For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾ ವಿರುದ್ಧ ಸರಣಿ ಗೆದ್ದ ಬಳಿಕ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದೇನು ಗೊತ್ತಾ?

ವಿಶ್ವಕಪ್‌ಗೂ ಮುನ್ನ ಭಾರತ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯ್ಳ ಏಕದಿನ ಸರಣಿಯನ್ನು ಯಶಸ್ವಿಯಾಗಿ ಗೆದ್ದುಕೊಂಡಿದೆ. ಅಂತಿಮ ಪಂದ್ಯದಲ್ಲಿ ಸೋಲಿನ ಹೊರತಾಗಿಯೂ ಈ ಸರಣಿಯಲ್ಲಿ ಟೀಮ್ ಇಂಡಿಯಾ ಅದ್ಭುತ ಪ್ರದರ್ಶನ ನೀಡಲು ಯಶಸ್ವಿಯಾಗಿದ್ದು 2-1 ಅಂತರದಿಂದ ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಈ ಸರಣಿಯ ಮುಕ್ತಾಯದ ಬಳಿಕ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಮಾತನಾಡಿದ್ದು ತಂಡದ ಪ್ರದರ್ಶನದ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ.

ರಾಜ್‌ಕೋಟ್‌ನಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾಗೆ 66 ರನ್‌ಗಳ ಅಂತದಿಂದ ಶರಣಾಗಿತ್ತು. ಆದರೆ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದ್ದ ಕಾರಣ ಸರಣಿಯನ್ನು ಅದಾಗಲೇ ತನ್ನ ವಶಕ್ಕೆ ಪಡೆದುಕೊಂಡಿದೆ.

Rahul Dravid said India want to carry momentum of series victory against Australia to World Cup

ಪಂದ್ಯದ ಬಳಿಕ ಮಾತನಾಡಿದ ಕೋಚ್ ರಾಹುಲ್ ದ್ರಾವಿಡ್ "ಎಲ್ಲಾ ಆಟಗಾರರಿಗೂ ಪಂದ್ಯದ ಸಮಯ ಬಹಳ ಮುಖ್ಯವಾಗಿತ್ತು. ಈ ಸರಣಿಯ ಮೂಲಕ ಅದನ್ನು ಅವರಿಂದ ಪಡೆಯಲು ಸಾಧ್ಯವಾಗಿದೆ. ಹಾಗಾಗಿ ನಾವು ಈಗ ಮತ್ತಷ್ಟು ಉತ್ತಮ ಸ್ಥಿತಿಯಲ್ಲಿದ್ದೇವೆ" ಎಂದಿದ್ದಾರೆ. ಇನ್ನು ಈ ಸರಣಿಯಲ್ಲಿ ತಂಡದ ಪ್ರಮುಖ ಆಟಗಾರರಾದ ಜಸ್ಪ್ರೀತ್ ಬೂಮ್ರಾ, ಆರ್ ಅಶ್ವಿನ್ ಮತ್ತು ಕೆಎಲ್ ರಾಹುಲ್ ಅವರಂಥಾ ಆಟಗಾರರು ನೀಡಿದ ಪ್ರದರ್ಶನಕ್ಕೆ ಸಂತೋಷಪಟ್ಟಿದ್ದಾರೆ. ಅಲ್ಲದೆ ಗಾಯದ ನಂತರ ಇಂದೋರ್‌ನಲ್ಲಿ ಶತಕ ಗಳಿಸಿದ ಶ್ರೇಯಸ್ ಅಯ್ಯರ್‌ ಬಗ್ಗೆಯೂ ಮುಖ್ಯ ಕೋಚ್ ಪ್ರಶಂಸೆಯ ಮಾತುಗಳನ್ನು ಆಡಿದ್ದಾರೆ.

ವಿಶ್ವಕಪ್‌ನಲ್ಲಿ ಭಾರತದ ಮೊದಲ ಪಂದ್ಯವು ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 8 ರಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ. ಅದಕ್ಕೂ ಮೊದಲು, ಭಾರತ ಇಂಗ್ಲೆಂಡ್ ಮತ್ತು ನೆದರ್‌ಲ್ಯಾಂಡ್‌ ತಂಡಗಳ ವಿರುದ್ಧ ಅಭ್ಯಾಸ ಪಂದ್ಯಗಳನ್ನಾಡಲಿದ್ದು ಗುವಾಹಟಿ ಮತ್ತು ತಿರುವನಂತಪುರದಲ್ಲಿ ಈ ಎರಡು ಅಭ್ಯಾಸ ಪಂದ್ಯಗಳು ನಡೆಯಲಿದೆ.

ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ
ಬೆಂಚ್: ಇಶಾನ್ ಕಿಶನ್, ರವಿಚಂದ್ರನ್ ಅಶ್ವಿನ್

ಆಸ್ಟ್ರೇಲಿಯಾ: ಮಿಚೆಲ್ ಮಾರ್ಷ್, ಡೇವಿಡ್ ವಾರ್ನರ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ತನ್ವೀರ್ ಸಂಘ, ಜೋಶ್ ಹ್ಯಾಜಲ್‌ವುಡ್
ಬೆಂಚ್: ಮ್ಯಾಥ್ಯೂ ಶಾರ್ಟ್, ಜೋಶ್ ಇಂಗ್ಲಿಸ್, ಸೀನ್ ಅಬ್ಬೋಟ್, ಆಡಮ್ ಝಂಪಾ, ಮಾರ್ಕಸ್ ಸ್ಟೋನಿಸ್

Story first published: Thursday, September 28, 2023, 13:17 [IST]
Other articles published on Sep 28, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+