ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ನಂಬರ್ 1 ಬೌಲರ್‌ನನ್ನು ತೆಕ್ಕೆಗೆ ಹಾಕಿಕೊಂಡ ರಾಜಸ್ಥಾನ್ ರಾಯಲ್ಸ್

Rajasthan Royals have signed Tabraiz Shamsi to replace Andrew Tye for remainder of tournament

ಬೆಂಗಳೂರು, ಆಗಸ್ಟ್ 25: ಈ ಬಾರಿಯ ಐಪಿಎಲ್ ಆವೃತ್ತಿಯ ಎರಡನೇ ಚರಣದ ಪಂದ್ಯಗಳಿಗೆ ಈಗ ದಿನಗಣನೆ ಆರಂಭವಾಗಿದೆ. ಈ ಬಾರಿಯ ಪಂದ್ಯಗಳು ಯುಎಇನಲ್ಲಿ ನಡೆಯಲಿರುವ ಕಾರಣದಿಂದಾಗಿ ಕೆಲ ತಂಡಗಳು ಈಗಾಗಲೇ ದುಬೈ ತಲುಪಿದ್ದು ಅಭ್ಯಾಸದಲ್ಲಿ ನಿರತವಾಗಿದೆ. ಕೆಲ ಆಟಗಾರರು ವೈಯಕ್ತಿಕ ಕಾರಣಗಳಿಂದಾಗಿ ಐಪಿಎಲ್‌ನ ಉಳಿದ ಪಂದ್ಯಗಳಿಗೆ ಅಲಭ್ಯವಾಗುತ್ತಿದ್ದು ಅಂತಾ ಆಟಗಾರರ ಸ್ಥಾನಕ್ಕೆ ಈಗ ಬದಲಿ ಆಟಗಾರರನ್ನು ಸೇರ್ಪಡೆಗೊಳಿಸುವ ಪ್ರಕ್ರಿಯೆ ಕೂಡ ಚುರುಕಿನಿಂದ ನಡೆಯುತ್ತಿದೆ. ಇದರಲ್ಲಿ ರಾಜಸ್ಥಾನ್ ರಾಯಲ್ಸ್ ಪ್ರಮುಖ ಆಟಗಾರನನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಈ ಬಾರಿ ಕೆಲ ಪ್ರಮುಖ ಆಟಗಾರರ ಸೇವೆಯಿಂದ ವಂಚಿತವಾಗುವ ಮೂಲಕ ಟೂರ್ನಿಯಲ್ಲಿ ಭಾರೀ ಹಿನ್ನೆಡೆ ಅನುಭವಿಸುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ದೊಡ್ಡ ಬಲ ಈಗ ದೊರೆತಿದೆ. ಪ್ರಸಕ್ತ ವಿಶ್ವ ಟಿ20 ಕ್ರಿಕೆಟ್‌ನ ನಂಬರ್ 1 ಬೌಲರ್ ಆಗಿರುವ ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಟಬ್ರೈಜ್ ಶಂಸಿ ರಾಜಸ್ಥಾನ್ ರಾಯಲ್ಸ್ ಪಾಲಾಗಿದ್ದಾರೆ. ಈ ಬಾರಿಯ ಐಪಿಎಲ್‌ನ ಉಳಿದ ಪಂದ್ಯಗಳಲ್ಲಿ ಆರ್‌ಆರ್ ಪರವಾಗಿ ಆಡಲು ಶಂಸಿ ಸಹಿ ಹಾಕಿದ್ದಾರೆ.

'ಅರ್ಧಶತಕ ಬಾರಿಸಿದ ಕೊಹ್ಲಿ' ಎನ್ನುತ್ತಾ ವಿರಾಟ್ ಕೊಹ್ಲಿ ಕಾಲೆಳೆದ ಕ್ರೀಡಾ ಪತ್ರಕರ್ತ!'ಅರ್ಧಶತಕ ಬಾರಿಸಿದ ಕೊಹ್ಲಿ' ಎನ್ನುತ್ತಾ ವಿರಾಟ್ ಕೊಹ್ಲಿ ಕಾಲೆಳೆದ ಕ್ರೀಡಾ ಪತ್ರಕರ್ತ!

ರಾಜಸ್ಥಾನ್ ರಾಯಲ್ಸ್ ತಂಡದ ವೇಗದ ಬೌಲರ್ ಆಂಡ್ರೋ ಟೈ ಐಪಿಎಲ್‌ನ ಉಳಿದ ಪಂದ್ಯಗಳಿಂದ ಹಿಂದಕ್ಕೆ ಸರಿದಿದ್ದಾರೆ. ವೈಯಕ್ತಿಕ ಕಾರಣಗಳನ್ನು ನೀಡಿ ಅವರು ಟೂರ್ನಿಯಿಂದ ಹಿಂದಕ್ಕೆ ಸರಿಯುತ್ತಿರುವುದಾಗಿ ಮ್ಯಾನೇಜ್‌ಮೆಂಟ್‌ಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಬದಲಿ ಆಟಗಾರನಾಗಿ ಶಂಸಿ ಅವರನ್ನು ಸೇರ್ಪಡೆಗೊಳಿಸಿದೆ.

ದಕ್ಷಿಣ ಆಫ್ರಿಕಾದ ಸ್ಪಿನ್ನರ್ ಶಂಸಿ ಈ ಬಾರಿಯ ಐಪಿಎಲ್‌ನ ಉಳಿದ ಪಂದ್ಯಗಳಿಗೂ ಮುನ್ನ ರಾಜಸ್ಥಾನ್ ರಾಯಲ್ಸ್ ತಂಡದೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತಿರುವ ಎರಡನೇ ಆಟಗಾರನಾಗಿದ್ದಾರೆ ಶಂಸಿ. ಇದಕ್ಕೂ ಮುನ್ನ ನ್ಯೂಜಿಲೆಮಡ್‌ನ ಬ್ಯಾಟ್ಸ್‌ಮನ್ ಗ್ಲೆನ್ ಫಿಲಿಪ್ಸ್ ಜೊತೆಗೆ ಒಪ್ಪಂದವನ್ನು ಮಾಡಿಕೊಂಡಿತ್ತು ಆರ್‌ಆರ್ ತಂಡ. ಇಂಗ್ಲೆಂಡ್ ತಂಡದ ಆಟಗಾರ ರಾಜಸ್ಥಾನ್ ರಾಯಲ್ಸ್ ತಂಡದ ಅನುಭವಿ ಬ್ಯಾಟ್ಸ್‌ಮನ್ ಆಗಿದ್ದ ಜೋಸ್ ಬಟ್ಲರ್ ಈ ಭಾರಿಯ ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿರುವ ಕಾರಣದಿಂದಾಗಿಈ ಸೇರ್ಪಡೆಯನ್ನು ಮಾಡಿಕೊಂಡಿದೆ ರಾಜಸ್ಥಾನ್ ರಾಯಲ್ಸ್.

ಈ ಬಾರಿಯ ಐಪಿಎಲ್‌ನ ಉಳಿದ ಪಂದ್ಯಗಳು ಸೆಪ್ಟೆಂಬರ್ 19ರಿಂದ ಆರಂಭವಾಗಲಿದೆ. ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಸೆಪ್ಟೆಂಬರ್ 21ರಿಂದ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಸೆಣೆಸುವ ಮೂಲಕ ಈ ಆವೃತ್ತಿಯಲ್ಲಿ ಅಭಿಯಾನ ಆರಂಭಿಸಲಿದೆ. ಈ ಬಾರಿಯ ಐಪಿಎಲ್‌ನ ಮೊದಲ ಚರಣದ ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ಸಾಧಾರಣ ಮಟ್ಟದ ಪ್ರದರ್ಶನ ನೀಡಿತ್ತು. ಆಡಿದ ಏಳು ಪಂದ್ಯಗಳಲ್ಲಿ ಮೂರು ಗೆಲುವು ಸಾಧಿಸಿರುವ ಆರ್‌ಆರ್ ತಂಡ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಹೀಗಾಗಿ ಟೂರ್ನಿಯಲ್ಲಿ ಮತ್ತಷ್ಟು ಉತ್ತಮ ಪ್ರದರ್ಶನ ನಿಡುವ ಮೂಲಕ ಪ್ಲೇಆಫ್‌ಗೆ ಪ್ರವೇಶ ಪಡೆಯಲು ಪ್ರಯತ್ನ ಮುಂದುವರಿಸಲಿದೆ.

ಹೆಡಿಂಗ್ಲೆ ಟೆಸ್ಟ್ ನಲ್ಲಿ ಮಳೆ ಬಂದ್ರೆ ಪಂದ್ಯದ ಮೇಲಾಗೋ ಎಫೆಕ್ಟ್ ಏನು? | Oneindia Kannada

31ರ ಹರೆಯದ ಶಂಸಿ ದಕ್ಷಿಣ ಆಫ್ರಿಕಾದ ದೇಶೀಯ ಕ್ರಿಕೆಟ್‌ನಲ್ಲಿ ಟೈಟಾನ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. 2017ರಲ್ಲಿ ಇಂಗ್ಲೆಂಡ್ ತಂಡದ ವಿರುದ್ಧದ ದ್ವಿಪಕ್ಷೀಯ ಸರಣಿಯಲ್ಲಿ ಶಂಸಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ. ಈವರೆಗೆ 39 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಪ್ರತಿನಿಧಿಸಿರುವ ಶಂಸಿ 45 ವಿಕೆಟ್ ಪಡೆದುಕೊಂಡಿದ್ದಾರೆ. 27 ಏಕದಿನ ಪಂದ್ಯಗಳಲ್ಲಿ ತಮ್ಮ ರಾಷ್ಟ್ರವನ್ನು ಪ್ರತಿನಿಧಿಸಿರುವ ಈ ಸ್ಪಿನ್ನರ್ 32 ವಿಕೆಟ್ ಸಂಪಾದಿಸಿದ್ದಾರೆ. ಇನ್ನು ಐಪಿಎಲ್‌ನಲ್ಲಿ ಇದಕ್ಕೂ ಮುನ್ನ ಆರ್‌ಸಿಬಿ ತಂಡದಲ್ಲಿ ಆಡಿದ್ದ ಶಂಸಿ ನಾಲ್ಕು ಪಂದ್ಯಗಳಲ್ಲಿ ಆಡಿ 3 ವಿಕೆಟ್ ಕಬಳಿಸಿದ್ದರು. 2016ರ ಆವೃತ್ತಿಯಲ್ಲಿ ಬದಲಿ ಆಟಗಾರನಾಗಿ ಶಂಸಿ ಅವರನ್ನು ಆರ್‌ಸಿಬಿ ಸೇರ್ಪಡೆಗೊಳಿಸಿತ್ತು.

Story first published: Thursday, August 26, 2021, 9:52 [IST]
Other articles published on Aug 26, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X