
ನವದೆಹಲಿ, ಮೇ 19: ಹಾಕಿ ಇಂಡಿಯಾದ ಅಧ್ಯಕ್ಷರಾಗಿದ್ದ ಮರಿಯಮ್ಮ ಕೋಶಿ ಅವರು ರಾಜೀನಾಮೆ ನೀಡಿದ್ದು, ಅವರ ಸ್ಥಾನಕ್ಕೆ ರಾಜೀಂದರ್ ಸಿಂಗ್ ಆಯ್ಕೆಯಾಗಿದ್ದಾರೆ.
ಹಿಂದೆ ಹಾಕಿ ಇಂಡಿಯಾದ ಹಿರಿಯ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ರಾಜೀಂದರ್ ಸಿಂಗ್ ಅವರು ಹಾಕಿ ಇಂಡಿಯಾ ಅಧ್ಯಕ್ಷ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.
ಹಿಂದೆ ಹಾಕಿ ಇಂಡಿಯಾದ ಖಜಾಂಚಿಯಾಗಿಯೂ ಕೆಲಸ ಮಾಡಿದ್ದ ರಾಜೀಂದರ್ ಹಾಕಿ ಇಂಡಿಯಾ ಅಧ್ಯಕ್ಷರಾಗಿ ಆಯ್ಕೆಯಾಗುವುದಕ್ಕೂ ಮುನ್ನ ಜಮ್ಮು-ಕಾಶ್ಮೀರ ಹಾಕಿ ಖಜಾಂಚಿಯಾಗಿ ಕಾರ್ಯನಿರ್ವಹಿಸಿದ್ದರು.
ಈ ಕುರಿತು ಮಾತನಾಡಿರುವ ಹಾಕಿ ಇಂಡಿಯಾದ ಕಾರ್ಯದರ್ಶಿಯಾಗಿರುವ ಮೊಹಮ್ಮದ್ ಮುಷ್ತಾಕ್ ಅಹ್ಮದ್ ಅವರು, '19 ಮೇ 2018ರ ಇಂದಿನಿಂದ ರಾಜೀಂದರ್ ಸಿಂಗ್ ಅವರು ಹಾಕಿ ಇಂಡಿಯಾದ ಅಧ್ಯಕ್ಷ ಸ್ಥಾನವನ್ನು ತುಂಬಲಿದ್ದಾರೆ ಎಂದು ತಿಳಿಸಲು ನಾವು ಸಂತಸ ಪಡುತ್ತಿದ್ದೇವೆ' ಎಂದರು.