ವೈಭವ್ ಸ್ಫೋಟಕ ಬ್ಯಾಟಿಂಗ್: ಸಿಎಸ್‌ಕೆ ವಿರುದ್ಧ ಗೆದ್ದ ರಾಜಸ್ಥಾನ
ಗುವಾಹಟಿ: ಸಂಘಟಿತ ಆಟದ ಪ್ರದರ್ಶನ ನೀಡಿದ ರಾಜಸ್ಥಾನ ರಾಯಲ್ಸ್ 19ನೇ ಆವೃತ್ತಿಯಲ್ಲಿ ಗೆಲುವಿನ ಆರಂಭವನ್ನು ಕಂಡಿದೆ. ಸೋಮವಾರ ನಡೆದ ಪಂದ್ಯದಲ್ಲಿ ರಾಯಲ್ಸ್ ತಂಡ 8 ವಿಕೆಟ್‌ಗಳಿಂದ ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿತು. 47 ಎಸೆತಗಳು ಬಾಕಿ ಇರುವಂತೆ ಭರ್ಜರಿ ಜಯ ದಾಖಲಿಸಿದ ರಾಜಸ್ಥಾನ ಸದ್ಯ ಅಂಕ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹಿಂದಿಕ್ಕಿ ಅಗ್ರ ಸ್ಥಾನವನ್ನು ಪಡೆದಿದೆ.
ಚೆನ್ನೈ ಸೂಪರ್ ಕಿಂಗ್ಸ್ ನೀಡಿದ್ದ 128 ರನ್‌ಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ರಾಜಸ್ಥಾನ ರಾಯಲ್ಸ್ ತಂಡದ ಆರಂಭ ಭರ್ಜರಿಯಾಗಿತ್ತು. ಸ್ಫೋಟಕ ಬ್ಯಾಟರ್ ವೈಭವ್ ಸೂರ್ಯವಂಶಿ ತಮ್ಮ ನೈಜ ಶೈಲಿಯಲ್ಲಿ ಬ್ಯಾಟ್ ಮಾಡಿದರು. ಇವರು ಮೊದಲ ವಿಕೆಟ್‌ಗೆ ಯಶಸ್ವಿ ಜೈಸ್ವಾಲ್ ಜೊತೆಗೂಡಿ 6.2 ಓವರ್‌ಗಳಲ್ಲಿ 75 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿದರು.

ವೈಭವ್ ಅಬ್ಬರ
ವೈಭವ್ ಸೂರ್ಯವಂಶಿ ಐಪಿಎಲ್‌ನಲ್ಲಿ ತಮ್ಮ ಕ್ಲಾಸಿಕ್ ಫಾರ್ಮ್ ಮುಂದುವರೆಸಿದರು. ಇವರು ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ ಭಾರತದ ಪರ ವೇಗದ ಅರ್ಧಶತಕ ಬಾರಿಸಿದ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡರು. ಇವರು 17 ಎಸೆತಗಳಲ್ಲಿ 4 ಬೌಂಡರಿ, 5 ಸಿಕ್ಸರ್ ಸಹಾಯದಿಂದ 52 ರನ್ ಬಾರಿಸಿ ಔಟ್ ಆದರು.
ಭರವಸೆಯ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅವರು ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದರು. ಅಲ್ಲದೆ 36 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಹಾಯದಿಂದ ಅಜೇಯ 38 ರನ್ ಬಾರಿಸಿದರು. ಧ್ರುವ್ ಜುರೇಲ್ 18 ರನ್ ಬಾರಿಸಿ ಔಟ್ ಆದರು. ರಿಯಾನ್ ಪರಾಗ್ 1 ಬೌಂಡರಿ, 1 ಸಿಕ್ಸರ್ ಸಹಾಯದಿಂದ ಅಜೇಯ 14 ರನ್ ಸಿಡಿಸಿ ಮಿಂಚಿದರು. ಅಂತಿಮವಾಗಿ ರಾಜಸ್ಥಾನ ರಾಯಲ್ಸ್ ಕೇವಲ 12.1 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 128 ರನ್ ಸೇರಿಸಿ ಜಯ ದಾಖಲಿಸಿತು.
ಕಳಪೆ ಆರಂಭ
ಟಾಸ್ ಸೊತರೂ ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್‌ಕೆ ತಂಡದ ಆರಂಭ ಕಳಪೆಯಾಗಿತ್ತು. ಟಾಪ್ ಆರ್ಡರ್ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು. ಭರವಸೆಯ ಬ್ಯಾಟರ್ ಸಂಜು ಸ್ಯಾಮ್ಸನ್ (6), ನಾಯಕ ರುತುರಾಜ್ ಗಾಯಕ್ವಾಡ್ (6), ಆಯುಷ್ ಮಾತ್ರೆ (0), ಮ್ಯಾಥ್ಯೂ ಶಾರ್ಟ್ (2) ರನ್ ಕಲೆ ಹಾಕುವಲ್ಲಿ ವಿಫಲರಾದರು. ಮಧ್ಯಮ ಕ್ರಮಾಂಕದಲ್ಲಿ ಸರ್ಫರಾಜ್ ಖಾನ್ 2 ಬೌಂಡರಿ, 1 ಸಿಕ್ಸರ್ ಸಹಾಯದಿಂದ 17 ರನ್ ಬಾರಿಸಿ ಜಡ್ಡುಗೆ ವಿಕೆಟ್ ಒಪ್ಪಿಸಿದರು. ಕಾರ್ತಿಕ್ ಶರ್ಮಾ 18 ರನ್ ಸಿಡಿಸಿದರು. ಶಿವಂ ದುಬೆ ಒಂದು ಸಿಕ್ಸರ್ ಬಾರಿಸಿ ಭರವಸೆ ಮೂಡಿಸಿದ್ದರು. ಆದರೆ ಜಡೇಜಾ ಅವರ ಸ್ಪಿನ್ ಮೋಡಿ ಅರಿಯುವಲ್ಲಿ ವಿಫರಾಗಿ ಔಟ್ ಆದರು.

ಜೇಮಿ ಓವರ್‌ಟನ್ 2 ಬೌಂಡರಿ, 2 ಸಿಕ್ಸರ್ ಬಾರಿಸಿ 43 ರನ್ ಸಿಡಿಸಿದರು. ಪರಿಣಾಮ ಚೆನ್ನೈ ಸೂಪರ್ ಕಿಂಗ್ಸ್ 19.4 ಓವರ್‌ಗಳಲ್ಲಿ 127 ರನ್‌ಗಳಿಗೆ ಆಲೌಟ್ ಆಯಿತು. ರಾಜಸ್ಥಾನ ಪರ ಜೋಫ್ರಾ ಆರ್ಚರ್, ನಾಂಡ್ರಿ ಬರ್ಗರ್, ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಉರುಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications