ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಬಗ್ಗೆ ಭವಿಷ್ಯ ನುಡಿದ ರಾಹುಲ್ ದ್ರಾವಿಡ್

Rahul Dravid predicts Team Indis won the series against england by 3-2

ಇತ್ತೀಚಿನ ದಿನಗಳಲ್ಲಿ ಭಾರತ ದೇಶ ಹಾಗೂ ವಿದೇಶ ಎರಡೂ ಕಡೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿಕೊಂಡು ಬರುತ್ತಿದೆ. ಆಸ್ಟ್ರೇಲಿಯಾದಲ್ಲಿಯೂ ಭಾರತ ಶ್ರೇಷ್ಠ ಪ್ರದರ್ಶನವನ್ನು ನೀಡಿ ಟೆಸ್ಟ್ ಸರಣಿಯನ್ನು ಭರ್ಜರಿಯಾಗಿ ಗೆದ್ದು ಬಂದಿದೆ. ಈಗ ಭಾರತ ಇಂಗ್ಲೆಂಡ್ ವಿರುದ್ಧ ಸರಣಿಗಾಗಿ ಇಂಗ್ಲೆಂಡ್‌ಗೆ ಹಾರಲು ಸಜ್ಜಾಗಿದೆ. ಈ ಸರಣಿಯಲ್ಲಿ ಭಾರತದ ಪ್ರದರ್ಶನ ಹೇಗಿರಲಿದೆ ಎಂಬುದು ಎಲ್ಲರ ಕುತೂಹಲ. ಆದರೆ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಟೀಮ್ ಇಂಡಿಯಾ ಪ್ರದರ್ಶನದ ಬಗ್ಗೆ ಸಾಕಷ್ಟು ನಿರೀಕ್ಷೆಯನ್ನು ವ್ಯಕ್ತಪಡಿಸಿದ್ದಾರೆ.

ರಾಹುಲ್ ದ್ರಾವಿಡ್ ಇಂಗ್ಲೆಂಡ್ ವಿರುದ್ಧ ಇಂಗ್ಲೆಂಡ್ ನೆಲದಲ್ಲಿಯೇ ಟೆಸ್ಟ್ ಸರಣಿಯನ್ನು ಜಯಿಸಿದ ಕೊನೆಯ ನಾಯಕನಾಗಿದ್ದಾರೆ. 2007ರಲ್ಲಿ ಈ ಸಾಧನೆಯನ್ನು ದ್ರಾವಿಡ್ ನೇತೃತ್ವದ ಟೀಮ್ ಇಂಡಿಯಾ ಮಾಡಿತ್ತು. ಈಗ ಭಾರತ ತಂಡ ಮತ್ತೆ ಆ ಸಾಧನೆಯನ್ನು ಪುನರಾವರ್ತನೆ ಮಾಡಲಿದೆ ಎಂಬುದು ದ್ರಾವಿಡ್ ವಿಶ್ವಾಸವಾಗಿದೆ. ಭಾರತ ಈ ಬಾರಿ 3-2 ಅಂತರದಿಂದ ಗೆಲುವು ಸಾಧಿಸಲಿದೆ ಎಂದು ದ್ರಾವಿಡ್ ಹೇಳಿದ್ದಾರೆ.

ಐಪಿಎಲ್ 2021ರ ಉಳಿದ ಪಂದ್ಯಗಳು ಭಾರತದಲ್ಲಿ ನಡೆಯದು: ಖಚಿತಪಡಿಸಿದ ಗಂಗೂಲಿಐಪಿಎಲ್ 2021ರ ಉಳಿದ ಪಂದ್ಯಗಳು ಭಾರತದಲ್ಲಿ ನಡೆಯದು: ಖಚಿತಪಡಿಸಿದ ಗಂಗೂಲಿ

ಭಾರತಕ್ಕೆ ಅತ್ಯುತ್ತಮ ಅವಕಾಶ

ಭಾರತಕ್ಕೆ ಅತ್ಯುತ್ತಮ ಅವಕಾಶ

ಕ್ರಿಕ್ ಇನ್ಫೋಗೆ ನೀಡಿದ ಸಂದರ್ಶನದಲ್ಲಿ ರಾಹುಲ್ ದ್ರಾವಿಡ್ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. "ನಾನು ಈ ಬಾರಿ ನಿಜಕ್ಕೂ ಭಾರತ ತಂಡಕ್ಕೆ ಅತ್ಯುತ್ತಮ ಅವಕಾಶವಿದೆ ಎಂದು ಭಾವಿಸುತ್ತೇನೆ" ಎಂದು ದ್ರಾವಿಡ್ ಹೇಳಿದ್ದಾರೆ. ಈ ಸಂದರ್ಭದಲ್ಲಿ ಇಂಗ್ಲೆಂಡ್ ತಂಡದ ಬೌಲಿಂಗ್ ಸಾಮರ್ಥ್ಯವನ್ನು ಪ್ರಶಂಸಿಸಿದ್ದಾರೆ ದ್ರಾವಿಡ್. ಜೊತೆಗೆ ಇಂಗ್ಲೆಂಡ್ ತಂಡದ ಬ್ಯಾಟಿಂಗ್‌ನಲ್ಲಿ ಶ್ರೇಷ್ಠ ಆಟಗಾರ ಎನಿಸಿರುವ ನಾಯಕ ಜೋ ರೂಟ್ ಪಾತ್ರ ಮಹತ್ವದ್ದಾಗಿರುತ್ತದೆ ಎಂದಿದ್ದಾರೆ ದ್ರಾವಿಡ್.

ಭಾರತ ತಂಡದಲ್ಲಿದೆ ಆತ್ಮವಿಶ್ವಾಸ

ಭಾರತ ತಂಡದಲ್ಲಿದೆ ಆತ್ಮವಿಶ್ವಾಸ

"ಆದರೆ ಭಾರತ ಅತ್ಯುತ್ತಮ ಸಿದ್ದತೆಯನ್ನು ಮಾಡಿಕೊಂಡಿದ್ದು ಆಸ್ಟ್ರೇಲಿಯಾ ಸರಣಿಯಿಂದ ಸಾಕಷ್ಟು ಆತ್ಮವಿಶ್ವಾಸವನ್ನು ಗಳಿಸಿಕೊಂಡಿದೆ. ಹೀಗಾಗಿ ತಂಡದೊಳಗೆ ಸಾಕಷ್ಟು ನಂಬಿಕೆಗಳು ಇವೆ. ಕೆಲ ಆಟಗಾರರು ಇಂಗ್ಲೆಂಡ್‌ಗೆ ಈ ಹಿಂದೆ ಕೆಲ ಬಾರಿ ಪ್ರವಾಸ ಮಾಡಿದ ಅನುಭವ ಹೊಂದಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಸಾಕಷ್ಟು ಅನುಭವವಿದೆ. ಹೀಗಾಗಿ ಈ ಬಾರಿಯ ಪ್ರವಾಸದಲ್ಲಿ ಸರಣಿಯನ್ನು ವಶಕ್ಕೆ ಪಡೆಯಲು ಅತ್ಯುತ್ತಮ ಅವಕಾಶ ಭಾರತಕ್ಕೆ ಇದೆ" ಎಂದು ರಾಹುಲ್ ದ್ರಾವಿಡ್ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಐದು ಪಂದ್ಯಗಳ ಟೆಸ್ಟ್ ಸರಣಿ

ಐದು ಪಂದ್ಯಗಳ ಟೆಸ್ಟ್ ಸರಣಿ

ಜೂನ್ 18ರಿಂದ 22ರವರೆಗೆ ನಡೆಯುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಂದ್ಯ ನಂತರ ಭಾರತ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಅವಧಿಯನ್ನು ಇದು ಆಯೋಜನೆಯಾಗಲಿದೆ.

Story first published: Monday, May 10, 2021, 16:42 [IST]
Other articles published on May 10, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X