ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಬ್ರಿಟಿಷ್‌ ರಾಯಭಾರಿಗೆ ಕನ್ನಡ ಕಲಿಸಿದ ರಾಹುಲ್ ದ್ರಾವಿಡ್; ವೈರಲ್ ವಿಡಿಯೋ ನೋಡಿ

Rahul Dravid teaches Kannada to British High Commissioner Alex Ellis

ಕನ್ನಡಿಗ ರಾಹುಲ್ ದ್ರಾವಿಡ್ ಇತ್ತೀಚಿಗಷ್ಟೆ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಟೀಮ್ ಇಂಡಿಯಾಕ್ಕೆ ತರಬೇತುದಾರರಾಗಿ ಕಾರ್ಯ ನಿರ್ವಹಿಸಿದ್ದರು. ಹೀಗೆ ಶ್ರೀಲಂಕಾ ಪ್ರವಾಸದಲ್ಲಿ ಟೀಮ್ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ರಾಹುಲ್ ದ್ರಾವಿಡ್ ಅವರಿಗೆ ಟೀಮ್ ಇಂಡಿಯಾದ ಪ್ರಮುಖ ತರಬೇತುದಾರನಾಗಿ ಅವಕಾಶ ನೀಡಬೇಕೆಂದು ಸಾಮಾಜಿಕ ಜಾಲತಾಣದ ತುಂಬಾ ದೊಡ್ಡ ಮಟ್ಟದಲ್ಲಿ ಬೇಡಿಕೆ ಎದುರಾಗಿತ್ತು.

'ಹಾಕಿ ಭಾರತದ ರಾಷ್ಟ್ರೀಯ ಕ್ರೀಡೆ ಅಲ್ಲ!'; ಕೇಂದ್ರ ಸರ್ಕಾರಕ್ಕೆ ಹೆಚ್ಚಾಯ್ತು ಒತ್ತಡ!'ಹಾಕಿ ಭಾರತದ ರಾಷ್ಟ್ರೀಯ ಕ್ರೀಡೆ ಅಲ್ಲ!'; ಕೇಂದ್ರ ಸರ್ಕಾರಕ್ಕೆ ಹೆಚ್ಚಾಯ್ತು ಒತ್ತಡ!

ಹೀಗೆ ಶ್ರೀಲಂಕಾ ಸರಣಿಯ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದ ರಾಹುಲ್ ದ್ರಾವಿಡ್ ಇದೀಗ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಭಾರತದ ಬ್ರಿಟಿಷ್ ರಾಯಭಾರಿ ಅಲೆಕ್ಸ್ ಎಲ್ಲಿಸ್‌ಗೆ ಕನ್ನಡ ಕಲಿಸುವುದರ ಮೂಲಕ ರಾಹುಲ್ ದ್ರಾವಿಡ್ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಪಟ್ಟಿ ಸೇರಿದ್ದಾರೆ. ಭಾರತದ ಬ್ರಿಟಿಷ್ ರಾಯಭಾರಿ ಅಲೆಕ್ಸ್ ಎಲ್ಲಿಸ್ ಅವರು ಸದ್ಯ ದಕ್ಷಿಣ ಭಾರತದ ಪ್ರವಾಸದಲ್ಲಿದ್ದು ದಕ್ಷಿಣ ಭಾರತದ ವಿವಿಧ ನಗರಗಳಿಗೆ ಭೇಟಿ ನೀಡಿ ಇಲ್ಲಿನ ಸಂಸ್ಕೃತಿ ಮತ್ತು ಭಾಷೆಗಳನ್ನು ಅರ್ಥ ಮಾಡಿಕೊಳ್ಳುವ ಪ್ರಯತ್ನವನ್ನು ಮಾಡುತ್ತಿದ್ದಾರೆ.

ಚಿನ್ನ ಗೆದ್ದ ನೀರಜ್ ಚೋಪ್ರಾಗೆ ಕರ್ನಾಟಕ ರಾಜ್ಯದಿಂದ ಸಿಕ್ಕ ವಿಶೇಷ ಗೌರವಗಳು ಯಾವುವು ಗೊತ್ತಾ?ಚಿನ್ನ ಗೆದ್ದ ನೀರಜ್ ಚೋಪ್ರಾಗೆ ಕರ್ನಾಟಕ ರಾಜ್ಯದಿಂದ ಸಿಕ್ಕ ವಿಶೇಷ ಗೌರವಗಳು ಯಾವುವು ಗೊತ್ತಾ?

ಹೀಗೆ ಭಾರತದ ದಂತಕತೆ ರಾಹುಲ್ ದ್ರಾವಿಡ್ ಅವರನ್ನು ಭೇಟಿಯಾದ ಭಾರತದ ಬ್ರಿಟಿಷ್ ರಾಯಭಾರಿ ಅಲೆಕ್ಸ್ ಎಲ್ಲಿಸ್ ಅವರು ರಾಹುಲ್ ದ್ರಾವಿಡ್ ಅವರ ಜೊತೆ ಮಾತನಾಡಿ ರಾಹುಲ್ ದ್ರಾವಿಡ್ ಅವರಿಂದ ಕನ್ನಡ ಪಾಠವನ್ನು ಮಾಡಿಸಿಕೊಂಡಿದ್ದಾರೆ. ಅಲೆಕ್ಸ್ ಎಲ್ಲಿಸ್ ಅವರನ್ನು ಭೇಟಿಯಾದ ರಾಹುಲ್ ದ್ರಾವಿಡ್ ಪ್ರೀತಿಯಿಂದಲೇ ಅವರನ್ನು ಮಾತನಾಡಿಸಿ ಅವರಿಗೆ ಕನ್ನಡದ ಕೆಲವೊಂದು ಪದಗಳನ್ನು ಹೇಳಿಕೊಟ್ಟಿದ್ದಾರೆ.

ಭಾರತ vs ಇಂಗ್ಲೆಂಡ್: 2ನೇ ಟೆಸ್ಟ್‌ನಲ್ಲಿ ಭಾಗಿಯಾಗಲು ಲಂಡನ್‌ಗೆ ಪ್ರಯಾಣಿಸಿದ ಟೀಮ್ ಇಂಡಿಯಾಭಾರತ vs ಇಂಗ್ಲೆಂಡ್: 2ನೇ ಟೆಸ್ಟ್‌ನಲ್ಲಿ ಭಾಗಿಯಾಗಲು ಲಂಡನ್‌ಗೆ ಪ್ರಯಾಣಿಸಿದ ಟೀಮ್ ಇಂಡಿಯಾ

ಹೀಗೆ ರಾಹುಲ್ ದ್ರಾವಿಡ್ ಅವರಿಂದ ಕನ್ನಡ ಪಾಠವನ್ನು ಹೇಳಿಸಿಕೊಂಡಿರುವ ಭಾರತದ ಬ್ರಿಟಿಷ್ ರಾಯಭಾರಿ ಅಲೆಕ್ಸ್ ಎಲ್ಲಿಸ್ ಅವರ ಮತ್ತು ರಾಹುಲ್ ದ್ರಾವಿಡ್ ನಡುವಿನ ಕನ್ನಡ ಸಂಭಾಷಣೆಯ ವೀಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ. ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಹುಲ್ ದ್ರಾವಿಡ್ ಅವರನ್ನು ಭೇಟಿ ಮಾಡಿದ್ದಾಗಿನ ವಿಡಿಯೋವನ್ನು ಹಂಚಿಕೊಂಡಿರುವ ಅಲೆಕ್ಸ್ ಎಲ್ಲಿಸ್ ಕೋಚ್ ರಾಹುಲ್ ದ್ರಾವಿಡ್ ಅವರು ಕನ್ನಡ ಪಾಠ ಹೇಳಿಕೊಡುವುದಕ್ಕಿಂತ ಉತ್ತಮವಾದದ್ದು ಇನ್ನೇನಿದೆ ಎಂದು ಬರೆದುಕೊಳ್ಳುವುದರ ಮೂಲಕ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಮೊದಲ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌ಗೆ ಭಾರತ ರವಾನಿಸಿದ 5 ಕಠಿಣ ಸಂದೇಶಗಳಿವು!ಮೊದಲ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌ಗೆ ಭಾರತ ರವಾನಿಸಿದ 5 ಕಠಿಣ ಸಂದೇಶಗಳಿವು!

ಈ ವಿಡಿಯೋದಲ್ಲಿ ರಾಹುಲ್ ದ್ರಾವಿಡ್ ಅಲೆಕ್ಸ್ ಎಲ್ಲಿಸ್ ಅವರಿಗೆ 'ಓಡು ಓಡು' ಎಂಬ ಪದವನ್ನು ಹೇಳಿಕೊಟ್ಟಿದ್ದಾರೆ, ಈ ಪದದ ಅರ್ಥವನ್ನು ಇಂಗ್ಲಿಷ್ ಭಾಷೆಯಲ್ಲಿ ತಿಳಿಸಿದ ಅಲೆಕ್ಸ್ ಎಲ್ಲಿಸ್ ಓಡು ಓಡು ಎಂದರೆ ಸಿಂಗಲ್ ರನ್ ಎಂದರ್ಥ ಎಂದು ಉತ್ತರ ನೀಡಿದ್ದಾರೆ. 29 ಸೆಕೆಂಡುಗಳ ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ರಾಹುಲ್ ದ್ರಾವಿಡ್ ಸರಳತೆ ಮತ್ತು ಅಲೆಕ್ಸ್ ಎಲ್ಲಿಸ್ ದಕ್ಷಿಣ ಭಾರತದ ಪ್ರೇಮದ ಕುರಿತು ಸಾಕಷ್ಟು ಮೆಚ್ಚುಗೆಗಳು ವ್ಯಕ್ತವಾಗುತ್ತಿವೆ.

ನಾನು ಗೆದ್ದ ಪದಕ ಇಡೀ ದೇಶಕ್ಕೆ ಸೇರಿದ್ದು ಎಂದ ಬಂಗಾರದ ಹುಡುಗ ನೀರಜ್ ಚೋಪ್ರಾನಾನು ಗೆದ್ದ ಪದಕ ಇಡೀ ದೇಶಕ್ಕೆ ಸೇರಿದ್ದು ಎಂದ ಬಂಗಾರದ ಹುಡುಗ ನೀರಜ್ ಚೋಪ್ರಾ

Ravichandran Ashwin ಅವರ ಪಾಲಿಗೆ ವಿಲನ್ ಆಗಿದ್ದಾರಾ Virat | Oneindia Kannada

ಇನ್ನು ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ನಂತರ ಪ್ರಸ್ತುತ ಭಾರತ ತಂಡದ ಮುಖ್ಯ ತರಬೇತುದಾರನಾಗಿ ಕೆಲಸ ನಿರ್ವಹಿಸುತ್ತಿರುವ ರವಿಶಾಸ್ತ್ರಿ ಅವಧಿ ಮುಗಿಯಲಿದ್ದು ರಾಹುಲ್ ದ್ರಾವಿಡ್ ಭಾರತ ತಂಡದ ನೂತನ ಮುಖ್ಯ ತರಬೇತುದಾರನಾಗಿ ಆಯ್ಕೆಯಾಗಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ನಡುವೆ ಟೀಮ್ ಇಂಡಿಯಾದ ಮುಂದಿನ ಮುಖ್ಯ ತರಬೇತುದಾರನಾಗಿ ಆಯ್ಕೆಯಾಗುವುದರ ಕುರಿತು ಮಾತನಾಡಿರುವ ರಾಹುಲ್ ದ್ರಾವಿಡ್ ನಾನಿನ್ನೂ ಈ ವಿಷಯದ ಕುರಿತು ಚಿಂತನೆಯನ್ನೂ ನಡೆಸಿಲ್ಲ, ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಕೆಲಸ ನಿರ್ವಹಿಸುವುದು ಸುಲಭದ ಮಾತಲ್ಲ ಹಾಗೂ ಅದಕ್ಕೆ ಬೇಕಾದ ಅನುಭವ ಕೂಡ ನನಗಿಲ್ಲ ಎಂದು ಹೇಳಿಕೆ ನೀಡಿದ್ದರು.

Story first published: Tuesday, August 10, 2021, 0:33 [IST]
Other articles published on Aug 10, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X