Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs SL: ಭಾರತ-ಶ್ರೀಲಂಕಾ ನಡುವಿನ 3ನೇ ಟಿ20 ಪಂದ್ಯಕ್ಕೆ ಮಳೆ ಭೀತಿ; ಕ್ಲೀನ್ ಸ್ವೀಪ್ ನಿರೀಕ್ಷೆಯಲ್ಲಿ ಸ್ಕೈ ಪಡೆ!

ಜುಲೈ 30 ಮಂಗಳವಾರ, ಭಾರತ ಮತ್ತು ಶ್ರೀಲಂಕಾ ನುಡುವಿನ ಮೂರನೇ ಹಾಗು ಅಂತಿಮ ಟಿ20 ಪಂದ್ಯ ನಡೆಯಲಿದೆ. ಈ ಪಂದ್ಯ ಇಂದು (ಜುಲೈ 30) ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಆರಂಭವಾಗಲಿದೆ.

ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿವೆ. ಭಾರತ ಈಗಾಗಲೇ ಸತತ ಎರಡು ಗೆಲುವಿನೊಂದಿಗೆ ಸರಣಿ ವಶಪಡಿಸಿಕೊಂಡಿದೆ. ಮೂರನೇ ಪಂದ್ಯವನ್ನು ಗೆಲ್ಲುವ ಮೂಲಕ ಟೀಮ್‌ ಇಂಡಿಯಾ ಆತಿಥೇಯರನ್ನು ಕ್ಲೀನ್ ಸ್ವೀಪ್ ಮಾಡುವ ನಿರೀಕ್ಷೆಯಲ್ಲಿದೆ.

Rain threat for 3rd T20 match between India vs Sri Lanka

ಈ ಪಂದ್ಯ ಆರಂಭಕ್ಕೂ ಮುನ್ನ ದೊಡ್ಡ ಅಪ್ಡೇಟ್ ಹೊರಬಿದ್ದಿದೆ. ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಹೆಚ್ಚಿದೆ. ಹೀಗಿರುವಾಗ ಅಭಿಮಾನಿಗಳ ಕಾಯುವಿಕೆ ಮಳೆಗೆ ಕೊಚ್ಚಿ ಹೋಗುತ್ತದಾ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

ಎರಡನೇ ಪಂದ್ಯಕ್ಕೂ ಮಳೆ ಅಡ್ಡಿ

ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟಿ20 ಪಂದ್ಯವೂ ಪಲ್ಲೆಕೆಲೆಯಲ್ಲಿ ನಡೆದಿತ್ತು. ಈ ಪಂದ್ಯದಲ್ಲಿ ಟೀಮ್‌ ಇಂಡಿಯಾ 7 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿತ್ತು. ಈ ಪಂದ್ಯಕ್ಕೂ ಮಳೆ ಅಡ್ಡಿಪಡಿಸಿತ್ತು.

ಮೈದಾನ ತೇವವಾಗಿದ್ದ ಕಾರಣ ಟಾಸ್ ತಡವಾಯಿತು. ಇದಾದ ಬಳಿಕ ಭಾರತ ಚೇಸಿಂಗ್‌ ಆರಂಭಿಸಿದ ತಕ್ಷಣ ಮತ್ತೆ ಮಳೆ ಬಂದು ಪಂದ್ಯದ ಮೇಲೆ ಪರಿಣಾಮ ಬೀರಿತು. ಇದರ ಪರಿಣಾಮವಾಗಿ ಡಿಎಲ್‌ಎಸ್‌ ನಿಯಮದ ಪ್ರಕಾರ ಭಾರತವು 8 ಓವರ್‌ಗಳಲ್ಲಿ 78 ರನ್‌ಗಳ ಪರಿಷ್ಕೃತ ಗುರಿಯನ್ನು ಪಡೆಯಿತು.

ಇದನ್ನು ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ತಂಡವು ಸುಲಭವಾಗಿ ಸಾಧಿಸಿ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿತು. ಮೊದಲ ಪಂದ್ಯವನ್ನು ಭಾರತ 43 ರನ್‌ಗಳಿಂದ ಗೆದ್ದಿತ್ತು.

ಮೂರನೇ ಪಂದ್ಯಕ್ಕೆ ಹವಾಮಾನ ಹೇಗಿರಲಿದೆ?

ಇಂದಿನ ಪಲೆಕಲ್ಲೆ ಹವಾಮಾನ ವರದಿಗಳನ್ನು ಗಮನಿಸಿದರೆ, ಪಂದ್ಯದ ಸಮಯದಲ್ಲಿ ಹೆಚ್ಚಿನ ಮಳೆಯ ನಿರೀಕ್ಷೆಯಿಲ್ಲ. Weather.com ಪ್ರಕಾರ, ಮೂರನೇ ಟಿ20 ಪಂದ್ಯಕ್ಕೆ ಮಳೆ ಬೀಳುವ ಸಾಧ್ಯತೆ ಕೇವಲ 10 ಪ್ರತಿಶತದಷ್ಟು ಮಾತ್ರ.

ಆದರೆ, ಬೆಳಗ್ಗೆ (ಬೆಳಿಗ್ಗೆ 6:00 ರಿಂದ ಮಧ್ಯಾಹ್ನ 12:00 ರವರೆಗೆ) ಸ್ವಲ್ಪ ಮಟ್ಟಿಗೆ ಮಳೆಯಾಗುವ ಸಾಧ್ಯತೆಯಿದೆ. ಇದರರ್ಥ ಪಿಚ್ ಸುಮಾರು 1.5 ದಿನಗಳವರೆಗೆ ಮುಚ್ಚಿರುತ್ತದೆ. ಅಲ್ಲದೆ ಪಿಚ್‌ನಲ್ಲಿ ಸಾಕಷ್ಟು ತೇವಾಂಶ ಇರಲಿದೆ.

ಟೀಮ್ ಇಂಡಿಯಾ ಪ್ಲೇಯಿಂಗ್-11 ಬದಲಾಗುವುದೇ?

ಸತತ ಎರಡು ಗೆಲುವಿನೊಂದಿಗೆ ಟೀಮ್‌ ಇಂಡಿಯಾ ಟಿ20 ಸರಣಿಯನ್ನು ವಶಪಡಿಸಿಕೊಂಡಿದೆ. ಹೀಗಿರುವಾಗ ಮೂರನೇ ಟಿ20ಯಲ್ಲಿ ಟೀಮ್‌ ಇಂಡಿಯಾದ ಪ್ಲೇಯಿಂಗ್-11ರಲ್ಲಿ ಏನಾದರೂ ಬದಲಾವಣೆ ಆಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಎರಡನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ಗೆ ಅವಕಾಶ ಸಿಕ್ಕಿದ್ದು, ಕೊರಳಲ್ಲಿನ ಸಮಸ್ಯೆಯಿಂದ ಶುಭ್‌ಮನ್ ಗಿಲ್ ಆಡಲು ಸಾಧ್ಯವಾಗಲಿಲ್ಲ. ಭಾರತ ಕೊನೆಯ ಪಂದ್ಯದ 11 ಆಟಗಾರರೊಂದಿಗೆ ಮೈದಾನಕ್ಕೆ ಹೋಗುತ್ತದೆಯೇ ಅಥವಾ ಬೆಂಚ್ ಮೇಲೆ ಕುಳಿತಿರುವ ಆಟಗಾರರನ್ನು ಪರೀಕ್ಷಿಸಲಾಗುತ್ತದೆಯೇ ಎಂಬುದು ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದೆ.

Story first published: Tuesday, July 30, 2024, 16:51 [IST]
Other articles published on Jul 30, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+