ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇವರು ಸರಣಿಯಲ್ಲಿ ಇಲ್ಲದೇ ಇದ್ದುದರಿಂದ ದ.ಆಫ್ರಿಕಾ ವಿರುದ್ಧ ಸೋಲಬೇಕಾಯಿತು ಎಂದ ದ್ರಾವಿಡ್!

Rahul Dravid revealed the reason for Team Indias loss in Test and ODI series against South Africa
KL Rahul ನಾಯಕತ್ವದ ಫೇಲ್ಯೂರ್ ಬಗ್ಗೆ Rahul Dravid ಹೇಳಿದ್ದೇನು? | Oneindia Kannada

ಕಳೆದ ತಿಂಗಳು ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡಿದ್ದ ಟೀಮ್ ಇಂಡಿಯಾ ಹರಿಣಗಳ ವಿರುದ್ಧ ಆಯೋಜಿಸಲಾಗಿದ್ದ 3 ಪಂದ್ಯಗಳ ಟೆಸ್ಟ್ ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾಗವಹಿಸಿ ಎರಡೂ ಸರಣಿಗಳಲ್ಲಿಯೂ ಕೂಡ ಸೋಲುವುದರ ಮೂಲಕ ಭಾರೀ ಮುಖಭಂಗಕ್ಕೆ ಒಳಗಾಗಿದೆ.

ದಕ್ಷಿಣ ಆಫ್ರಿಕಾ ಸರಣಿ ಸೋಲಿನ ಬೆನ್ನಲ್ಲೇ 3ನೇ ಪಂದ್ಯದ ಆ ಘಟನೆ ಕುರಿತು ಬೇಸರಗೊಂಡ ಕೊಹ್ಲಿದಕ್ಷಿಣ ಆಫ್ರಿಕಾ ಸರಣಿ ಸೋಲಿನ ಬೆನ್ನಲ್ಲೇ 3ನೇ ಪಂದ್ಯದ ಆ ಘಟನೆ ಕುರಿತು ಬೇಸರಗೊಂಡ ಕೊಹ್ಲಿ

ಮೊದಲಿಗೆ ಇತ್ತಂಡಗಳ ನಡುವೆ ನಡೆದ ಟೆಸ್ಟ್ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸಿ ಭಾರತ ತಂಡದ ವಿರುದ್ಧ 2-1 ಅಂತರದಲ್ಲಿ ಗೆಲ್ಲುವುದರ ಮೂಲಕ ಸರಣಿಯನ್ನು ವಶಪಡಿಸಿಕೊಂಡರೆ, ನಂತರ ನಡೆದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದ ದ. ಆಫ್ರಿಕಾ ಟೀಮ್ ಇಂಡಿಯಾಗೆ ವೈಟ್ ವಾಷ್ ಬಳಿದಿದೆ. ಇನ್ನು ಟೀಮ್ ಇಂಡಿಯಾ ಇದೇ ಮೊದಲ ಬಾರಿಗೆ ರಾಹುಲ್ ದ್ರಾವಿಡ್ ಮಾರ್ಗದರ್ಶನದಡಿಯಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡಿತ್ತು. ಇದಕ್ಕೂ ಮುನ್ನ ತವರಿನಲ್ಲಿ ನಡೆದಿದ್ದ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಹಾಗೂ ಟಿ ಟ್ವೆಂಟಿ ಸರಣಿಗಳನ್ನು ವಶಪಡಿಸಿಕೊಳ್ಳುವುದರ ಮೂಲಕ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಮಿಂಚಿತ್ತು.

ದ.ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು: ಕೊಹ್ಲಿ ನಾಯಕತ್ವ ಕಿತ್ತುಕೊಂಡವರ ಪ್ಲಾನ್ ಫ್ಲಾಪ್ ಎಂದ ಮಾಜಿ ಕ್ರಿಕೆಟಿಗ!ದ.ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು: ಕೊಹ್ಲಿ ನಾಯಕತ್ವ ಕಿತ್ತುಕೊಂಡವರ ಪ್ಲಾನ್ ಫ್ಲಾಪ್ ಎಂದ ಮಾಜಿ ಕ್ರಿಕೆಟಿಗ!

ಹೌದು, ಕಳೆದ ವರ್ಷ ನಡೆದ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬೆನ್ನಲ್ಲೇ ರವಿಶಾಸ್ತ್ರಿ ಭಾರತ ಹೆಡ್ ಕೋಚ್ ಸ್ಥಾನದಿಂದ ಕೆಳಗಿಳಿದರು. ನಂತರ ಬಿಸಿಸಿಐ ರಾಹುಲ್ ದ್ರಾವಿಡ್ ಅವರನ್ನು ಭಾರತ ತಂಡದ ನೂತನ ಕೋಚ್ ಎಂದು ನೇಮಕ ಮಾಡಿತು. ಹೀಗೆ ಅಧಿಕಾರ ಸ್ವೀಕರಿಸಿದ ನಂತರ ತಂಡವನ್ನು ಕೋಚ್ ಆಗಿ ಮುನ್ನಡೆಸಿದ ರಾಹುಲ್ ದ್ರಾವಿಡ್ ನ್ಯೂಜಿಲೆಂಡ್ ವಿರುದ್ಧದ ಸರಣಿಗಳಲ್ಲಿ ಮೊದಲನೆಯದಾಗಿ ತಂಡವನ್ನು ಮುನ್ನಡೆಸಿ ಜಯದೊಂದಿಗೆ ಶುಭಾರಂಭವನ್ನು ಮಾಡಿದರು. ಹೀಗೆ ಕೋಚ್ ಆದ ಬೆನ್ನಲ್ಲೇ ನಡೆದ ಚೊಚ್ಚಲ ಸರಣಿಯಲ್ಲಿಯೇ ಗೆಲುವಿನೊಂದಿಗೆ ಮೆಚ್ಚುಗೆಗೆ ಪಾತ್ರವಾಗಿದ್ದ ರಾಹುಲ್ ದ್ರಾವಿಡ್ ಇದೀಗ ದಕ್ಷಿಣ ಆಫ್ರಿಕಾ ನೆಲದಲ್ಲಿ ಸೋಲಿನ ರುಚಿಯನ್ನು ಕಂಡಿದ್ದಾರೆ. ಹೀಗೆ 2 ಸರಣಿಗಳ ಸತತ ಸೋಲಿನ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿರುವ ರಾಹುಲ್ ದ್ರಾವಿಡ್ ತಂಡ ಎಲ್ಲಿ ಎಡವಿತು ಎಂಬುದನ್ನು ಈ ಕೆಳಕಂಡಂತೆ ಬಿಚ್ಚಿಟ್ಟಿದ್ದಾರೆ.

ತಂಡಕ್ಕೆ ಬೇಕಾದ ಆಟಗಾರರು ಆಯ್ಕೆಗೆ ಲಭ್ಯವಿರಲಿಲ್ಲ ಎಂದ ರಾಹುಲ್ ದ್ರಾವಿಡ್

ತಂಡಕ್ಕೆ ಬೇಕಾದ ಆಟಗಾರರು ಆಯ್ಕೆಗೆ ಲಭ್ಯವಿರಲಿಲ್ಲ ಎಂದ ರಾಹುಲ್ ದ್ರಾವಿಡ್

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗಳಲ್ಲಿ ಟೀಮ್ ಇಂಡಿಯಾ ಉತ್ತಮ ಪ್ರದರ್ಶನ ನೀಡದೇ ಇರುವುದರ ಕುರಿತು ಮಾತನಾಡಿರುವ ರಾಹುಲ್ ದ್ರಾವಿಡ್ ಟೀಮ್ ಇಂಡಿಯಾ ಸಮತೋಲನವಾಗಿರಲಿಲ್ಲ ಎಂಬ ವಿಷಯವನ್ನು ಹಂಚಿಕೊಂಡಿದ್ದಾರೆ. ತಂಡದ ಆಯ್ಕೆ ನಡೆಯುವಾಗ ಆರನೇ, ಏಳನೇ ಹಾಗೂ ಎಂಟನೇ ಕ್ರಮಾಂಕದಲ್ಲಿ ಕಣಕ್ಕಿಳಿದು ತಂಡದಲ್ಲಿ ಸಮತೋಲನ ಉಂಟು ಮಾಡಬಲ್ಲಂತಹ ಆಲ್ ರೌಂಡರ್ ಆಟಗಾರರು ಲಭ್ಯವಿರಲಿಲ್ಲ ಹೀಗಾಗಿ ತಂಡ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಯಿತು ಎಂದು ರಾಹುಲ್ ದ್ರಾವಿಡ್ ಹೇಳಿದ್ದಾರೆ.

ಆ ಆಟಗಾರರು ಮತ್ತೆ ತಂಡ ಸೇರಿದರೆ ತಂಡ ಸಮತೋಲನವಾಗಲಿದೆ

ಆ ಆಟಗಾರರು ಮತ್ತೆ ತಂಡ ಸೇರಿದರೆ ತಂಡ ಸಮತೋಲನವಾಗಲಿದೆ

ರಾಹುಲ್ ದ್ರಾವಿಡ್ ಅವರು ಹೇಳಿದ ಪ್ರಕಾರ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯಬೇಕಿದ್ದ ಆಟಗಾರರೆಂದರೆ ಅದು ರವೀಂದ್ರ ಜಡೇಜಾ ಮತ್ತು ಹಾರ್ದಿಕ್ ಪಾಂಡ್ಯ. ಹೌದು, ಈ ಇಬ್ಬರೂ ಸಹ ಗಾಯದ ಸಮಸ್ಯೆಗೊಳಗಾಗಿರುವ ಕಾರಣ ತಂಡದ ಆಯ್ಕೆಗೆ ಲಭ್ಯವಿರಲಿಲ್ಲ, ಈ ಇಬ್ಬರ ಕುರಿತಾಗಿಯೇ ರಾಹುಲ್ ದ್ರಾವಿಡ್ ಹೇಳಿಕೆಯನ್ನು ನೀಡಿದ್ದಾರೆ. ಹಾಗೂ ಇನ್ನೂ ಮುಂದುವರಿದು ಮಾತನಾಡಿದ ಅವರು ಈ ಆಟಗಾರರು ಮತ್ತೆ ತಂಡವನ್ನು ಸೇರಿಕೊಂಡರೆ ತಂಡ ಸಮತೋಲನವಾಗಿರಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಮಧ್ಯಮ ಓವರ್‌ಗಳಲ್ಲಿ ಬ್ಯಾಟಿಂಗ್ ಸುಧಾರಿಸಿಕೊಳ್ಳಬೇಕು ಎಂದ ದ್ರಾವಿಡ್

ಮಧ್ಯಮ ಓವರ್‌ಗಳಲ್ಲಿ ಬ್ಯಾಟಿಂಗ್ ಸುಧಾರಿಸಿಕೊಳ್ಳಬೇಕು ಎಂದ ದ್ರಾವಿಡ್

ಇನ್ನು ತಂಡದಲ್ಲಿ ಆಗಬೇಕಿರುವ ಮತ್ತೊಂದು ಬದಲಾವಣೆ ಕುರಿತು ಮಾತನಾಡಿದ ರಾಹುಲ್ ದ್ರಾವಿಡ್ ಪಂದ್ಯದ ಮಧ್ಯಮ ಓವರ್‌ಗಳಲ್ಲಿ ಟೀಮ್ ಇಂಡಿಯಾದ ಬ್ಯಾಟಿಂಗ್ ಸುಧಾರಿಸಿಕೊಳ್ಳಬೇಕು ಎಂದಿದ್ದಾರೆ. ಮಧ್ಯಮ ಓವರ್‌ಗಳಲ್ಲಿ ಉತ್ತಮ ಹೊಡೆತಗಳನ್ನು ಬಾರಿಸಿ ರನ್ ಗಳಿಸಿದ್ದರೆ ದಕ್ಷಿಣ ಆಫ್ರಿಕಾ ನೀಡಿದ್ದ ಗುರಿಯನ್ನು ಮುಟ್ಟಬಹುದಿತ್ತು ಆದರೆ ನಿರ್ಣಾಯಕ ಹಂತಗಳಲ್ಲಿ ಬ್ಯಾಟಿಂಗ್ ವಿಫಲತೆ ಕಂಡ ಕಾರಣ ಗೆಲ್ಲಲಾಗಲಿಲ್ಲ ಎಂದು ದ್ರಾವಿಡ್ ತಿಳಿಸಿದ್ದಾರೆ.

Story first published: Monday, January 24, 2022, 17:20 [IST]
Other articles published on Jan 24, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X