ಬಿಜಿಎಸ್ ಕ್ರಿಕೆಟ್ ಸ್ಟೇಡಿಯಂ ಉದ್ಘಾಟನೆಯಲ್ಲಿ ಪಾಲ್ಗೊಂಡ ರಾಹುಲ್ ದ್ರಾವಿಡ್

ಬೆಂಗಳೂರು: ಬೆಂಗಳೂರಿನ ನಿತ್ಯಾನಂದನಗರದ ಕೆ ಗೊಲ್ಲಹಳ್ಳಿ ಸಮೀಪ ನೂತನವಾಗಿ ನಿರ್ಮಾಣವಾಗಿರುವ ಬಿಜಿಎಸ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಉದ್ಘಾಟನಾ ಕಾರ್ಯಕ್ರಮದಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ, ಗ್ರೇಟ್ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ ಮತ್ತು ಸ್ಯಾಂಡಲ್‌ವುಡ್ ನಟ ಕಚ್ಚ ಸುದೀಪ್ ಪಾಲ್ಗೊಂಡಿದ್ದಾರೆ.
ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿ(ಎನ್‌ಸಿಎ)ಯಲ್ಲಿ ಸದ್ಯ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ರಾಹುಲ್ ದ್ರಾವಿಡ್ ಮತ್ತು ನಟ ಸುದೀಪ್ ಅವರು ಬಿಜಿಎಸ್ ಸ್ಟೇಡಿಯಂನ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಫೋಟೋವನ್ನು ಸಿನಿಲೋಕ ಸುನಿಲ್ ಅವರು ಟ್ವಿಟರ್‌ನಲ್ಲಿ ಹಾಕಿಕೊಂಡಿದ್ದಾರೆ.
ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ಮೊದಲೆರಡು ಟೆಸ್ಟ್ ಪಂದ್ಯಗಳು ನಡೆಯಲಿವೆ. ಮಂಗಳವಾರ (ಫೆಬ್ರವರಿ 9) ಮುಕ್ತಾಯಗೊಂಡ ಮೊದಲನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆ 227 ರನ್‌ನಿಂದ ಸೋತು ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 0-1ರ ಹಿನ್ನಡೆ ಅನುಭವಿಸಿದೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಬೇಕಿದ್ದ ಭಾರತದ ಅನುಭವಿ ವೇಗಿ ಮೊಹಮ್ಮದ್ ಶಮಿ ತಂಡದಿಂದ ಹೊರಗಿದ್ದು ಎನ್‌ಸಿಎಯಲ್ಲಿ ತರಬೇತಿ ನಡೆಸುತ್ತಿದ್ದಾರೆ. ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ಬಳಿಕ ಶಮಿಗೆ ವಿಶ್ರಾಂತಿ ನೀಡಲಾಗಿತ್ತು. ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿ ಶಮಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications