For Quick Alerts
ALLOW NOTIFICATIONS  
For Daily Alerts
 

ಟೀಮ್ ಇಂಡಿಯಾ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮುಂದುವರಿಕೆ; ಟಿ20 ವಿಶ್ವಕಪ್ ಗೆಲ್ಲುವ ಗುರಿ!

ಭಾರತದ ಹಿರಿಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮತ್ತು ಸಹಾಯಕ ಸಿಬ್ಬಂದಿಯ ಒಪ್ಪಂದವನ್ನು ಮುಂದಿನ ಒಂದು ವರ್ಷಕ್ಕೆ ವಿಸ್ತರಿಸುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಬುಧವಾರ, ನವೆಂಬರ್ 29ರಂದು ಪ್ರಕಟಿಸಿದೆ.

ಇತ್ತೀಚೆಗೆ ಮುಕ್ತಾಯಗೊಂಡ 2023ರ ಐಸಿಸಿ ಏಕದಿನ ಪುರುಷರ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿ ನಂತರ ಅವರ ಒಪ್ಪಂದದ ಅವಧಿ ಮುಗಿದಿತ್ತು. ಆ ಬಳಿಕ ಬಿಸಿಸಿಐ ಮಂಡಳಿಯು ರಾಹುಲ್ ದ್ರಾವಿಡ್ ಅವರೊಂದಿಗೆ ಮಾತುಕತೆ ನಡೆಸಿತು ಮತ್ತು ಮುಖ್ಯ ಕೋಚ್ ಅವಧಿಯನ್ನು ಮುಂದುವರಿಸಲು ಸರ್ವಾನುಮತದಿಂದ ಒಪ್ಪಿಕೊಂಡಿತು.

Rahul Dravid to Continue Guiding Team India as Head Coach amid BCCI Extends Contract

ಎನ್‌ಸಿಎ ಮುಖ್ಯಸ್ಥರಾಗಿ ಮತ್ತು ಹಂಗಾಮಿ ಮುಖ್ಯ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ಅವರ ಸಾಂದರ್ಭಿಕ ಪಾತ್ರಗಳಿಗಾಗಿ ಬಿಸಿಸಿಐ ಮೆಚ್ಚುಗೆ ವ್ಯಕ್ತಪಡಿಸಿದೆ.

"ಟೀಮ್ ಇಂಡಿಯಾದೊಂದಿಗೆ ಕಳೆದ ಎರಡು ವರ್ಷಗಳು ಸಂಪೂರ್ಣವಾಗಿ ಸ್ಮರಣೀಯವಾಗಿದೆ. ಒಟ್ಟಾರೆ, ನಾವು ತಂಡದ ಏರಿಳಿತಗಳಿಗೆ ಸಾಕ್ಷಿಯಾಗಿದ್ದೇವೆ ಮತ್ತು ಈ ಪ್ರಯಾಣದ ಉದ್ದಕ್ಕೂ, ತಂಡದೊಳಗಿನ ಬೆಂಬಲ ಮತ್ತು ಸೌಹಾರ್ದತೆ ಅಸಾಧಾರಣವಾಗಿದೆ. ಡ್ರೆಸ್ಸಿಂಗ್ ರೂಮ್‌ನಲ್ಲಿ ನಾವು ಸ್ಥಾಪಿಸಿದ ಸಂಸ್ಕೃತಿಯ ಬಗ್ಗೆ ನನಗೆ ನಿಜವಾಗಿಯೂ ಹೆಮ್ಮೆ ಇದೆ. ಇದು ಗೆಲುವಿನ ಕ್ಷಣಗಳಲ್ಲಿ ಅಥವಾ ಪ್ರತಿಕೂಲ ಕ್ಷಣಗಳಲ್ಲಿ ಚೇತರಿಸಿಕೊಳ್ಳುವ ಸಂಸ್ಕೃತಿಯಾಗಿದೆ," ಎಂದು ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದರು.

"ನಮ್ಮ ತಂಡವು ಹೊಂದಿರುವ ಕೌಶಲ್ಯಗಳು ಮತ್ತು ಪ್ರತಿಭೆಯು ಅಸಾಧಾರಣವಾಗಿದೆ. ನಾವು ಒತ್ತಿ ಹೇಳಬೇಕಿರುವುದು ಸರಿಯಾದ ಪ್ರಕ್ರಿಯೆಯನ್ನು ಅನುಸರಿಸುವುದು ಮತ್ತು ನಮ್ಮ ಸಿದ್ಧತೆಗಳಿಗೆ ಅಂಟಿಕೊಳ್ಳುವುದು. ಇದು ಒಟ್ಟಾರೆ ಫಲಿತಾಂಶದ ಮೇಲೆ ನೇರ ಪರಿಣಾಮ ಬೀರಿದೆ," ಎಂದರು.

2021ರಲ್ಲಿ ನಡೆದ ಟಿ20 ವಿಶ್ವಕಪ್ ಬಳಿಕ ರವಿಶಾಸ್ತ್ರಿ ಅವರನ್ನು ಬದಲಿಸಿದ ರಾಹುಲ್ ದ್ರಾವಿಡ್ 2023ರ ಏಕದಿನ ವಿಶ್ವಕಪ್‌ನೊಂದಿಗೆ ಕೊನೆಗೊಂಡ ಎರಡು ವರ್ಷಗಳ ಅವಧಿಗೆ ನೇಮಕಗೊಂಡರು.

ಈ ಕುರಿತು ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಪ್ರತಿಕ್ರಿಯಿಸಿ, "ರಾಹುಲ್ ದ್ರಾವಿಡ್ ಅವರ ದೂರದೃಷ್ಟಿ, ವೃತ್ತಿಪರತೆ ಮತ್ತು ಪ್ರಯತ್ನಗಳು ಭಾರತ ತಂಡದ ಯಶಸ್ಸಿನಲ್ಲಿ ಪ್ರಮುಖವಾಗಿವೆ. ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿದ್ದಾಗ, ಯಾವಾಗಲೂ ಹೆಚ್ಚಿನ ಪರಿಶೀಲನೆಗೆ ಒಳಗಾಗುತ್ತಾರೆ. ಸವಾಲುಗಳನ್ನು ಸ್ವೀಕರಿಸಿದ್ದಕ್ಕಾಗಿ ಮಾತ್ರವಲ್ಲದೆ, ತಂಡದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಕ್ಕಾಗಿ ಹೊಂದಿದ್ದಕ್ಕಾಗಿ ನಾನು ಅವರಿಗೆ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತೇನೆ," ಎಂದರು.

ರಾಹುಲ್ ದ್ರಾವಿಡ್ ಅವರ ಮಾರ್ಗದರ್ಶನದಲ್ಲಿ ಭಾರತ ತಂಡವು 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಮತ್ತು 2023ರ ಏಕದಿನ ವಿಶ್ವಕಪ್ ಎರಡರಲ್ಲೂ ರನ್ನರ್-ಅಪ್ ಸ್ಥಾನ ಗಳಿಸಿದ್ದರೆ, 2023ರ ಏಷ್ಯಾ ಕಪ್‌ನಲ್ಲಿ ಚಾಂಪಿಯನ್ ಆಗಿತ್ತು.

ಕಳೆದ ಎರಡು ವರ್ಷಗಳಲ್ಲಿ ರಾಹುಲ್ ದ್ರಾವಿಡ್ ಉತ್ತಮ ದಾಖಲೆಯನ್ನು ಹೊಂದಿದ್ದಾರೆ ಮತ್ತು ಬಿಸಿಸಿಐಯಲ್ಲಿನ ಅನೇಕ ಜನರು ಅವರನ್ನು ಉಳಿಸಿಕೊಳ್ಳುವುದರಿಂದ ಭಾರತ ತಂಡವು ನಿರಂತರತೆಯನ್ನು ಹೊಂದಲು ಅನುವು ಮಾಡಿಕೊಡುತ್ತದೆ ಎಂದು ನಂಬಿದ್ದಾರೆ.

ರಾಹುಲ್ ದ್ರಾವಿಡ್ ಅವರ ಮುಖ್ಯ ಕೋಚ್ ಅಧಿಕಾರಾವಧಿಯ ವಿಸ್ತರಣೆಯ ಬಳಿಕ ಮುಂದಿನ ನಿಯೋಜನೆ ನೋಡಲು ಆಸಕ್ತಿದಾಯಕವಾಗಿದೆ. ಇದು ಮುಂದಿನ 2024ರ ಟಿ20 ವಿಶ್ವಕಪ್ ಪಂದ್ಯಾವಳಿ, 2025ರ ಚಾಂಪಿಯನ್ಸ್ ಟ್ರೋಫಿ ಮತ್ತು 2025ರ ವಿಶ್ವ ಟೆಸ್ಟ್ ಚಾಂಪಿಯನ್ಸ್ ಪಂದ್ಯಾವಳಿಗಳು ಪ್ರಮುಖವಾಗಿವೆ.

Story first published: Wednesday, November 29, 2023, 14:59 [IST]
Other articles published on Nov 29, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+