಮನ್ ತಲಾ 2 ವಿಕೆಟ್ ಕಬಳಿಸಿದರು.

Story first published: Sunday, October 19, 2025, 15:11 [IST]
Other articles published on Oct 19, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+