Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs SA ODI: ಶುಭಾರಂಭದ ನಿರೀಕ್ಷೆಯಲ್ಲಿ ಭಾರತ: ರಾಹುಲ್‌ಗೆ ಪ್ಲೇಯಿಂಗ್ ಇಲೆವೆನ್ ಆಯ್ಕೆ ಚಿಂತೆ

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಟೆಸ್ಟ್‌ ಸರಣಿಯಲ್ಲಿ ಪ್ರವಾಸಿ ತಂಡ ಅಮೋಘ ಪ್ರದರ್ಶನ ನೀಡಿದೆ. ಈಗ ಉಭಯ ತಂಡಗಳ ನಡುವಣ ಏಕದಿನ ಸರಣಿ ಭಾನುವಾರದಿಂದ ರಾಂಚಿಯಲ್ಲಿ ಆರಂಭವಾಗಲಿದೆ. ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಕನ್ನಡಿಗ ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ. ಶುಭಮನ್‌ ಗಿಲ್‌ ಅವರ ಕುತ್ತಿಗೆಗೆ ಗಾಯವಾಗಿದ್ದು, ಚೇತರಿಕೆಗೆ ಸಮಯ ಬೇಕಾಗಿದ್ದರಿಂದ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಗೆ ರಾಹುಲ್ ನಾಯಕರಾಗಿದ್ದಾರೆ. ಅನುಭವಿಗಳು ಹಾಗೂ ಯುವ ತಂಡವನ್ನು ರಾಹುಲ್ ಈ ವೇಳೆ ಮುನ್ನಡೆಸಲಿದ್ದಾರೆ.

ರಾಂಚಿಯಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯದಲ್ಲಿ ಜಯ ಸಾಧಿಸಿ, ಏಕದಿನ ಸರಣಿಯಲ್ಲಿ ಮುನ್ನಡೆ ಸಾಧಿಸುವ ಕನಸು ಭಾರತ ತಂಡದ್ದಾಗಿದೆ. ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ಉಭಯ ತಂಡಗಳು ಬಲಿಷ್ಠವಾಗಿವೆ. ಉಭಯ ದೇಶಗಳ ನಡುವೆ ಈಗಾಗಲೇ 94 ಏಕದಿನ ಪಂದ್ಯಗಳು ನಡೆದಿವೆ. ಈ ವೇಳೆ ಭಾರತ 40, ದಕ್ಷಿಣ ಆಫ್ರಿಕಾ 51 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಮೂರು ಪಂದ್ಯಗಳು ಫಲಿತಾಂಶ ಹೀನವಾಗಿವೆ.

Rahul to Lead India vs South Africa in Ranchi ODI Jaiswal Likely to Open with Rohit

ರಾಂಚಿ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರೊಂದಿಗೆ ಇನಿಂಗ್ಸ್‌ ಆರಂಭಿಸುವುದು ಯಾರು ಎಂಬ ಪ್ರಶ್ನೆಗಳು ಎದ್ದಿವೆ. ಶುಭಮನ್‌ ಗಿಲ್ ಅನುಪಸ್ಥಿತಿಯ ಲಾಭ ಪಡೆದುಕೊಳ್ಳಲು ಯಶಸ್ವಿ ಜೈಸ್ವಾಲ್ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಒಂದು ವೇಳೆ ಯಶಸ್ವಿ ಜೈಸ್ವಾಲ್‌ಗೆ ಅವಕಾಶ ಸಿಕ್ಕರೆ ತಮ್ಮ ವೃತ್ತಿ ಜೀವನದ 2ನೇ ಏಕದಿನ ಪಂದ್ಯವನ್ನು ಆಡಲಿದ್ದಾರೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿದ್ದು, ಭರವಸೆ ಮೂಡಿಸಿದ್ದಾರೆ. ಇವರು ಆಸೀಸ್‌ ವಿರುದ್ಧದ ಆಡಿದ ಇನಿಂಗ್ಸ್‌ ಭಾರತದಲ್ಲೂ ಮುಂದುವರೆಸಲು ಯೋಜನೆಯನ್ನು ರೂಪಿಸಿಕೊಂಡಿದ್ದಾರೆ.

ಉಳಿದಂತೆ ರಿಷಭ್‌ ಪಂತ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆಯುವುದು ಬಹುತೇಕ ಕನ್ಫರ್ಮ್‌ ಆಗಿದೆ. ನಾಯಕ ಕೆಎಲ್ ರಾಹುಲ್‌ ಐದನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಸಾಧ್ಯತೆ ಇದೆ. ಆಲ್‌ರೌಂಡರ್‌ ರೂಪದಲ್ಲಿ ವಾಷಿಂಗ್ಟನ್‌ ಸುಂದರ್‌, ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ ಕಾಣಿಸಿಕೊಳ್ಳುವ ಸಂಭವವಿದೆ.

Rahul to Lead India vs South Africa in Ranchi ODI Jaiswal Likely to Open with Rohit

ಜಸ್ಪ್ರಿತ್ ಬುಮ್ರಾ ಅವರಿಗೆ ಏಕದಿನ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಇವರ ಅನುಪಸ್ಥಿತಿಯಲ್ಲಿ ಭರವಸೆಯ ವೇಗಿ ಅರ್ಷದೀಪ್‌ ಸಿಂಗ್ ಸ್ಥಾನ ಪಡೆಯಬಹುದಾಗಿದೆ. ಇನ್ನು ಹರ್ಷಿತ್ ರಾಣಾ ಹೊಸ ಚೆಂಡನ್ನು ಹಂಚಿಕೊಳ್ಳುವ ಸಾಧ್ಯತೆ ಇದೆ. ಸ್ಪಿನ್ ಬೌಲರ್ ರೂಪದಲ್ಲಿ ಚೈನಾಮನ್‌ ಬೌಲರ್ ಕುಲ್‌ದೀಪ್ ಯಾದವ್ ಕಾಣಿಸಿಕೊಳ್ಳಬಹುದು. ಇವರು ದಕ್ಷಿಣ ಆಫ್ರಿಕಾ ಬ್ಯಾಟರ್‌ಗಳನ್ನು ಕಟ್ಟಿ ಹಾಕಿದಲ್ಲಿ ಗೆಲುವಿನ ಕನಸು ನನಸಾಗುತ್ತದೆ.

ಗೆಲುವಿನ ಹುಮ್ಮಸ್ಸು

ದಕ್ಷಿಣ ಆಫ್ರಿಕಾ ತಂಡ ಟೆಸ್ಟ್ ಸರಣಿ ಗೆಲುವಿನ ಆತ್ಮವಿಶ್ವಾಸದಲ್ಲಿ ಅಂಗಳ ಪ್ರವೇಶಿಸಲಿದೆ. ಈ ವೇಳೆ ಪ್ರವಾಸಿ ತಂಡದಲ್ಲೂ ಸ್ಟಾರ್ ಆಟಗಾರರ ದಂಡೇ ಇದೆ. ಇವರು ಪಂದ್ಯದ ಗತಿಯನ್ನು ಬದಲಿಸ ಬಲ್ಲ ಕ್ಷಮತೆ ಹೊಂದಿದ್ದಾರೆ. ಟೆಸ್ಟ್‌ ಸರಣಿಯಲ್ಲಿ ಸಾಧಿಸಿದ ಗೆಲುವಿನ ನಾಗಾಲೋಟವನ್ನು ಏಕದಿನ ಸರಣಿಯಲ್ಲೂ ಮುಂದುವರೆಸಲು ತೆಂಬು ಬವುಮಾ ಪಡೆ ಪ್ಲ್ಯಾನ್ ಮಾಡಿಕೊಂಡಿದೆ. ಮೊದಲ ಗೆಲುವಿನ ನಗೆ ಯಾರು ಬೀರುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

Story first published: Saturday, November 29, 2025, 12:32 [IST]
Other articles published on Nov 29, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+