Lokashaba poll: ಮತದಾರರಿಗೆ ಕನ್ನಡದಲ್ಲೆ ಕರೆ ನೀಡಿದ ಟೀಮ್ ಇಂಡಿಯಾ ಕೋಚ್
ಕರ್ನಾಟಕದಲ್ಲಿ 2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆಯುತ್ತಿದೆ. 14 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆತ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ.
ಅದರಂತೆ ಟೀಮ್ ಇಂಡಿಯಾದ ಮಾಜಿ ನಾಯಕ ಹಾಗು ಹಾಲಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಬೆಂಗಳೂರು ಉತ್ತರ ಲೋಕಸಭೆಯ ಮಲ್ಲೇಶ್ವರಂ ವಿಧಾನಸಭಾ ವ್ಯಾಪ್ತಿಯಲ್ಲಿ ಬರುವ ಆರ್‌ಎಂವಿ ಕಬ್ಲ್‌ನ ಮತಗಟ್ಟೆಗೆ ಕುಟುಂಬ ಸಮೇತರಾಗಿ ಆಗಮಿಸಿ ತಮ್ಮ ಮತ ಚಲಾಯಿಸಿದ್ದಾರೆ. ಟೀ ಶರ್ಟ್ ಮತ್ತು ಶಾರ್ಟ್ ಧರಸಿ ತುಂಬ ಸರಳವಾಗಿ ಬಂದಿದ್ದ ರಾಹುಲ್ ದ್ರಾವಿಡ್ ಜನಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ.

ಈ ವೇಳೆ ಮಾಧ್ಯಮಗಳೊಂದಿಗೆ ಕನ್ನಡದಲ್ಲೆ ಮಾತನಾಡಿದ ರಾಹುಲ್ ದ್ರಾವಿಡ್, ವೋಟ್ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಹೊರಗೆ ಬನ್ನಿ, ಇದೊಂದು ಒಳ್ಳೆಯ ಅವಕಾಶ. ಪ್ರಜಾಪ್ರಭುತ್ವ ಮುಂದೆ ತರುವ ಅವಕಾಶವಾಗಿದ್ದು, ಬೆಂಗಳೂರು ಸೇರಿದಂತೆ ಎಲ್ಲೆಡೆ ದೊಡ್ಡ ಪ್ರಮಾಣದಲ್ಲಿ ಮತದಾನ ಪ್ರಕ್ರಿಯೆ ನಡೆಯಬೇಕು. ಚುನಾವಣಾ ಆಯೋಗವು ಮತದಾನ ಸುಗಮವಾಗಿ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಈ ಬಾರಿ ಹೆಚ್ಚಿನ ಮತದಾರರು ಮತ ಚಲಾವಣೆ ಮಾಡಲಿದ್ದಾರೆ ಎಂಬ ನಿರೀಕ್ಷೆಯಲ್ಲಿದ್ದೇನೆ. ಇಂದಿನ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಬಂದು ಮತ ಚಲಾಯಿಸಿದರೆ ಇನ್ನು ಉತ್ತಮವಾಗಿರುತ್ತದೆ. ಈ ಮೂಲಕ ಬೆಂಗಳೂರು ಅತಿ ಹೆಚ್ಚು ಮತದಾನ ಮಾಡಿದ ನಗರ ಎಂದು ದಾಖಲೆ ನಿರ್ಮಿಸಬೇಕು ಎಂದು ರಾಹುಲ್ ದ್ರಾವಿಡ್ ಹೇಳಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications