ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡಕ್ಕೆ ರಾಹುಲ್ ದ್ರಾವಿಡ್ ಕೋಚ್?

ನವದೆಹಲಿ: ಮುಂಬರಲಿರುವ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾಕ್ಕೆ ಕನ್ನಡಿಗ ರಾಹುಲ್ ದ್ರಾವಿಡ್ ಮಧ್ಯಂತರ ಕೋಚ್ ಆಗಿ ತಂಡದ ಜೊತೆಗಿರುವ ನಿರೀಕ್ಷೆಯಿದೆ. ಭಾರತದಲ್ಲಿ ನಡೆಯಲಿರುವ ಸರಣಿಗಾಗಿ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಪ್ರವಾಸ ಬರಲಿದೆ. ಈ ವೇಳೆ ದ್ರಾವಿಡ್ ತಂಡದ ಕೋಚ್ ಜವಾಬ್ದಾರಿ ಹೊರಲಿದ್ದಾರೆ ಎನ್ನಲಾಗಿದೆ.
ಈ ವರ್ಷ ಶ್ರೀಲಂಕಾಕ್ಕೆ ಟೀಮ್ ಇಂಡಿಯಾ ಪ್ರವಾಸ ಹೋಗಿದ್ದಾಗ ತಂಡದ ಕೋಚ್ ಜವಾಬ್ದಾರಿ ರಾಹುಲ್ ದ್ರಾವಿಡ್ ಹೆಗಲ ಮೇಲಿತ್ತು. ಆಗ ಭಾರತದ ಮುಖ್ಯ ಕೋಚ್ ರವಿ ಶಾಸ್ತ್ರಿ ಅವರು ಇಂಗ್ಲೆಂಡ್ ವಿರುದ್ಧದ ಸರಣಿಗಾಗಿ ಮತ್ತೊಂದು ಭಾರತ ತಂಡದ ಜೊತೆ ತೆರಳಿದ್ದರಿಂದ ಅದೇ ಸಮಯಕ್ಕೆ ಲಂಕಾ ಪ್ರವಾಸ ಕೈಗೊಂಡಿದ್ದ ಭಾರತ ತಂಡವನ್ನು ದ್ರಾವಿಡ್ ಮುನ್ನಡೆಸಿದ್ದರು.
ಮುಂಬರಲಿರುವ ಟಿ20 ವಿಶ್ವಕಪ್ ಬಳಿಕ ಈಗ ಭಾರತ ತಂಡದ ಮುಖ್ಯ ಕೋಚ್ ಆಗಿರುವ ರವಿ ಶಾಸ್ತ್ರಿ ಅವರ ಒಪ್ಪಂದದ ಅವಧಿ ಪೂರ್ಣಗೊಳ್ಳಲಿದೆ. ಹೀಗಾಗಿ ಹೊಸ ಕೋಚ್ ಆಯ್ಕೆ ನಡೆಯುವ ಮುನ್ನ ಭಾರತಕ್ಕೆ ನ್ಯೂಜಿಲೆಂಡ್ ತಂಡ ಪ್ರವಾಸ ಬರುವುದರಿಂದ ಆಗ ಭಾರತ ತಂಡದ ಕೋಚ್ ಜವಾಬ್ದಾರಿ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷರಾಗಿರುವ ದ್ರಾವಿಡ್ ಹೊರಲಿದ್ದಾರೆ ಎನ್ನಲಾಗುತ್ತಿದೆ.
ಅಕ್ಟೋಬರ್ 17ರಿಂದ ನವೆಂಬರ್ 14ರ ವರೆಗೆ ಟಿ20 ವಿಶ್ವಕಪ್ ಟೂರ್ನಿ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಓಮನ್‌ನಲ್ಲಿ ನಡೆಯಲಿದೆ. ಆ ಬಳಿಕ ಅಂದರೆ ನವೆಂಬರ್ 17ರಿಂದ ಭಾರತ-ನ್ಯೂಜಿಲೆಂಡ್ ಸರಣಿ ಆರಂಭವಾಗಲಿದೆ. ಭಾರತಕ್ಕೆ ಪ್ರವಾಸ ಬರುವ ಕಿವೀಸ್ ಇಲ್ಲಿ 3 ಟಿ20ಐ ಮತ್ತು 2 ಟೆಸ್ಟ್ ಪಂದ್ಯಗಳನ್ನಾಡಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications