For Quick Alerts
ALLOW NOTIFICATIONS  
For Daily Alerts
 

ಶ್ರೀಲಂಕಾ ವಿರುದ್ಧ 2ನೇ ಟೆಸ್ಟ್‌: ರೋಹಿತ್ ಪಡೆಯೊಂದಿಗೆ ಜಿಮ್‌ನಲ್ಲಿ ವರ್ಕೌಟ್ ಮಾಡಿದ ರಾಹುಲ್ ದ್ರಾವಿಡ್

Rahul dravid

ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ಆಟಗಾರರು ಜಿಮ್‌ನಲ್ಲಿ ಹಾಗೂ ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ ನಡೆಸುತ್ತಿದ್ದು, ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಕೂಡ ಸಾಥ್ ನೀಡಿದ್ದಾರೆ.

ಕೋಚ್ ರಾಹುಲ್ ದ್ರಾವಿಡ್ ಇತ್ತೀಚೆಗೆ ಜಿಮ್ ಸೆಷನ್‌ನ ಮುಕ್ತಾಯದ ನಂತರ ನಾಯಕ ರೋಹಿತ್ ಶರ್ಮಾ ಮತ್ತು ಇತರ ಒಂದೆರಡು ಆಟಗಾರರ ಜೊತೆ ಸ್ನ್ಯಾಪ್‌ಗೆ ಪೋಸ್ ನೀಡಿದರು. ಮಾರ್ಚ್ 12 ರಂದು ಬೆಂಗಳೂರಿನಲ್ಲಿ ಆರಂಭವಾಗಲಿರುವ ಸರಣಿಯ ಎರಡನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡವು ತಯಾರಿ ನಡೆಸುತ್ತಿದೆ.

ಜಿಮ್ ಅಭ್ಯಾಸದ ಬಳಿಕ ಏಸ್‌ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಫೋಟೊವೊಂದನ್ನ ಹಂಚಿಕೊಂಡಿದ್ದು, ರಾಹುಲ್‌ ದ್ರಾವಿಡ್‌ರ ಮನವೊಲಿಸಿ ಕೊನೆಗೂ ಜಿಮ್‌ ನಂತರ ಫೋಟೋಗೆ ಪೋಸ್ ನೀಡಲಾಗಿದೆ ಎಂದಿದ್ದಾರೆ. ಅಶ್ವಿನ್ ಈ ಕೆಳಗಿನ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ ಮತ್ತು ಅದಕ್ಕೆ ತನ್ನದೇ ಸ್ಟೈಲ್‌ನಲ್ಲಿ ಶೀರ್ಷಿಕೆ ನೀಡಿದ್ದಾರೆ.

ಈಗಾಗಲೇ ಮೊದಲ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧ ಇನ್ನಿಂಗ್ಸ್‌ ಸೇರಿದಂತೆ 222ರನ್‌ಗಳ ಬೃಹತ್ ಗೆಲುವು ಸಾಧಿಸಿತು. ಭಾರತದ ಸ್ಪಿನ್ ದಾಳಿಗೆ ತತ್ತರಿಸಿದ ಲಂಕಾ ಮೂರೇ ದಿನಕ್ಕೆ ಮುಕ್ತಾಯ ಹಾಡಿತು.

ಎರಡನೇ ಟೆಸ್ಟ್ ಪಂದ್ಯವು ಮಾರ್ಚ್‌ 12ರಿಂದ 16ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಆಲ್‌ರೌಂಡರ್ ಅಕ್ಷರ್ ಪಟೇಲ್‌ ಟೀಂ ಇಂಡಿಯಾ ಸ್ಕ್ವಾಡ್ ಸೇರಿಕೊಂಡಿದ್ದಾರೆ.

Story first published: Tuesday, March 8, 2022, 21:58 [IST]
Other articles published on Mar 8, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+