ಎನ್‌ಸಿಎ ಕ್ರಿಕೆಟ್ ಮುಖ್ಯಸ್ಥರ ಹುದ್ದೆಗೆ ರಾಹುಲ್ ದ್ರಾವಿಡ್ ಒಬ್ಬರೇ ಅಭ್ಯರ್ಥಿ!

ಬೆಂಗಳೂರು: ಟೀಮ್ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರು ನ್ಯಾಷನಲ್ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಕ್ರಿಕೆಟ್ ಮುಖ್ಯಸ್ಥರ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ದ್ರಾವಿಡ್ ಎನ್‌ಸಿಎ ಮುಖ್ಯಸ್ಥರಾಗಿದ್ದವರು. ಆದರೆ ಸ್ಥಾನಕ್ಕೆ ಮತ್ತೆ ಅರ್ಜಿ ಕರೆಯಲಾಗಿದ್ದರಿಂದ ದ್ರಾವಿಡ್ ಮರು ಅರ್ಜಿ ಸಲ್ಲಿಸಿದ್ದರು.
ಭಾರತೀಯ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಆಗುವ ಸಾಧ್ಯತೆಯಿದೆ ಎಂದು ಈ ಮೊದಲು ಹೇಳಲಾಗಿತ್ತು. ಟಿ20 ವಿಶ್ವಕಪ್ ಬಳಿಕ ಈಗ ಮುಖ್ಯ ಕೋಚ್ ಆಗಿರುವ ರವಿ ಶಾಸ್ತ್ರಿ ಅವರ ಒಪ್ಪಂದ ಕೊನೆಗೊಳ್ಳುವುದರಿಂದ ಅವರ ಜಾಗಕ್ಕೆ ದ್ರಾವಿಡ್ ಬರುತ್ತಾರೆ ಎಂದು ಭಾವಿಸಲಾಗಿತ್ತು.
ಆದರೆ ದ್ರಾವಿಡ್ ಎನ್‌ಸಿಎ ಮುಖ್ಯಸ್ಥರ ಸ್ಥಾನಕ್ಕೆ ಮರು ಅರ್ಜಿ ಸಲ್ಲಿಸಿರುವುದರಿಂದ ದ್ರಾವಿಡ್ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಕೋಚ್ ಆಗಲಿದ್ದಾರೆ ಎಂಬ ಗಾಳಿ ಸುದ್ದಿಗೆ ತೆರೆ ಬಿದ್ದಿದೆ. ವಿಶೇಷವೆಂದರೆ ಎನ್‌ಸಿಎ ಮುಖ್ಯಸ್ಥರ ಸ್ಥಾನಕ್ಕೆ ಅರ್ಜಿ ಸಲ್ಲಿಸಿರುವ ಏಕಮಾತ್ರ ವ್ಯಕ್ತಿ ದ್ರಾವಿಡ್. ಹೀಗಾಗಿ ದ್ರಾವಿಡ್ ಮತ್ತೆ ಎನ್‌ಸಿಎ ಮುಖ್ಯಸ್ಥರಾಗಿ ಆಯ್ಕೆಯಾಗೋದು ಬಹುತೇಕ ಖಚಿತವಾಗಿದೆ.
"ಹೌದು ಕ್ರಿಕೆಟ್‌ನ ಹೆಡ್ ಆಗಿ ದ್ರಾವಿಡ್ ಮರು ಅರ್ಜಿ ಸಲ್ಲಿದ್ದಾರೆ. ಹೀಗಾಗಿ ಮತ್ತೆ ಅವರೇ ಎನ್‌ಸಿಯೆ ಮುಖ್ಯಸ್ಥರಾಗಿ ಮುಂದುವರೆಯಲಿದ್ದಾರೆ ಅನ್ನೋದಕ್ಕೆ ನೀವೇನೂ ದೊಡ್ಡ ಬುಧ್ಧಿವಂತರಾಗಿರಬೇಕಿಲ್ಲ. ಎನ್‌ಸಿಎಯಲ್ಲಿ ಅದ್ಭುತ ಬದಲಾವಣೆಗಳಿಗೆ ಕಾರಣರಾಗಿರುವುದರಿಂದ ದ್ರಾವಿಡ್ ಮತ್ತೆ ಮುಂದುವರೆಯಲಿದ್ದಾರೆ," ಎಂದು ಬಿಸಿಸಿಐ ಮೂಲವೊಂದು ಪಿಟಿಐಗೆ ತಿಳಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications