ಕೊನೆಗೂ ಟೀಂ ಇಂಡಿಯಾಗೆ ಆಯ್ಕೆಯಾದ ರಾಹುಲ್ ತ್ರಿಪಾಠಿ: ಅಭಿಮಾನಿಗಳ ಸಂಭ್ರಮ

ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿ ಮುಗಿದ ಬಳಿಕ ಐರ್ಲೆಂಡ್ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟಗೊಂಡಿದ್ದು, ಕೊನೆಗೂ ರಾಹುಲ್ ತ್ರಿಪಾಠಿ ಟೀಂ ಇಂಡಿಯಾಗೆ ಆಯ್ಕೆಯಾಗಿರುವ ಬಗ್ಗೆ ನೆಟಿಜನ್ ಪ್ರತಿಕ್ರಿಯಿಸಿದ್ದಾರೆ. ಅವರು ಇನ್ನು ಮುಂದೆ ಅನ್ ಕ್ಯಾಪ್ಡ್ ಆಟಗಾರನಲ್ಲ. ಅವರು ಟೀಂ ಇಂಡಿಯಾದ ಆಟಗಾರ ಎಂದು ಹೊಗಳಿಕೆಗೆ ಪಾತ್ರರಾಗಿದ್ದಾರೆ.
ಸನ್‌ರೈಸರ್ಸ್ ಹೈದರಾಬಾದ್ ತಂಡವು ವೇಗಿ ಉಮ್ರಾನ್ ಮಲಿಕ್‌ಗೂ ತಂಡದಲ್ಲಿ ಅವಕಾಶ ನೀಡಲಾಗಿದೆ. ಇವರೊಂದಿಗೆ ಪಂಜಾಬ್ ಕಿಂಗ್ಸ್ ಡೆತ್ ಬೌಲಿಂಗ್ ಸ್ಪೆಷಲಿಸ್ಟ್ ಅರ್ಷದೀಪ್ ಸಿಂಗ್ ಕೂಡ ಆಯ್ಕೆಯಾದರು. ಅವರು ಮೂರು ಪಂದ್ಯಗಳಲ್ಲಿ ಒಂದೇ ಒಂದು ಪಂದ್ಯವನ್ನು ಆಡಿಲ್ಲ. ತಂಡಕ್ಕೆ ಆಯ್ಕೆಯಾಗಿದ್ದರೂ ಅಂತಿಮ ತಂಡದಲ್ಲಿ ಆಡುವ ಅವಕಾಶ ಸಿಕ್ಕಿರಲಿಲ್ಲ. ಸನ್ ರೈಸರ್ಸ್ ಆಟಗಾರ ರಾಹುಲ್ ತ್ರಿಪಾಠಿ ಅವರನ್ನು ಸರಣಿಗೆ ಪರಿಗಣಿಸುವ ಮೂಲಕ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದೆ. ಇದಕ್ಕೂ ಮೊದಲೇ ತ್ರಿಪಾಠಿ ಟಿ20 ತಂಡದಲ್ಲಿ ಸ್ಥಾನ ಪಡೆಯಬಹುದು ಎಂದು ಊಹಿಸಲಾಗಿತ್ತು.
ಪ್ರಸ್ತುತ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ರಾಹುಲ್ ತ್ರಿಪಾಠಿ ಅವರನ್ನು ಆಯ್ಕೆ ಮಾಡದಿರುವ ಬಗ್ಗೆ ಟ್ವಿಟರ್‌ನಲ್ಲಿ ನೆಟಿಜನ್‌ಗಳು ಬಿಸಿಸಿಐಗೆ ಪ್ರಶ್ನೆಗಳನ್ನು ಕೇಳುತ್ತಿದ್ದರು. ಆದ್ರೀಗ ಐರ್ಲೆಂಡ್ ವಿರುದ್ಧದ ಎರಡು ಟಿ20 ಪಂದ್ಯಗಳಿಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದ್ದು, ಅದರಲ್ಲಿ ರಾಹುಲ್ ತ್ರಿಪಾಠಿ ಅವರನ್ನೂ ಬಿಸಿಸಿಐ ಆಯ್ಕೆ ಮಾಡಿದೆ. ರಾಹುಲ್ ತ್ರಿಪಾಠಿ ಕೊನೆಗೂ ಟೀಂ ಇಂಡಿಯಾಕ್ಕೆ ಕಾಲಿಟ್ಟಿರುವುದಕ್ಕೆ ಅವರ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. #rahutripathi ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್ ಆಗಿದೆ.
ಈಗ ನಮ್ಮೆಲ್ಲರನ್ನೂ ಹೆಮ್ಮೆ ಪಡುವಂತೆ ನಿಮ್ಮ ಆಟವನ್ನು ತೋರಿಸಿ ಎಂದು ಅಭಿಮಾನಿಗಳು ಪ್ರತಿಕ್ರಿಯಿಸಿದ್ದಾರೆ. ಆಯ್ಕೆದಾರರು ನಿಮ್ಮನ್ನು ಯಾವತ್ತೂ ಡ್ರಾಪ್ ಮಾಡದೆ ನಿಮ್ಮದೇ ಶೈಲಿಯಲ್ಲಿ ಇನ್ನಿಂಗ್ಸ್ ಆಡುವುದನ್ನು ತೋರಿಸಬೇಕು ಎಂದು ಹೇಳುತ್ತಾ ರಾಹುಲ್ ಬೆಸ್ಟ್ ಆಫ್ ಲಕ್ ಎಂದು ಹೇಳಿದ್ದಾರೆ. ರಾಹುಲ್ ತ್ರಿಪಾಠಿ ಆಯ್ಕೆಯಿಂದ ಸನ್‌ರೈಸರ್ಸ್ ಹೈದರಾಬಾದ್ ಅಭಿಮಾನಿಗಳು ಸಹ ಖುಷಿಯಾಗಿದ್ದಾರೆ.
ಐಪಿಎಲ್ 2022ರ ಸೀಸನ್‌ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಬ್ಯಾಟಿಂಗ್ ಲೈನ್ ಅಪ್ ನಲ್ಲಿ ತ್ರಿಪಾಠಿ ಪ್ರಮುಖ ಆಟಗಾರ ಎನಿಸಿಕೊಂಡಿದ್ದು, ಮಿಂಚಿನ ಆಟ ಪ್ರದರ್ಶಿಸಿದರು. 14 ಪಂದ್ಯಗಳಲ್ಲಿ 37.55 ಸರಾಸರಿಯಲ್ಲಿ 413 ರನ್ ಗಳಿಸಿದರು. 158 ಸ್ಟ್ರೈಕ್ ರೇಟ್‌ನೊಂದಿಗೆ ತಮ್ಮ ಬ್ಯಾಟಿಂಗ್ ಪರಾಕ್ರಮವನ್ನು ಸಹ ತೋರಿಸಿದರು. ಅವರ ಒಟ್ಟಾರೆ ಇನ್ನಿಂಗ್ಸ್‌ಗಳಲ್ಲಿ ಮೂರು ಅರ್ಧ ಶತಕಗಳೂ ಸೇರಿದ್ದವು. ಈ ಸೀಸನ್ ಮಾತ್ರವಲ್ಲದೆ ತ್ರಿಪಾಠಿ ಐಪಿಎಲ್ ಹಾಗೂ ದೇಶೀಯ ಕ್ರಿಕೆಟ್‌ನಲ್ಲಿ ಸತತವಾಗಿ ಮಿಂಚುತ್ತಿದ್ದಾರೆ.
ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ
ಹಾರ್ದಿಕ್ ಪಾಂಡ್ಯ (ನಾಯಕ), ಭುವನೇಶ್ವರ್ ಕುಮಾರ್ (ಉಪನಾಯಕ), ಇಶಾಂತ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಯುಜವೇಂದ್ರ ಚಾಹಲ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್ , ಅವೇಶ್ ಖಾನ್, ಅರ್ಷ್‌ದೀಪ್ ಸಿಂಗ್, ಉಮ್ರಾನ್ ಮಲಿಕ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications