ಸೋಮವಾರ, ಜನವರಿ 5ರಂದು ವಿಶಾಖಪಟ್ಟಣದಲ್ಲಿ ನಡೆದ ಐದು ಪಂದ್ಯಗಳ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಭಾರತ ತಂಡವು ಪ್ರವಾಸಿ ಇಂಗ್ಲೆಂಡ್ ವಿರುದ್ಧ 106 ರನ್‌ಗಳಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ ಪುನರಾಗಮನ ಮಾಡಿದರು.
ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡಕ್ಕೆ 399 ರನ್‌ಗಳ ಗುರಿಯನ್ನು ನೀಡಿತು. ಆದರೆ ಜಸ್ಪ್ರೀತ್ ಬುಮ್ರಾ 46 ರನ್ ನೀಡಿ 3 ವಿಕೆಟ್ ಮತ್ತು ರವಿಚಂದ್ರನ್ ಅಶ್ವಿನ್ 72 ರನ್ ನೀಡಿ 3 ವಿಕೆಟ್ ಪಡೆದ ಕಾರಣ ಪ್ರವಾಸಿ ತಂಡ ಕೇವಲ 292 ರನ್ ಗಳಿಸಲು ಸಾಧ್ಯವಾಯಿತು.

ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ತಲಾ ಒಂದು ಪಂದ್ಯ ಗೆಲ್ಲುವ ಮೂಲಕ ಉಭಯ ತಂಡಗಳು ಸರಣಿಯಲ್ಲಿ 1-1 ಅಂತರದಲ್ಲಿ ಸಮಬಲ ಸಾಧಿಸಿವೆ. ಫೆಬ್ರವರಿ 15ರಿಂದ ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿರುವ ಮೂರನೇ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಸೆಣಸಾಡಲಿವೆ.
ಗಮನಾರ್ಹವಾಗಿ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ಮೊದಲು ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಮಾತ್ರ ಭಾರತ ತಂಡವನ್ನು ಪ್ರಕಟಿಸಿತ್ತು ಮತ್ತು ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಂದ ಹಿಂದೆ ಸರಿದಿದ್ದರು.

ಭಾರತ ತಂಡದ ಗೆಲುವಿನ ನಂತರ, ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರನ್ನು ಸರಣಿಯ ಉಳಿದ ಮೂರು ಪಂದ್ಯಗಳಿಗೆ ವಿರಾಟ್ ಕೊಹ್ಲಿ ಲಭ್ಯತೆಯ ಬಗ್ಗೆ ಪ್ರಶ್ನಿಸಲಾಯಿತು.
51 ವರ್ಷದ ರಾಹುಲ್ ದ್ರಾವಿಡ್ ಮಾತನಾಡಿ, ಈ ಪ್ರಶ್ನೆಗೆ ಉತ್ತರಿಸಲು ನಾನು ಉತ್ತಮ ವ್ಯಕ್ತಿಯಲ್ಲ ಮತ್ತು ಕೊಹ್ಲಿ ಲಭ್ಯತೆಯ ಬಗ್ಗೆ ತಿಳಿಯಲು ಆಯ್ಕೆಗಾರರು ಶೀಘ್ರದಲ್ಲೇ ಅವರನ್ನು ಸಂಪರ್ಕಿಸುತ್ತಾರೆ ಎಂದು ಹೇಳಿದ್ದಾರೆ.
"ಈ ಕುರಿತು ಆಯ್ಕೆಗಾರರನ್ನು ಕೇಳುವುದು ಉತ್ತಮ ಎಂದು ನಾನು ಭಾವಿಸುತ್ತೇನೆ. ಮುಂದಿನ ಮೂರು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡದ ಆಯ್ಕೆಗೆ ಮುಂಚಿತವಾಗಿ ಉತ್ತರಿಸಲು ಆಯ್ಕೆಗಾರರು ಅತ್ಯುತ್ತಮ ವ್ಯಕ್ತಿಗಳು ಎಂದು ನನಗನ್ನಿಸುತ್ತದೆ".
"ನಾವು ಅದರ ಬಗ್ಗೆ ಮಾಹಿತಿ ಪಡೆಯುತ್ತೇವೆ. ಮುಂದಿನ ಕೆಲವು ದಿನಗಳಲ್ಲಿ ಭಾರತ ತಂಡದ ಆಯ್ಕೆ ನಡೆಯಲಿದೆ. ನಾವು ವಿರಾಟ್ ಕೊಹ್ಲಿ ಮತ್ತು ಆಯ್ಕೆ ಸಮಿತಿ ಅವರೊಂದಿಗೆ ಸಂಪರ್ಕ ಸಾಧಿಸುತ್ತೇವೆ ಮತ್ತು ತಿಳಿದುಕೊಳ್ಳುತ್ತೇವೆ," ಎಂದು ರಾಹುಲ್ ದ್ರಾವಿಡ್ ತಿಳಿಸಿದ್ದಾರೆ.
ಗಮನಾರ್ಹವಾಗಿ, ವಿರಾಟ್ ಕೊಹ್ಲಿ ಕುಟುಂಬಕ್ಕೆ ಗೌಪ್ಯತೆಯನ್ನು ನೀಡುವಂತೆ ಅಭಿಮಾನಿಗಳನ್ನು ಬಿಸಿಸಿಐ ಒತ್ತಾಯಿಸಿದೆ ಮತ್ತು ಅವರ ಅನುಪಸ್ಥಿತಿಯ ಕಾರಣಗಳ ಬಗ್ಗೆ ಊಹಿಸಬೇಡಿ ಎಂದು ಮನವಿ ಮಾಡಿತ್ತು.
ಆದರೆ, ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಮತ್ತು ವಿರಾಟ್ ಕೊಹ್ಲಿಯ ಆಪ್ತ ಸ್ನೇಹಿತ ಎಬಿ ಡಿವಿಲಿಯರ್ಸ್ ಅವರು ಭಾರತದ ಸ್ಟಾರ್ ಕ್ರಿಕೆಟಿಗ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಬಹಿರಂಗಪಡಿಸಿದರು.
ಎಬಿ ಡಿವಿಲಿಯರ್ಸ್ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಲೈವ್ ಸೆಷನ್‌ನಲ್ಲಿ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸುತ್ತಾ ವಿರಾಟ್ ಕೊಹ್ಲಿ ಟೆಸ್ಟ್ ಸರಣಿಯಿಂದ ಹಿಂದೆ ಸರಿದಿರುವುದನ್ನು ಬಹಿರಂಗಪಡಿಸಿದರು.
"ಹೌದು, ವಿರಾಟ್ ಕೊಹ್ಲಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾನೆ. ಹೌದು, ಇದು ಕುಟುಂಬದ ಸಮಯ ಮತ್ತು ಅವನಿಗೆ ಅಲ್ಲಿನ ಪರಿಸ್ಥಿತಿಗಳು ಮುಖ್ಯ. ಇದು ಟೆಸ್ಟ್ ಸರಣಿಯಿಂದ ಹೊರಗುಳಿಯಲು ಕಾರಣವಾಗಿದೆ," ಎಂದರು.
"ಹೆಚ್ಚಿನ ಜನರ ಆದ್ಯತೆ ಕುಟುಂಬ ಎಂದು ನಾನು ಭಾವಿಸುತ್ತೇನೆ. ಅದಕ್ಕಾಗಿ ನೀವು ವಿರಾಟ್ ಕಕೊಹ್ಲಿ ಅವರನ್ನು ನಿರ್ಣಯಿಸಲು ಸಾಧ್ಯವಿಲ್ಲ. ಹೌದು, ಟೆಸ್ಟ್ ಸರಣಿಯಲ್ಲಿ ನಾವು ಅವನನ್ನು ಕಳೆದುಕೊಳ್ಳುತ್ತೇವೆ. ಆದರೆ ಅವರು ಸಂಪೂರ್ಣವಾಗಿ ಸರಿಯಾದ ನಿರ್ಧಾರವನ್ನು ತೆಗೆದುಕೊಂಡಿದ್ದಾರ," ಎಂದು ಆರ್‌ಸಿಬಿ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹೇಳಿದ್ದಾರೆ.
ವಿರಾಟ್ ಕೊಹ್ಲಿ ಲಭ್ಯತೆ ಇನ್ನೂ ಪ್ರಶ್ನಾರ್ಹವಾಗಿದ್ದು, ಮುಂದಿನ ದಿನಗಳಲ್ಲಿ ಉಳಿದ ಮೂರು ಟೆಸ್ಟ್ ಪಂದ್ಯಗಳಿಗೆ ತಂಡವನ್ನು ಪ್ರಕಟಿಸುವುದರಿಂದ ಬಿಸಿಸಿಐ ಈ ವಿಷಯದ ಬಗ್ಗೆ ಸ್ಪಷ್ಟತೆ ನೀಡುವ ಸಾಧ್ಯತೆಯಿದೆ.