ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ನಾಯಕನಾಗಿ ರಜತ್ ಪಾಟಿದಾರ್ ಮುನ್ನಡೆಸುತ್ತಿದ್ದಾರೆ. ರಜತ್ ಪಾಟಿದಾರ್ ನೇತೃತ್ವದಲ್ಲಿ ಆರ್‌ಸಿಬಿ ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನಾಯಕ ರಜತ್ ಪಾಟಿದಾರ್ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾದ ಮಾಜಿ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ ಅವರನ್ನು ಪಾಟಿದಾರ್ ಹಿಂದಿಕ್ಕಿದ್ದಾರೆ.
ರಜತ್ ಪಾಟಿದಾರ್ ಐಪಿಎಲ್‌ನಲ್ಲಿ ಅತಿ ಕಡಿಮೆ ಇನ್ನಿಂಗ್ಸ್‌ಗಳನ್ನು ಆಡುವ ಮೂಲಕ 1000 ರನ್ ಗಳಿಸಿದ ಎರಡನೇ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್ 2025 ರ 34 ನೇ ಪಂದ್ಯದ 30 ನೇ ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದಾರೆ. ರಜತ್ 18 ಎಸೆತಗಳಲ್ಲಿ 23 ರನ್ ಗಳಿಸಿ ಔಟಾದರು.

ಐಪಿಎಲ್‌ನಲ್ಲಿ ಅತಿ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 1000 ರನ್ ಗಳಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಸಾಯಿ ಸುದರ್ಶನ್ ಹೊಂದಿದ್ದಾರೆ. ಅವರು ಕೇವಲ 25 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಈಗ ರಜತ್ ಪಾಟಿದಾರ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಬಂದಿದ್ದಾರೆ. ಅವರು 30 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡುವಲ್ಲಿ ವಿಫಲವಾಗಿದ್ದಾರೆ. ಈ ಹಿಂದೆ 31 ಇನ್ನಿಂಗ್ಸ್‌ಗಳಲ್ಲಿ ಈ ದಾಖಲೆ ಸೃಷ್ಟಿಸಿದ್ದ ಸಚಿನ್ ತೆಂಡೂಲ್ಕರ್ ಅವರನ್ನು ಪಾಟಿದಾರ್ ಮೂರನೇ ಸ್ಥಾನಕ್ಕೆ ತಳ್ಳಿದ್ದಾರೆ.
ಆರ್‌ಸಿಬಿ ಪರ 1000 ಕ್ಕೂ ಹೆಚ್ಚು ರನ್ ಗಳಿಸಿದ ಮೂರನೇ ಭಾರತೀಯ ಆಟಗಾರ ಎಂಬ ದಾಖಲೆಯನ್ನೂ ರಜತ್ ಪಾಟಿದಾರ್ ಮಾಡಿದ್ದಾರೆ. ಟೀಮ್ ಇಂಡಿಯ್ ಸ್ಟಾರ್ ಬ್ಯಾಟರ್ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗು ದೇವದತ್ ಪಡಿಕ್ಕಲ್ ನಂತರ ಐಪಿಎಲ್‌ನಲ್ಲಿ ಆರ್‌ಸಿಬಿ ಪರ 1000 ಕ್ಕೂ ಹೆಚ್ಚು ರನ್ ಗಳಿಸಿದ ಮೂರನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ರಜತ್ ಪಾಟಿದಾರ್ ಪಾತ್ರರಾಗಿದ್ದಾರೆ.
ಸಾಯಿ ಸುದರ್ಶನ್- 25 ಇನ್ನಿಂಗ್ಸ್
ರಜತ್ ಪಾಟಿದಾರ್- 30 ಇನ್ನಿಂಗ್ಸ್
ಸಚಿನ್ ತೆಂಡೂಲ್ಕರ್- 31 ಇನ್ಸಿಂಗ್ಸ್
ರುತುರಾಜ್ ಗಾಯಕ್ವಾಡ್- 31 ಇನ್ಸಿಂಗ್ಸ್
ತಿಲಕ್ ವರ್ಮಾ- 33 ಇನ್ಸಿಂಗ್ಸ್