ವಿಡಿಯೋ: ಸೂರ್ಯಕುಮಾರ್ ಯಾದವ್ ಅರ್ಧಶತಕದ ಬೆನ್ನಲ್ಲೇ ವಿಕೆಟ್ ಒಪ್ಪಿಸಿದ್ದಕ್ಕೆ ದ್ರಾವಿಡ್ ಬೇಸರ

ಶ್ರೀಲಂಕಾದ ಕೊಲಂಬೊದಲ್ಲಿನ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಶ್ರೀಲಂಕಾ ದೇಶಗಳ ನಡುವಿನ ಮೊದಲನೇ ಅಂತಾರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯದಲ್ಲಿ ಲಂಕಾ ವಿರುದ್ಧ ಟೀಮ್ ಇಂಡಿಯಾ 38 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಭಾರತ ತಂಡ 1-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ.
ಟೋಕಿಯೋ ಒಲಿಂಪಿಕ್ಸ್‌ನಿಂದ ಹೊರಬಿದ್ದ ಟೇಬಲ್ ಟೆನಿಸ್ ಆಟಗಾರ್ತಿ ಸುತೀರ್ಥಾ ಮುಖರ್ಜಿ
ಟಾಸ್ ಸೋತು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಟೀಂ ಇಂಡಿಯಾದ ಪರ ಸೂರ್ಯಕುಮಾರ್ ಯಾದವ್ ಅರ್ಧಶತಕ ಸಿಡಿಸಿ ಮಿಂಚಿದರು. ಮಧ್ಯಮ ಕ್ರಮಾಂಕದಲ್ಲಿ ಜವಾಬ್ದಾರಿಯುತ ಆಟವಾಡಿದ ಸೂರ್ಯಕುಮಾರ್ ಯಾದವ್ 34 ಎಸೆತಗಳಿಗೆ 50 ರನ್ ಬಾರಿಸಿದರು. ಅರ್ಧಶತಕ ಸಿಡಿಸಿದ ಮುಂದಿನ ಎಸೆತದಲ್ಲಿಯೇ ಸೂರ್ಯಕುಮಾರ್ ಯಾದವ್ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು. ಶ್ರೀಲಂಕಾದ ಬೌಲರ್ ಹಸರಂಗ ಎಸೆತದಲ್ಲಿ ರಮೇಶ್ ಮೆಂಡಿಸ್‌ಗೆ ಕ್ಯಾಚ್ ನೀಡುವ ಮೂಲಕ ಸೂರ್ಯಕುಮಾರ್ ಯಾದವ್ ವಿಕೆಟ್ ಒಪ್ಪಿಸಿದಾಗ ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಬೇಸರದ ಪ್ರತಿಕ್ರಿಯೆಯನ್ನು ನೀಡಿದ್ದಾರೆ.
ಹೌದು ಅರ್ಧಶತಕ ಬಾರಿಸಿದ ಕೂಡಲೇ ಸೂರ್ಯಕುಮಾರ್ ಯಾದವ್ ವಿಕೆಟ್ ಒಪ್ಪಿಸಿದ್ದನ್ನು ಕಂಡು ರಾಹುಲ್ ದ್ರಾವಿಡ್ ಮೌನ ವಹಿಸಿ ಸಪ್ಪೆ ಮುಖ ಹಾಕಿಕೊಂಡು ಕುಳಿತಿದ್ದರು. ರಾಹುಲ್ ದ್ರಾವಿಡ್ ನೀಡಿರುವ ಈ ಪ್ರತಿಕ್ರಿಯೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉತ್ತಮ ಇನ್ನಿಂಗ್ಸ್ ಕಟ್ಟುತ್ತಿದ್ದ ತಂಡದ ಆಟಗಾರನೊಬ್ಬ ದಿಢೀರ್ ಔಟ್ ಆಗಿದ್ದಕ್ಕೆ ದ್ರಾವಿಡ್ ಇಷ್ಟು ಬೇಸರ ವ್ಯಕ್ತಪಡಿಸುತ್ತಿರುವುದನ್ನು ಕಂಡು ಕ್ರೀಡಾಭಿಮಾನಿಗಳು ಆಟದ ಮೇಲೆ ದ್ರಾವಿಡ್ ಅವರಿಗಿರುವ ಒಲವು ಮತ್ತು ಅತ್ಯಾಸಕ್ತಿಗೆ ನೆಟ್ಟಿಗರು ಫಿದಾ ಆಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications