Rajat Patidar: ಯಶಸ್ವಿ ಜೈಸ್ವಾಲ್ ದಾಖಲೆ ಅಳಿಸಿದ ರಜತ್ ಪಾಟಿದಾರ್
ಗುವಾಹಟಿಯಲ್ಲಿ ನಡೆದ 19ನೇ ಆವೃತ್ತಿಯ ಐಪಿಎಲ್‌ನಲ್ಲಿ ಶುಕ್ರವಾರ ರಾಜಸ್ಥಾನ್ ರಾಯಲ್ಸ್ ಭರ್ಜರಿ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಸೋಲು ಕಂಡಿದೆ. ಪ್ರಸಕ್ತ ಆವೃತ್ತಿಯ ಐಪಿಎಲ್‌ನಲ್ಲಿ ಆರ್‌ಸಿಬಿ ಕಂಡ ಮೊದಲ ಸೋಲು ಇದಾಗಿದೆ. ಈ ವೇಳೆ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ಅಮೋಘ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಧಾರವಾಗಿದ್ದರು. ಈ ಮೂಲಕ ರಜತ್ ಪಾಟಿದಾರ್ ತಮ್ಮ ಟಿ20 ವೃತ್ತಿಜೀವನದಲ್ಲಿ ಪ್ರಮುಖ ಮೈಲಿಗಲ್ಲು ಮುಟ್ಟಿದ್ದಾರೆ.
ರಾಜಸ್ಥಾನ್ ರಾಯಲ್ಸ್ ವಿರುದ್ಧ ಸಂಕಷ್ಟದಲ್ಲಿದ್ದ ತಂಡಕ್ಕೆ ರಜತ್ ಆಧಾರವಾದರು. ಒಂದು ಬದಿಯಲ್ಲಿ ವಿಕೆಟ್‌ಗಳು ಬೀಳುತ್ತಿದ್ದರೂ ಸಹ ಇನ್ನೊಂದು ಬದಿಯನ್ನು ಗಟ್ಟಿಯಾಗಿ ಹಿಡಿದಿಟ್ಟುಕೊಂಡಿದ್ದ ರಜತ್ ಅಮೋಘ ಬ್ಯಾಟಿಂಗ್ ನಡೆಸಿದರು. ಈ ಲೀಗ್‌ನ ಮೂರನೇ ಪಂದ್ಯದಲ್ಲಿ ಆರ್‌ಸಿಬಿ ನಾಯಕ 40 ಎಸೆತಗಳಲ್ಲಿ 63 ರನ್ ಗಳಿಸಿ ಔಟಾದರು. ಈ ಮೂಲಕ ಆರ್‌ಸಿಬಿ 200 ರನ್‌ಗಳ ಗಡಿಯನ್ನು ದಾಟುವಲ್ಲಿ ನೆರವಾದರು. ಈ ಅಮೋಘ ಇನಿಂಗ್ಸ್ ಮೂಲಕ ಆರ್‌ಸಿಬಿ ಟಿ20 ವೃತ್ತಿ ಜೀವನದಲ್ಲಿ 3 ಸಾವಿರ ರನ್‌ಗಳನ್ನು ಪೂರ್ಣಗೊಳಿಸಿದ ಹೆಗ್ಗಳಿಕೆ ತಮ್ಮದಾಗಿಸಿಕೊಂಡರು.

ರಜತ್ ಪಾಟಿದಾರ್ ಟಿ20 ಕ್ರಿಕೆಟ್‌ನಲ್ಲಿ ವೇಗವಾಗಿ 3000 ರನ್ ಕಲೆ ಹಾಕಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಯಶಸ್ವಿ ಜೈಸ್ವಾಲ್ ಸಾಧನೆಯನ್ನು ಮೀರಿ ನಿಂತಿದ್ದಾರೆ. ಇವರು 95 ಇನಿಂಗ್ಸ್‌ಗಳಲ್ಲಿ 3000 ರನ್ ಕಲೆ ಹಾಕಿ ಅಬ್ಬರಿಸಿದ್ದಾರೆ. ಯಶಸ್ವಿ ಜೈಸ್ವಾಲ್ 102 ಇನಿಂಗ್ಸ್‌ಗಳಲ್ಲಿ ಈ ಸಂಖ್ಯೆಯನ್ನು ಮುಟ್ಟಿ ಸಾಧನೆ ಮಾಡಿದ್ದರು. ಈಗ ಈ ದಾಖಲೆ ರಜತ್ ಪಾಟಿದಾರ್ ಹೆಸರಿನಲ್ಲಿದೆ.
ಟಿ20 ಕ್ರಿಕೆಟ್‌ನಲ್ಲಿ ವೇಗವಾಗಿ 3 ಸಾವಿರ ರನ್ ಕಲೆ ಹಾಕಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ತಿಲಕ್ ವರ್ಮಾ ಮೊದಲ ಸ್ಥಾನದಲ್ಲಿದ್ದಾರೆ. ಇವರು 90 ಇನ್ನಿಂಗ್ಸ್‌ಗಳಲ್ಲಿ 3000 ರನ್‌ಗಳನ್ನು ತಲುಪಿದ ಅತ್ಯಂತ ವೇಗದ ಭಾರತೀಯ ಬ್ಯಾಟ್ಸ್‌ಮನ್ ಎಂಬ ದಾಖಲೆ ಹೊಂದಿದ್ದಾರೆ. 91 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ ರುತುರಾಜ್ ಗಾಯಕ್ವಾಡ್ ಎರಡನೇ ಸ್ಥಾನದಲ್ಲಿದ್ದಾರೆ. ಕೆಎಲ್ ರಾಹುಲ್ 93 ಇನ್ನಿಂಗ್ಸ್‌ಗಳಲ್ಲಿ 3000 ಟಿ20 ರನ್‌ಗಳನ್ನು ತಲುಪಿದ್ದು ಮೂರನೇ ಸ್ಥಾನದಲ್ಲಿದ್ದಾರೆ. 95 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ ಪಾಟಿದಾರ್ ನಾಲ್ಕನೇ ಸ್ಥಾನವನ್ನು ತಲುಪಿದ್ದಾರೆ.
ಪಂದ್ಯದ ಫಲಿತಾಂಶ
ಆರ್‌ಸಿಬಿ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ್ ಮೊದಲು ಬೌಲಿಂಗ್ ಮಾಡಲು ಮುಂದಾಯಿತು. ನಾಯಕ ರಿಯಾನ್ ಪರಾಗ್ ಅವರ ನಿರ್ಧಾರವನ್ನು ಬೌಲರ್‌ಗಳು ಸಮರ್ಥಿಸಿಕೊಂಡರು. ಆರ್‌ಸಿಬಿ ತಂಡದ ಟಾಪ್ ಆರ್ಡರ್ ಬ್ಯಾಟರ್‌ಗಳನ್ನು ಪವರ್ ಪ್ಲೇನಲ್ಲಿ ಪೆವಿಲಿಯನ್‌ಗೆ ಕಳುಹಿಸಿದ ಆರ್‌ಆರ್ ಆರಂಭದಲ್ಲೇ ಮೇಲುಗೈ ಸಾಧಿಸಿತು. ಅಂತಿಮವಾಗಿ ಆರ್‌ಸಿಬಿ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 201 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ರಾಯಲ್ಸ್ 18 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 202 ರನ್ ಕಲೆ ಹಾಕಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications