ರಾಹುಲ್ ದ್ರಾವಿಡ್‌ಗೆ ದಕ್ಷಿಣ ಆಫ್ರಿಕಾದಲ್ಲಿ ಬಹುದೊಡ್ಡ ಸವಾಲಿದೆ: ರೀತೀಂದರ್ ಸಿಂಗ್ ಸೋಧಿ

ಭಾರತ-ದಕ್ಷಿಣ ನಡುವಿನ ಟೆಸ್ಟ್ ಸರಣಿಯು ಇದೇ ತಿಂಗಳು ಡಿಸೆಂಬರ್ 26ರಿಂದ ಪ್ರಾರಂಭಗೊಳ್ಳಲಿದೆ. ಮೂರು ಪಂದ್ಯಗಳ ಟೆಸ್ಟ್ ಸರಣಿಯ ಜೊತೆಗೆ ಏಕದಿನ ಸರಣಿಯನ್ನ ಕೂಡ ಆಯೋಜಿಸಲಾಗಿದೆ. ಆದ್ರೆ ಮುಂದಿನ ದಿನಗಳಲ್ಲಿ ಟೀಂ ಇಂಡಿಯಾ ಎದುರು ಬೆಟ್ಟದಂತಹ ಸವಾಲುಗಳಿವೆ.
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಹಾಗೂ ಟಿ20 ಸರಣಿಯನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಕೋಚ್ ರಾಹುಲ್ ದ್ರಾವಿಡ್‌ಗೆ ಇದು ಎರಡನೇ ಸವಾಲು ಅನ್ನೋದಕ್ಕಿಂತ ಅತ್ಯಂತ ಕಠಿಣ ಸವಾಲಾಗಿ ಪರಿಣಮಿಸಿದೆ. ಏಕೆಂದರೆ ಕ್ರಿಕೆಟ್ ಇತಿಹಾಸದಲ್ಲಿ ಇದುವರೆಗೂ ಭಾರತವು ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿಯನ್ನು ಗೆಲ್ಲಲು ಸಾಧ್ಯವಾಗಿಲ್ಲ.
ಇದೇ ಹಿನ್ನಲೆಯಲ್ಲಿ ಭಾರತದ ಮಾಜಿ ಕ್ರಿಕೆಟಿಗ ರೀತಿಂದರ್ ಸಿಂಗ್ ಸೋಧಿ , ಕೋಚ್ ರಾಹುಲ್ ದ್ರಾವಿಡ್ ಕುರಿತಾಗಿ ಮಾತನಾಡಿದ್ದು, ರಾಹುಲ್ ದ್ರಾವಿಡ್‌ಗೆ ಬಹುದೊಡ್ಡ ಸವಾಲು ಮುಂದಿದೆ ಎಂದಿದ್ದಾರೆ. ವದಂತಿಗಳ ಪ್ರಕಾರ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಡುವೆ ಎಲ್ಲವೂ ಸರಿಯಾಗಿಲ್ಲದ ಹಿನ್ನಲೆಯಲ್ಲಿ ರಾಹುಲ್ ದ್ರಾವಿಡ್ ಇಬ್ಬರನ್ನೂ ಬ್ಯಾಲೆನ್ಸ್ ಮಾಡುವ ಮೂಲಕ ತಂಡವನ್ನ ಮುನ್ನಡೆಸುವ ಮಹತ್ತರ ಜವಾಬ್ದಾರಿಯಿದೆ ಎಂದಿದ್ದಾರೆ.
"ಇತ್ತೀಚಿನ ವಿವಾದಗಳಿಂದಾಗಿ ತಂಡವನ್ನು ಮೇಲಕ್ಕೆತ್ತುವುದು ಅವರಿಗೆ ದೊಡ್ಡ ಸವಾಲಾಗಿದೆ. ರಾಹುಲ್ ದ್ರಾವಿಡ್ ಗೆ ಇದು ಕಠಿಣ ಪರೀಕ್ಷೆ. ನಾವು ರೋಹಿತ್ ಮತ್ತು ವಿರಾಟ್ ಬಗ್ಗೆ ಮಾತನಾಡಿದರೆ, ಅವರನ್ನು ಒಟ್ಟಿಗೆ ಹೊಂದಾಣಿಕೆಯಿಂದ ಮುನ್ನಡೆಯಲು ಮತ್ತು ಅವರ ನಡುವೆ ಭಿನ್ನಾಭಿಪ್ರಾಯವಿದ್ದರೆ ಮತ್ತೆ ಅವರನ್ನ ಒಂದುಗೂಡಿಸುವುದು ಸವಾಲಾಗಲಿದೆ'' ರಾಹುಲ್ ಸೋಧಿ ಇಂಡಿಯಾ ನ್ಯೂಸ್‌ನಲ್ಲಿ ಚರ್ಚೆಯಲ್ಲಿ ಮಾತನಾಡುತ್ತಾ ಹೇಳಿದರು.

ದಕ್ಷಿಣ ಆಫ್ರಿಕಾ ಪಿಚ್‌ಗೆ ಅನುಗುಣವಾಗಿ ಬ್ಯಾಟ್ಸ್‌ಮನ್‌ಗಳ ಅಭ್ಯಾಸ
ದಕ್ಷಿಣ ಆಫ್ರಿಕಾ ಪಿಚ್‌ಗಳು ಸಾಮಾನ್ಯವಾಗಿ ಹೆಚ್ಚು ಪೇಸ್ ಮತ್ತು ಬೌನ್ಸ್‌ನಿಂದ ಕೂಡಿರುತ್ತದೆ. ಹೀಗಾಗಿ ಯಾವುದೇ ವಿದೇಶಿ ಬ್ಯಾಟ್ಸ್‌ಮನ್ ಕೂಡ ಈ ನೆಲದಲ್ಲಿ ರನ್‌ಗಳಿಸಲು ಕಷ್ಟಸಾಧ್ಯವಾಗಿದೆ. ಏಷ್ಯಾ ಪಿಚ್‌ಗಳಲ್ಲಿ ಆಡಿದ ಬ್ಯಾಟ್ಸ್‌ಮನ್‌ಗಳ ಇಲ್ಲಿ ಕ್ರೀಸ್ ಕಚ್ಚಿ ಆಡುವುದರಲ್ಲಿ ಎಡವಿದ್ದೇ ಹೆಚ್ಚು. ಹೀಗಾಗಿ ಇಲ್ಲಿನ ಪಿಚ್‌ಗಳಿಗೆ ಅನುಗುಣವಾಗಿ ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳ ತಯಾರಿ ನಡೆಸುವುದು ಕೂಡ ರಾಹುಲ್ ದ್ರಾವಿಡ್ ಸವಾಲಾಗಿದೆ.

ದಕ್ಷಿಣ ಆಫ್ರಿಕಾದಲ್ಲಿ ಭಾರತ ಗೆದ್ದರೆ ದ್ರಾವಿಡ್‌ಗೆ ಬಹುದೊಡ್ಡ ಯಶಸ್ಸು ಸಿಕ್ಕಂತಾಗಲಿದೆ!
ಕಬ್ಬಿಣದ ಕಡಲೆಯಂತಾಗಿರುವ ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ಗೆಲುವು ಇದುವರೆಗೂ ಟೀಂ್ ಇಂಡಿಯಾಗೆ ದಕ್ಕಿಲ್ಲ. ಹೀಗಾಗಿ ದಕ್ಷಿಣ ಆಫ್ರಿಕಾದಲ್ಲಿ ಈ ಸಲ ಭಾರತವು ಟೆಸ್ಟ್ ಸರಣಿ ಗೆದ್ದಿದ್ದೇ ಆದಲ್ಲಿ ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್‌ಗೆ ಬಹುದೊಡ್ಡ ಯಶಸ್ಸು ಸಿಕ್ಕಂತಾಗಲಿದೆ. ಟೀಂ ಇಂಡಿಯಾ ಕೋಚ್ ಆಗಿ ಕೆಲವೇ ವಾರಗಳಲ್ಲಿ ಭಾರತಕ್ಕೆ ಬಹುದೊಡ್ಡ ಗೆಲುವನ್ನು ತಂದುಕೊಟ್ಟ ಕೀರ್ತಿ ಲಭಿಸಲಿದೆ.

ಭಾರತ-ದಕ್ಷಿಣ ಆಫ್ರಿಕಾ ಕ್ರಿಕೆಟ್ ಸರಣಿಯ ವೇಳಾಪಟ್ಟಿ
ಸೆಂಚುರಿಯನ್ ಮೈದಾನದಲ್ಲಿ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 26ರಂದು ನಡೆಯಲಿದೆ. ಇನ್ನು ಎರಡನೇ ಪಂದ್ಯವು ಹೊಸ ವರ್ಷದಲ್ಲಿ, ಅಂದರೆ 2022 ರಿಂದ ಆರಂಭವಾಗಲಿದೆ.
ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ ಹೀಗಿದೆ
ಮೊದಲ ಟೆಸ್ಟ್: ಡಿಸೆಂಬರ್ 26-30, ಸೂಪರ್‌ಸ್ಪೋರ್ಟ್ಸ್ ಪಾರ್ಕ್, ಸೆಂಚುರಿಯನ್
ಎರಡನೇ ಟೆಸ್ಟ್: ಜನವರಿ 3-7, ವಾಂಡರರ್ಸ್ ಕ್ರೀಡಾಂಗಣ, ಜೋಹಾನ್ಸ್‌ಬರ್ಗ್
ಮೂರನೇ ಟೆಸ್ಟ್: ಜನವರಿ 11-15, ನ್ಯೂಲ್ಯಾಂಡ್ಸ್, ಕೇಪ್ ಟೌನ್
ಏಕದಿನ ಸರಣಿ ವೇಳಾಪಟ್ಟಿ
ಭಾರತವು ಮೂರು ಏಕದಿನ ಪಂದ್ಯಗಳನ್ನು ಸಹ ಆಡುತ್ತದೆ. ಆದರೆ ಬಿಸಿಸಿಐ ಮೊದಲೇ ಘೋಷಿಸಿದಂತೆ ನಾಲ್ಕು ಪಂದ್ಯಗಳ ಟಿ20 ಸರಣಿಯನ್ನು ಮತ್ತೆ ನಿಗದಿಪಡಿಸಲಾಗುತ್ತದೆ.
ಮೊದಲ ಏಕದಿನ: ಜನವರಿ 19 , ಬೆಟ್ವೇ, ಸಮಯ - 2.00 PM
ಎರಡನೇ ಏಕದಿನ: ಜನವರಿ 21, ಪಾರ್ಕ್, ಪಾರ್ಲ್, ಸಮಯ - 2.00 PM
ಮೂರನೇ ಏಕದಿನ: ಜನವರಿ 23, ನ್ಯೂಲ್ಯಾಂಡ್ಸ್, ಕೇಪ್ ಟೌನ್, ಸಮಯ - 2.00 PM

ಟೀಂ ಇಂಡಿಯಾ ಟೆಸ್ಟ್ ಸ್ಕ್ವಾಡ್
ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಪ್ರಿಯಾಂಕ್ ಪಾಂಚಾಲ್, ರಿಷಬ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್ ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊ. ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್.
ಸ್ಟ್ಯಾಂಡ್ ಬೈ ಆಟಗಾರರು: ನವದೀಪ್ ಸೈನಿ, ಸೌರಭ್ ಕುಮಾರ್, ದೀಪಕ್ ಚಾಹರ್, ಅರ್ಜಾನ್ ನಾಗ್ವಾಸ್ವಾಲ್ಲಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications