ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Ranji Trophy: ಮಯಾಂಕ್, ಸಮರ್ಥ್ ಅರ್ಧಶತಕ; ಕ್ವಾರ್ಟರ್‌ಫೈನಲ್‌ನಲ್ಲಿ ಉತ್ತರಾಖಂಡ ವಿರುದ್ಧ ಕರ್ನಾಟಕ ಮೇಲುಗೈ

Ranji Trophy 2022-23: Karnataka Dominate Against Uttarakhand In Ranji Trophy Quarter-finals

ಮಂಗಳವಾರ, ಜನವರಿ 31ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2022-23ರ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್‌ನಲ್ಲಿ ಕರ್ನಾಟಕ ಮತ್ತು ಉತ್ತರಾಖಂಡ ತಂಡಗಳು ಮುಖಾಮುಖಿಯಾಗಿದ್ದು, ಮೊದಲ ದಿನದಾಟದ ಮುಕ್ತಾಯಕ್ಕೆ ಕರ್ನಾಟಕವು ಪಂದ್ಯದ ಮೇಲೆ ಬಿಗಿ ಹಿಡಿತ ಸಾಧಿಸಿದೆ.

ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಮಯಾಂಕ್ ಅಗರ್ವಾಲ್ ನಾಯಕತ್ವದ ಕರ್ನಾಟಕ ಪ್ರವಾಸಿ ಉತ್ತರಾಖಂಡ ತಂಡವನ್ನು 55.4 ಓವರ್‌ಗಳಲ್ಲಿ 116 ರನ್‌ಗಳಿಗೆ ಆಲೌಟ್ ಮಾಡಿತು. ಈ ವೇಳೆ ಕರ್ನಾಟಕ ತಂಡದ ಬಲಗೈ ಮಧ್ಯಮ ವೇಗಿ ಮುರಳೀಧರ ವೆಂಕಟೇಶ್ 14 ಓವರ್‌ಗಳಲ್ಲಿ 36 ರನ್ ನೀಡಿ 5 ವಿಕೆಟ್‌ಗಳೊಂದಿಗೆ ಮಿಂಚಿದರು.

WIPL 2023: ಮಹಿಳಾ ಐಪಿಎಲ್‌ನಲ್ಲಿ ಗುಜರಾತ್ ಜೈಂಟ್ಸ್ ತಂಡದ ಮೆಂಟರ್ ಆಗಿ ಮಿಥಾಲಿ ರಾಜ್ ನೇಮಕWIPL 2023: ಮಹಿಳಾ ಐಪಿಎಲ್‌ನಲ್ಲಿ ಗುಜರಾತ್ ಜೈಂಟ್ಸ್ ತಂಡದ ಮೆಂಟರ್ ಆಗಿ ಮಿಥಾಲಿ ರಾಜ್ ನೇಮಕ

ಎದುರಾಳಿ ತಂಡವನ್ನು ಕಡಿಮೆ ಮೊತ್ತಕ್ಕೆ ಕಟ್ಟಿಹಾಕಿದ ನಂತರ ಬ್ಯಾಟಿಂಗ್ ಆರಂಭಿಸಿದ ಕರ್ನಾಟಕ ತಂಡ, ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ರವಿಕುಮಾರ್ ಸಮರ್ಥ್ ಮತ್ತು ಮಯಾಂಕ್ ಅಗರ್ವಾಲ್ ಮೊದಲ ವಿಕೆಟ್‌ಗೆ ಅಜೇಯ 123 ರನ್‌ಗಳ ಜೊತೆಯಾಟ ನೆರವಿನಿಂದ 7 ರನ್‌ಗಳ ಮುನ್ನಡೆ ದೊರಕಿಸಿಕೊಟ್ಟಿದ್ದಾರೆ.

ಮಯಾಂಕ್ ಅಗರ್ವಾಲ್ 86 ಎಸೆತಗಳಲ್ಲಿ 65 ರನ್

ಮಯಾಂಕ್ ಅಗರ್ವಾಲ್ 86 ಎಸೆತಗಳಲ್ಲಿ 65 ರನ್

ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ 86 ಎಸೆತಗಳಲ್ಲಿ 9 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 65 ರನ್ ಗಳಿಸಿ ಅಜೇಯರಾಗುಳಿದರೆ, ರವಿಕುಮಾರ್ ಸಮರ್ಥ್ 74 ಎಸೆತಗಳಲ್ಲಿ 7 ಬೌಂಡರಿಗಳ ನೆರವಿನಿಂದ 54 ರನ್ ಗಳಿಸಿ, ಎರಡೇ ದಿನದಾಟಕ್ಕೆ ಬ್ಯಾಟಿಂಗ್ ಉಳಿಸಿಕೊಂಡಿದ್ದಾರೆ.

ಉತ್ತರಾಖಂಡ ವಿರುದ್ಧ ಮೊದಲ ಇನ್ನಿಂಗ್ಸ್ ಮುನ್ನಡೆ ಸಾಧಿಸಿರುವ ಕರ್ನಾಟಕ ತಂಡ, ಒಂದು ವೇಳೆ ಈ ಪಂದ್ಯ ಡ್ರಾನಲ್ಲಿ ಅಂತ್ಯವಾದರೂ, ಸೆಮಿಫೈನಲ್‌ಗೆ ಅರ್ಹತೆ ಪಡೆಯುವ ಅವಕಾಶವಿದೆ.

ಜಾರ್ಖಂಡ್ ತಂಡವನ್ನು 173 ರನ್‌ಗಳಿಗೆ ಆಲೌಟ್

ಜಾರ್ಖಂಡ್ ತಂಡವನ್ನು 173 ರನ್‌ಗಳಿಗೆ ಆಲೌಟ್

ಇನ್ನು ಇತರ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಾರ್ಖಂಡ್ ಮತ್ತು ಬಂಗಾಳ ತಂಡಗಳು ಸೆಣಸಾಡುತ್ತಿದ್ದು, ಟಾಸ್ ಗೆದ್ದು ಮೊದಲ ಬೌಲಿಂಗ್ ಆಯ್ದುಕೊಂಡ ಬಂಗಾಳ ತಂಡವು ಜಾರ್ಖಂಡ್ ತಂಡವನ್ನು 173 ರನ್‌ಗಳಿಗೆ ಆಲೌಟ್ ಮಾಡಿತು.

175 ಎಸೆತಗಳಲ್ಲಿ 10 ಬೌಂಡರಿಗಳ ನೆರವಿನಿಂದ ಅಜೇಯ 89 ರನ್ ಗಳಿಸಿದ ಕುಮಾರ್ ಸೂರಜ್ ಬಿಟ್ಟರೆ, ಜಾರ್ಖಂಡ್ ತಂಡದ ಉಳಿದ ಯಾವ ಬ್ಯಾಟ್ಸ್‌ಮನ್‌ಗಳು ಪ್ರತಿರೋಧ ತೋರಲಿಲ್ಲ. ಬಂಗಾಳ ಪರ ಬೌಲಿಂಗ್‌ನಲ್ಲಿ ಆಕಾಶ್ ದೀಪ್ ನಾಲ್ಕು ವಿಕೆಟ್ ಪಡೆದರೆ, ಮುಖೇಶ್ ಕುಮಾರ್ ಮೂರು ವಿಕೆಟ್ ಕಬಳಿಸಿ ಮಿಂಚಿದರು.

ಆಂಧ್ರಪ್ರದೇಶ ಎರಡು ವಿಕೆಟ್‌ಗಳ ನಷ್ಟಕ್ಕೆ 262 ರನ್‌

ಆಂಧ್ರಪ್ರದೇಶ ಎರಡು ವಿಕೆಟ್‌ಗಳ ನಷ್ಟಕ್ಕೆ 262 ರನ್‌

ಆಂಧ್ರಪ್ರದೇಶ ಮತ್ತು ಮಧ್ಯಪ್ರದೇಶ ತಂಡಗಳ ನಡುವಿನ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ, ರಿಕಿ ಭುಯಿ ಅವರ ಅಜೇಯ 115 ರನ್‌ ಮತ್ತು ಕರಣ್ ಶಿಂಧೆ ಅವರ ಅಜೇಯ 83 ರನ್‌ಗಳ ನೆರವಿನಿಂದ ಮೊದಲ ದಿನದಾಟದ ಅಂತ್ಯಕ್ಕೆ ಆಂಧ್ರಪ್ರದೇಶ ಎರಡು ವಿಕೆಟ್‌ಗಳ ನಷ್ಟಕ್ಕೆ 262 ರನ್‌ ಗಳಿಸಿದೆ. ಇವರಿಬ್ಬರು ಮುರಿಯದ ಮೂರನೇ ವಿಕೆಟ್‌ಗೆ 204 ರನ್‌ಗಳ ಜೊತೆಯಾಟ ನೀಡಿದ್ದಾರೆ.

ಇನ್ನು ಪಂಜಾಬ್ ಮತ್ತು ಸೌರಾಷ್ಟ್ರ ತಂಡಗಳ ನಡುವಿನ ಮತ್ತೊಂದು ಪಂದ್ಯದಲ್ಲಿ, ಸೌರಾಷ್ಟ್ರ ತಂಡವು 87 ಓವರ್‌ಗಳಲ್ಲಿ 303 ರನ್‌ಗಳಿಗೆ ಆಲೌಟ್ ಆಯಿತು. ಪಾರ್ಥ್ ಭಟ್ ಅಜೇಯ 111 ರನ್ ಮತ್ತು ಆರಂಭಿಕ ಬ್ಯಾಟರ್ ಸ್ನೆಲ್ ಪಟೇಲ್ 70 ರನ್ ಬಾರಿಸಿದರು.

ಪಂಜಾಬ್ ಪರ ಮಯಾಂಕ್ ಮಾರ್ಕಂಡೆ 29.2 ಓವರ್‌ಗಳಲ್ಲಿ 84 ರನ್ ನೀಡಿ 4 ವಿಕೆಟ್ ಪಡೆದು ಮಿಂಚಿದರೆ, ಬಲ್ತೇಜ್ ಸಿಂಗ್ ಮೂರು ವಿಕೆಟ್ ಕಬಳಿಸಿದರು. ದಿನದಾಟದಂತ್ಯಕ್ಕೆ ಬ್ಯಾಟಿಂಗ್ ಆರಂಭಿಸಿದ ಪಂಜಾಬ್ ಯಾವುದೇ ವಿಕೆಟ್ ನಷ್ಟವಿಲ್ಲದೆ 3 ರನ್ ಗಳಿಸಿದೆ.

Story first published: Tuesday, January 31, 2023, 19:35 [IST]
Other articles published on Jan 31, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X