Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಮುಂಬೈ ಚಾಲೆಂಜ್ ಗೆದ್ದ ರಾಯಲ್: ಫಿಲ್‌ ಸಾಲ್ಟ್‌, ರಜತ್‌ ಅಬ್ಬರ

ಸಂಘಟಿತ ಆಟದ ಪ್ರದರ್ಶನ ನೀಡಿದ ಹಾಲಿ ಚಾಂಪಿಯನ್‌ ರಾಯಲ್ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) 19ನೇ ಆವೃತ್ತಿ ಐಪಿಎಲ್‌ನ 20ನೇ ಪಂದ್ಯದಲ್ಲಿ 18 ರನ್‌ಗಳಿಂದ ಮುಂಬೈ ಇಂಡಿಯನ್ಸ್‌ ತಂಡವನ್ನು ಮಣಿಸಿದೆ. ಈ ಗೆಲುವಿನ ಮೂಲಕ ಆರ್‌ಸಿಬಿ ಆಡಿದ ನಾಲ್ಕು ಪಂದ್ಯಗಳಲ್ಲಿ 3 ಗೆಲುವು ದಾಖಲಿಸಿದ್ದು, 6 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

ಆರ್‌ಸಿಬಿ ನೀಡಿದ್ದ 241 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡದ ಆರಂಭ ಉತ್ತಮವಾಗಿತ್ತು. ಆರಂಭಿಕರಾದ ರಿಯಾನ್ ರಿಕಲ್ಟನ್‌ ಹಾಗೂ ರೋಹಿತ್ ಶರ್ಮಾ ಜೋಡಿ ಮೊದಲ ವಿಕೆಟ್‌ಗೆ 57 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿತು. ಈ ಹಂತದಲ್ಲಿ ರೋಹಿತ್ ಶರ್ಮಾ 19 ರನ್‌ ಬಾರಿಸಿದ್ದಾಗ ರಿಟೈಡ್ ಹರ್ಟ್‌ ಆದರು. ರಿಯಾನ್ ರಿಕಲ್ಟನ್‌ 3 ಬೌಂಡರಿ, 3 ಸಿಕ್ಸರ್ ಸಹಾಯದಿಂದ 37 ರನ್‌ ಸಿಡಿಸಿ ಔಟ್ ಆದರು.

Rajat Patidar

ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಅವಕಾಶವನ್ನು ಪಡೆದ ಸೂರ್ಯಕುಮಾರ್ ಯಾದವ್ ತಂಡದ ಪರ ದೊಡ್ಡ ಇನಿಂಗ್ಸ್‌ ಕಟ್ಟಲಿಲ್ಲ. ಇವರು 33 ರನ್‌ ಬಾರಿಸಿದ್ದಾಗ ಕೃನಾಲ್ ಪಾಂಡ್ಯ ಎಸೆತದಲ್ಲಿ ಡೀಪ್ ಬ್ಯಾಕ್‌ವರ್ಡ್ ಸ್ಕ್ವೇರ್ ಲೆಗ್‌ನಲ್ಲಿ ರಸಿಕ್ ದಾರ್‌ಗೆ ಕ್ಯಾಚ್ ನೀಡಿದರು. ಭರವಸೆಯ ಬ್ಯಾಟರ್ ತಿಲಕ್ ವರ್ಮಾ (1) ಬಂದು ಹೋಗುವ ಸಂಪ್ರದಾಯ ಮುಗಿಸಿದರು.

ಶೆರ್ಫೇನ್ ರುದರ್ಫೋರ್ಡ್ ಆರ್ಭಟ

ನಾಯಕ ಹಾರ್ದಿಕ್ ಪಾಂಡ್ಯ ತಮ್ಮ ನೈಜ ಆಟವನ್ನು ಆಡಿದರು. ಅಲ್ಲದೆ ದೊಡ್ಡ ಹೊಡೆತಗಳನ್ನು ಪ್ರಯೋಗಿಸಿ ತಂಡಕ್ಕೆ ಆಧಾರವಾದರು. ಇವರು 6 ಬೌಂಡರಿ, 1 ಸಿಕ್ಸರ್ ಸಹಾಯದಿಂದ 40 ರನ್‌ ಬಾರಿಸಿ ಔಟ್ ಆದರು. ಇಂಪ್ಯಾಕ್ಟ್ ಪ್ಲೇಯರ್‌ ಶೆರ್ಫೇನ್ ರುದರ್ಫೋರ್ಡ್ 1 ಬೌಂಡರಿ, 9 ಸಿಕ್ಸರ್ ನೆರವಿನಿಂದ ಅಜೇಯ 71 ರನ್‌ ಸಿಡಿಸಿದರು. ಅಂತಿಮವಾಗಿ ಮುಂಬೈ ಇಂಡಿಯನ್ಸ್‌ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 222 ರನ್‌ ಕಲೆ ಹಾಕಿದೆ.

ಭರ್ಜರಿ ಜೊತೆಯಾಟ

ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಆರ್‌ಸಿಬಿ ತಂಡದ ಆರಂಭ ಭರ್ಜರಿಯಾಗಿತ್ತು. ಆರಂಭಿಕರಾದ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಜೋಡಿ 10.5 ಓವರ್‌ಗಳಲ್ಲಿ 120 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿತು. ಈ ಲೀಗ್‌ನಲ್ಲಿ ಇದೇ ಮೊದಲ ಬಾರಿಗೆ ಸ್ಥಿರ ಬ್ಯಾಟಿಂಗ್ ನಡೆಸಿ ಭರವಸೆ ಮೂಡಿಸಿದ್ದ ಫಿಲ್ ಸಾಲ್ಟ್‌ 6 ಬೌಂಡರಿ, 6 ಸಿಕ್ಸರ್ ಸಹಾಯದಿಂದ 78 ರನ್‌ ಬಾರಿಸಿದರು.

Rajat Patidar

ಎರಡನೇ ವಿಕೆಟ್‌ಗೆ ವಿರಾಟ್‌ ಕೊಹ್ಲಿ ಹಾಗೂ ರಜತ್ ಪಾಟಿದಾರ್ ಜೋಡಿ ಅರ್ಧಶತಕದ ಜೊತೆಯಾಟದ ಕಾಣಿಕೆ ನೀಡಿತು. ವಿರಾಟ್‌ ಕೊಹ್ಲಿ 50 ರನ್‌ ಬಾರಿಸಿ ಔಟ್ ಆದರು. ರಜತ್ ಪಾಟಿದಾರ್ 20 ಎಸೆತಗಳಲ್ಲಿ 53 ರನ್‌ ಸಿಡಿಸಿ ತಂಡದ ಮೊತ್ತವನ್ನು ಹಿಗ್ಗಿಸುವಲ್ಲಿ ನೆರವಾದರು. ಟೀಮ್ ಡೇವಿಡ್‌ ಅಜೇಯ 34, ಜಿತೇಶ್ ಶರ್ಮಾ 10 ರನ್ ಬಾರಿಸಿದರು. ಅಂತಿಮವಾಗಿ ಆರ್‌ಸಿಬಿ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 240 ರನ್ ಸೇರಿಸಿತು.

Story first published: Monday, April 13, 2026, 0:23 [IST]
Other articles published on Apr 13, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+