ಯಶಸ್ವಿ ಜೈಸ್ವಾಲ್ ಅರ್ಧಶತಕ: ಮುಂಬೈಗೆ 151 ರನ್ ಗುರಿ ನೀಡಿದ ರಾಯಲ್ಸ್
ಗುವಾಹಟಿ: ಆರಂಭಿಕ ಯಶಸ್ವಿ ಜೈಸ್ವಾಲ್ ಬಾರಿಸಿದ ಅರ್ಧಶತಕ ಹಾಗೂ ವೈಭವ್ ಸೂರ್ಯವಂಶಿ ಅವರ ಜವಾಬ್ದಾರಿಯುತ ಆಟದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ 19ನೇ ಆವೃತ್ತಿಯ ಐಪಿಎಲ್‌ನ 13ನೇ ಪಂದ್ಯದಲ್ಲಿ 139 ರನ್‌ಗಳ ಗುರಿಯನ್ನು ಮುಂಬೈ ಇಂಡಿಯನ್ಸ್‌ಗೆ ನೀಡಿದೆ.
ಮಳೆ ಬಾಧಿತ ರಾಜಸ್ಥಾನ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಪಂದ್ಯದಲ್ಲಿ ಓವರ್‌ಗಳಿಗೆ ಕತ್ತರಿ ಬಿದ್ದಿತು. 20 ಓವರ್‌ಗಳ ಪಂದ್ಯವನ್ನು 11 ಓವರ್‌ಗಳಿಗೆ ಇಳಿಸಲಾಯಿತು. ಈ ಪಂದ್ಯದಲ್ಲಿ 3.2 ಓವರ್‌ಗಳ ಪವರ್ ಪ್ಲೇ ಆಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಮೊದಲು ಬೌಲಿಂಗ್ ಆಯ್ದುಕೊಂಡಿತು.

ರಾಜಸ್ಥಾನ ರಾಯಲ್ಸ್ ಆರಂಭಿಕರಾದ ವೈಭವ್ ಸೂರ್ಯವಂಶಿ ಹಾಗೂ ಯಶಸ್ವಿ ಜೈಸ್ವಾಲ್ ಜೋಡಿ ಸ್ಫೋಟಕ ಆರಂಭವನ್ನು ನೀಡಿತು. ಉಭಯ ಆಟಗಾರರು ಸಿಕ್ಸರ್ ಹಾಗೂ ಬೌಂಡರಿಗಳನ್ನು ಬಾರಿಸಿ ತಂಡಕ್ಕೆ ಆಧಾರವಾದರು. ಈ ಜೋಡಿಯನ್ನು ಮುಂಬೈ ತಂಡ ಪವರ್‌ಪ್ಲೇನಲ್ಲಿ ಕಟ್ಟಿ ಹಾಕುವಲ್ಲಿ ವಿಫಲವಾಯಿತು. ಈ ಜೋಡಿ ಮೊದಲ ಓವರ್‌ನಲ್ಲಿ 22 ರನ್ ಸೇರಿಸಿತು. ಎರಡನೇ ಓವರ್ ಬೌಲ್ ಮಾಡಿದ ಜಸ್ಪ್ರೀತ್ ಬುಮ್ರಾ ಅವರ ಓವರ್‌ನಲ್ಲಿ ಈ ಜೋಡಿ 14 ರನ್ ಬಾರಿಸಿತು. ಇನ್ನು ಮೂರನೇ ಓವರ್ ಎಸೆದ ಟ್ರೆಂಟ್ ಬೋಲ್ಟ್ ಅವರ ಓವರ್‌ನಲ್ಲಿ ರಾಜಸ್ಥಾನ್ ಆರಂಭಿಕರು 22 ರನ್ ಸೇರಿಸಿತು.
ವೈಭವ್ ಸೂರ್ಯವಂಶಿ ಹಾಗೂ ಯಶಸ್ವಿ ಜೈಸ್ವಾಲ್ ಜೋಡಿ ಮೊದಲ ವಿಕೆಟ್‌ಗೆ 4.6 ಓವರ್‌ಗಳಲ್ಲಿ 80 ರನ್ ಸೇರಿಸಿತು. ಈ ವೇಳೆ ವೈಭವ್ 14 ಎಸೆತಗಳಲ್ಲಿ 1 ಬೌಂಡರಿ, 5 ಸಿಕ್ಸರ್ ಸಹಾಯದಿಂದ 39 ರನ್ ಸೇರಿಸಿದರು. ಮಧ್ಯಮ ಕ್ರಮಾಂಕದ ಸ್ಟಾರ್ ಆಟಗಾರ ಧ್ರುವ್ ಜುರೇಲ್ (2) ರನ್ ಕಲೆ ಹಾಕುವಲ್ಲಿ ವಿಫಲರದರು. ನಾಯಕ ರಿಯಾನ್ ಪರಾಗ್ 10 ಎಸೆತಗಳಲ್ಲಿ 1 ಬೌಂಡರಿ, 2 ಸಿಕ್ಸರ್ ಸಹಾಯದಿಂದ 20 ರನ್ ಸಿಡಿಸಿ ಔಟ್ ಆದರು.
ಯಶಸ್ವಿ ಅರ್ಧಶತಕ
ಆರಂಭಿಕ ಯುವ ಆಟಗಾರ ಯಶಸ್ವಿ ಜೈಸ್ವಾಲ್ ತಮ್ಮ ಭರ್ಜರಿ ಫಾರ್ಮ್ ಮುಂದುವರೆಸಿದರು. ಇವರು ಈ ಲೀಗ್‌ನಲ್ಲಿ ಸತತ ಎರಡನೇ ಅರ್ಧಶತಕ ಬಾರಿಸಿ ಮಿಂಚಿದರು. ಇವರು ಕೇವಲ 32 ಎಸೆತಗಳಲ್ಲಿ 10 ಬೌಂಡರಿ, 4 ಸಿಕ್ಸರ್ ಸಹಾಯದಿಂದ ಅಜೇಯ 77 ರನ್ ಬಾರಿಸಿ ತಂಡಕ್ಕೆ ಆಧಾರವಾದರು. ಅಂತಿಮವಾಗಿ ರಾಜಸ್ಥಾನ್ ರಾಯಲ್ಸ್ 11 ಓವರ್‌ಗಳಲ್ಲಿ 3 ವಿಕೆಟ್‌ಗೆ 150 ರನ್ ಸೇರಿಸಿತು.
ಮುಂಬೈ ತಂಡದ ಪರ ಸ್ಪಿನ್ ಬೌಲರ್ ಎ.ಎಂ. ಗಜನ್‌ಫರ್ 2 ವಿಕೆಟ್ ಕಬಳಿಸಿದರು. ಶಾರ್ದೂಲ್ ಠಾಕೂರ್ 1 ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications