ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಬಿಜೆಪಿ ಯುವ ಮೋರ್ಚಾ ಸಭೆಯಲ್ಲಿ ಪಾಲ್ಗೊಳ್ಳುವ ವರದಿ ನಿರಾಕರಿಸಿದ ರಾಹುಲ್ ದ್ರಾವಿಡ್

ಭಾರತದ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್, ಸದ್ಯ ಪುರುಷರ ರಾಷ್ಟ್ರೀಯ ತಂಡದ ಮುಖ್ಯ ಕೋಚ್ ಆಗಿದ್ದಾರೆ. ಮಂಗಳವಾರದಂದು ಅವರು ಈ ವಾರದ ಕೊನೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ಚುನಾವಣೆಗೆ ಒಳಪಡುವ ಬಿಜೆಪಿಯ ಯುವ ಮೋರ್ಚಾ ಅಥವಾ ಯುವ ಘಟಕದ ಸಭೆಯಲ್ಲಿ ಭಾಗವಹಿಸುತ್ತಾರೆ ಎಂಬ ವರದಿಗಳನ್ನು ದೃಢವಾಗಿ ನಿರಾಕರಿಸಿದ್ದಾರೆ. ಈ ವರದಿ ಸುಳ್ಳು ಎಂದು ರಾಹುಲ್ ದ್ರಾವಿಡ್ ಹೇಳಿದ್ದಾರೆ.

ಮೇ 12ರಿಂದ ನಡೆಯುವ ಬಿಜೆಪಿ ಯುವ ಮೋರ್ಚಾ ಸಭೆಯಲ್ಲಿ ರಾಹುಲ್ ದ್ರಾವಿಡ್ ಭಾಗಿ!ಮೇ 12ರಿಂದ ನಡೆಯುವ ಬಿಜೆಪಿ ಯುವ ಮೋರ್ಚಾ ಸಭೆಯಲ್ಲಿ ರಾಹುಲ್ ದ್ರಾವಿಡ್ ಭಾಗಿ!

"2022ರ ಮೇ 12ರಿಂದ 15 ರವರೆಗೆ ಹಿಮಾಚಲ ಪ್ರದೇಶದಲ್ಲಿ ನಾನು ಸಭೆಗೆ ಹಾಜರಾಗುತ್ತೇನೆ ಎಂದು ಮಾಧ್ಯಮದ ಒಂದು ವಿಭಾಗ ವರದಿ ಮಾಡಿದೆ. ಈ ವರದಿಯು ತಪ್ಪಾಗಿದೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ," ಎಂದು ದ್ರಾವಿಡ್ ಸುದ್ದಿ ಸಂಸ್ಥೆ ANIಗೆ ತಿಳಿಸಿದರು.

Rahul Dravid Refuses Report of He Will Attended BJP Youth Morcha Meeting

ಇಂದು ಮುಂಜಾನೆ, ಹಿಮಾಚಲದ ಧರ್ಮಶಾಲಾದ ಬಿಜೆಪಿ ಶಾಸಕ ವಿಶಾಲ್ ನೆಹ್ರಿಯಾ ಅವರು ಮೇ 12 ಮತ್ತು ಮೇ 15ರ ನಡುವೆ ಬಿಜೆಪಿ ಯುವ ಮೋರ್ಚಾ ಸಭೆಯಲ್ಲಿ ರಾಹುಲ್ ದ್ರಾವಿಡ್ ಭಾಗವಹಿಸಲಿದ್ದಾರೆ ಎಂದು ಹೇಳಿದ್ದರು.

ANIಗೆ ಮಾತನಾಡಿದ್ದ ವಿಶಾಲ್ ನೆಹ್ರಿಯಾ, ರಾಹುಲ್ ದ್ರಾವಿಡ್ ಭಾಗವಹಿಸುವಿಕೆಯು ಯುವಜನತೆಗೆ ಸಂದೇಶವನ್ನು ನೀಡುತ್ತದೆ. ಅವರು ರಾಜಕೀಯದಲ್ಲಿ ಮಾತ್ರವಲ್ಲದೆ ಇತರ ಕ್ಷೇತ್ರಗಳಲ್ಲಿಯೂ ಮುನ್ನಡೆಯಬಹುದು. ಈ ವರ್ಷಾಂತ್ಯದಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ವಿಶಾಲ್ ನೆಹ್ರಿಯಾ ಹೇಳಿದ್ದರು.

Rahul Dravid Refuses Report of He Will Attended BJP Youth Morcha Meeting

"ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯು ಮೇ 12 ರಿಂದ 15 ರವರೆಗೆ ಧರ್ಮಶಾಲಾದಲ್ಲಿ ನಡೆಯಲಿದೆ. ಬಿಜೆಪಿಯ ರಾಷ್ಟ್ರೀಯ ನಾಯಕರು ಮತ್ತು ಹಿಮಾಚಲ ಪ್ರದೇಶದ ನಾಯಕರು ಭಾಗಿಯಾಗಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕೇಂದ್ರ ಸಚಿವರು ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ," ಎಂದು ಅವರು ಹೇಳಿದರು.

ಇದರಲ್ಲಿ ಭಾರತದ ಕ್ರಿಕೆಟಿಗ ರಾಹುಲ್ ದ್ರಾವಿಡ್ ಕೂಡ ಭಾಗವಹಿಸಲಿದ್ದಾರೆ. ಅವರ ಯಶಸ್ಸಿನಿಂದ ಯುವಕರಲ್ಲಿ ರಾಜಕೀಯ ಮಾತ್ರವಲ್ಲದೆ ಇತರ ಕ್ಷೇತ್ರಗಳಲ್ಲಿಯೂ ಮುನ್ನಡೆಯಬಹುದು ಎಂಬ ಸಂದೇಶವನ್ನು ನೀಡಲಾಗುವುದು ಎಂದಿದ್ದರು.

Rashid Khan ಗುಜರಾತ್ ತಂಡಕ್ಕೆ ಕೊಟ್ಟ ಕೊಡುಗೆ ಇದೇ | Oneindia Kannada

ಹಿಮಾಚಲ ಪ್ರದೇಶದಲ್ಲಿ ನವೆಂಬರ್-ಡಿಸೆಂಬರ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಆಡಳಿತಾರೂಢ ಭಾರತೀಯ ಜನತಾ ಪಕ್ಷವು ಈ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶ, ಗೋವಾ, ಮಣಿಪುರ ಮತ್ತು ಉತ್ತರಾಖಂಡದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರಿಂದ ಇಲ್ಲಿಯೂ ಗೆಲುವು ಎದುರು ನೋಡುತ್ತಿದೆ.

Story first published: Wednesday, May 11, 2022, 9:21 [IST]
Other articles published on May 11, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X