ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಕಡೆಗಣಿಸಿದ್ದಕ್ಕೆ ಬೇಸರ ಹೊರಹಾಕಿದ ರಾಹುಲ್ ತೆವಾಟಿಯಾ

Rahul Tewatias Tweet After Being Ignored From India T20I Squad For Ireland Goes Viral

2022ರ ಜೂನ್ ಅಂತ್ಯದಲ್ಲಿ ನಡೆಯುವ ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತದ ತಂಡವನ್ನು ಪ್ರಕಟಿಸಿದ ನಂತರ ಗುಜರಾತ್ ಟೈಟನ್ಸ್ ಆಲ್‌ರೌಂಡರ್ ರಾಹುಲ್ ತೆವಾಟಿಯಾ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ.

ಐರ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾದ ತಂಡದಲ್ಲಿ ಹೆಚ್ಚಾಗಿ ಜೂನಿಯರ್ ಆಟಗಾರರು ಇದ್ದಾರೆ. ತಮ್ಮ ಚೊಚ್ಚಲ ಐಪಿಎಲ್ 2022 ಟ್ರೋಫಿಗೆ ಗುಜರಾತ್ ಟೈಟನ್ಸ್ ಪ್ರಯಾಣದಲ್ಲಿ ಪ್ರಮುಖ ಆಟಗಾರನಾಗಿದ್ದ ರಾಹುಲ್ ತೆವಾಟಿಯಾ, ರಾಷ್ಟ್ರೀಯ ತಂಡಕ್ಕೆ ಕಡೆಗಣಿಸಿದ್ದಕ್ಕೆ ನಿರಾಸೆಗೊಂಡಿದ್ದಾರೆ. ಈ ಕುರಿತು ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಐರ್ಲೆಂಡ್ ವಿರುದ್ಧ ಟಿ20 ಸರಣಿಗೆ ಭಾರತ ತಂಡ ಪ್ರಕಟ; ಹಾರ್ದಿಕ್ ಪಾಂಡ್ಯ ನಾಯಕಐರ್ಲೆಂಡ್ ವಿರುದ್ಧ ಟಿ20 ಸರಣಿಗೆ ಭಾರತ ತಂಡ ಪ್ರಕಟ; ಹಾರ್ದಿಕ್ ಪಾಂಡ್ಯ ನಾಯಕ

ಸನ್‌ರೈಸರ್ಸ್ ಹೈದರಾಬಾದ್ ತಂಡದ ರಾಹುಲ್ ತ್ರಿಪಾಠಿ ಅವರು ಐಪಿಎಲ್ 2022ರಲ್ಲಿ ಅಗ್ರ ಪ್ರದರ್ಶನಕಾರರಲ್ಲಿ ಒಬ್ಬರಾಗಿದ್ದರು. ಹೀಗಾಗಿ ಮೆನ್ ಇನ್ ಬ್ಲೂ ತಂಡವನ್ನು ಪ್ರತಿನಿಧಿಸಲು ರಾಷ್ಟ್ರೀಯ ಆಯ್ಕೆ ಸಮಿತಿಯಿಂದ ಮೊದಲ ಕರೆಯನ್ನು ಪಡೆದರು. ಆದರೆ ರಾಷ್ಟ್ರೀಯ ತಂಡದ ಆಯ್ಕೆ ವೇಳೆ ರಾಹುಲ್ ತೆವಾಟಿಯಾ ಅವರನ್ನು ನಿರ್ಲಕ್ಷಿಸಲಾಯಿತು. ಎರಡು ಟಿ20 ಪಂದ್ಯಗಳ ಐರ್ಲೆಂಡ್ ಪ್ರವಾಸಕ್ಕೆ ರಾಹುಲ್ ತೆವಾಟಿಯಾ ಅವರನ್ನು ಆಯ್ಕೆಗಾರರು ಕಡೆಗಣಿಸಿದ್ದಕ್ಕೆ ಎಡಗೈ ಆಟಗಾರ ಬೇಸರಗೊಂಡಿದ್ದಾರೆ.

ನಿರೀಕ್ಷೆಗಳು ನೋವುಂಟುಮಾಡುತ್ತವೆ

ರಾಹುಲ್ ತೆವಾಟಿಯಾ ಟ್ವಿಟ್ಟರ್‌ನಲ್ಲಿ ಎರಡು ದುಃಖ ಮತ್ತು ಕೋಪದ ಎಮೋಜಿಗಳೊಂದಿಗೆ "ನಿರೀಕ್ಷೆಗಳು ನೋವುಂಟುಮಾಡುತ್ತವೆ' ಎಂದು ಪೋಸ್ಟ್ ಮಾಡಿದ್ದಾರೆ. ಐರ್ಲೆಂಡ್ ವಿರುದ್ಧದ ಸರಣಿ ವೇಳೆ ಹೆಚ್ಚಿನ ಹಿರಿಯ ಆಟಗಾರರು ಇಂಗ್ಲೆಂಡ್‌ನಲ್ಲಿರುವುದರಿಂದ ರಾಹುಲ್ ತೆವಾಟಿಯಾ ತನಗೆ ಅವಕಾಶ ಸಿಗಬಹುದೆಂದು ನಿರೀಕ್ಷಿಸುತ್ತಿದ್ದರು. ಆದರೆ ಆಯ್ಕೆದಾರರು ಕೆಲವು ಹೊಸ ಮುಖಗಳಿಗೆ ಅವಕಾಶವನ್ನು ನೀಡಿದ್ದಾರೆ.

ಗಮನಾರ್ಹ ಸಂಗತಿಯೆಂದರೆ, ಗುಜರಾತ್ ಟೈಟನ್ಸ್ ನಾಯಕನಾಗಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದ ನಂತರ ಹಾರ್ದಿಕ್ ಪಾಂಡ್ಯ ಇದೀಗ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಐಪಿಎಲ್‌ನಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ರಾಹುಲ್ ತೆವಾಟಿಯಾ ಆಡಿದ್ದಾರೆ. ಪಾಂಡ್ಯಗೆ ಎಡಗೈ ಆಟಗಾರ ಏನು ನೀಡಬಲ್ಲರು ಎಂದು ತಿಳಿದಿದ್ದಾರೆ. ಆದರೆ ದುರದೃಷ್ಟವಶಾತ್ ರಾಹುಲ್ ತೆವಾಟಿಯಾ ಬದಲಿಗೆ ರಾಹುಲ್ ತ್ರಿಪಾಠಿ ಮತ್ತು ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಲಾಯಿತು.

ಸಂಜು ಸ್ಯಾಮ್ಸನ್ ಕೂಡ ತಂಡದಲ್ಲಿ ಮರಳಿ ಸ್ಥಾನ ಪಡೆದಿದ್ದಾರೆ

ಸಂಜು ಸ್ಯಾಮ್ಸನ್ ಕೂಡ ತಂಡದಲ್ಲಿ ಮರಳಿ ಸ್ಥಾನ ಪಡೆದಿದ್ದಾರೆ

ಟೀಮ್ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್‌ನಲ್ಲಿದ್ದು, ಅಲ್ಲಿ ಭಾರತ ಟೆಸ್ಟ್ ಪಂದ್ಯವನ್ನು ಆಡಲಿರುವುದರಿಂದ ಅವರು ತಮ್ಮ ಟಿ20 ತಂಡವನ್ನು ನೋಡುವುದಿಲ್ಲ. ಕುತೂಹಲಕಾರಿ ಬೆಳವಣಿಗೆಯಲ್ಲಿ ಎನ್‌ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಹಾಗೂ ಮೂರು ಇತರ ಕೋಚ್‌ಗಳು ಭಾರತೀಯ ಹುಡುಗರನ್ನು ಐರ್ಲೆಂಡ್‌ಗೆ ಕರೆದೊಯ್ಯುತ್ತಾರೆ. ಐರ್ಲೆಂಡ್‌ನಲ್ಲಿ ಅಭಿಮಾನಿಗಳು ಭಾರತೀಯ ಕ್ರಿಕೆಟ್‌ನ ಭವಿಷ್ಯದ ಆಟಗಾರರ ನೋಟವನ್ನು ವೀಕ್ಷಿಸುತ್ತಾರೆ.

ಸಂಜು ಸ್ಯಾಮ್ಸನ್ ಕೂಡ ತಂಡದಲ್ಲಿ ಮರಳಿ ಸ್ಥಾನ ಪಡೆದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮ, ಕೆಎಲ್ ರಾಹುಲ್, ರಿಷಭ್ ಪಂತ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಸೇರಿದಂತೆ ಹಲವು ಹಿರಿಯ ಆಟಗಾರರಿಗೆ ಐರ್ಲೆಂಡ್ ಪ್ರವಾಸದಿಂದ ವಿಶ್ರಾಂತಿ ನೀಡಲಾಗಿದೆ.

ಹಾರ್ದಿಕ್ ಪಾಂಡ್ಯ ಮೊದಲ ಬಾರಿಗೆ ಭಾರತವನ್ನು ಮುನ್ನಡೆಸಲಿದ್ದಾರೆ

ಹಾರ್ದಿಕ್ ಪಾಂಡ್ಯ ಮೊದಲ ಬಾರಿಗೆ ಭಾರತವನ್ನು ಮುನ್ನಡೆಸಲಿದ್ದಾರೆ

ಗುಜರಾತ್ ಟೈಟನ್ಸ್ ತಂಡವನ್ನು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022ರ ಪ್ರಶಸ್ತಿಯನ್ನು ತಮ್ಮ ಚೊಚ್ಚಲ ಋತುವಿನಲ್ಲಿ ಮುನ್ನಡೆಸಿದ ನಂತರ ಹಾರ್ದಿಕ್ ಪಾಂಡ್ಯ ಮೊದಲ ಬಾರಿಗೆ ಭಾರತವನ್ನು ಮುನ್ನಡೆಸಲಿದ್ದಾರೆ. ಅವರು ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಗಾಗಿ ತಂಡದ ಉಪ ನಾಯಕರಾಗಿದ್ದಾರೆ.

15 ಪಂದ್ಯಗಳಲ್ಲಿ 487 ರನ್ ಗಳಿಸಿದ್ದ ಹಾರ್ದಿಕ್ ಪಾಂಡ್ಯ, ಐಪಿಎಲ್ ಪಂದ್ಯಾವಳಿಯಲ್ಲಿ ಎಂಟು ವಿಕೆಟ್‌ಗಳನ್ನು ಪಡೆದರು, ಇದು ಫೈನಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

IPL ಮ್ಯಾಚ್ ನಲ್ಲಿ ಒಂದು ಬೌಲ್ ಮತ್ತು ಒಂದು ಓವರ್ ನಿಂದ BCCIಬಾಚಿಕೊಳ್ಳೋ ದುಡ್ಡೆಷ್ಟು?|*Cricket|OneIndia Kannada
ಐರ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ಹೀಗಿದೆ

ಐರ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ಹೀಗಿದೆ

ಸದ್ಯ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಸರಣಿಯಲ್ಲಿ ಭಾರತವು 1-2 ರಿಂದ ಹಿನ್ನಡೆ ಅನುಭವಿಸಿದೆ. ಮೊದಲ ಎರಡು ಪಂದ್ಯಗಳಲ್ಲಿ ಸೋತ ನಂತರ, ವಿಶಾಖಪಟ್ಟಣದಲ್ಲಿ ಮಂಗಳವಾರ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತೀಯ ತಂಡವು 48 ರನ್‌ಗಳಿಂದ ಗೆದ್ದಿತು.

ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಭುವನೇಶ್ವರ್ ಕುಮಾರ್ (ಉಪ ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಆರ್. ಬಿಷ್ಣೋಯ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್.

Story first published: Thursday, June 16, 2022, 16:07 [IST]
Other articles published on Jun 16, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X