Ranji Trophy Semifinal: ಸೌರಾಷ್ಟ್ರ ವಿರುದ್ಧ ಕರ್ನಾಟಕಕ್ಕೆ ಆರಂಭಿಕ ಆಘಾತ; ಅರ್ಧಶತಕದತ್ತ ಮಯಾಂಕ್!

2022-23ನೇ ರಣಜಿ ಟ್ರೋಫಿ ಸೆಮಿಫೈನಲ್ ಹಂತದ ಪಂದ್ಯಗಳು ಇಂದಿನಿಂದ (ಬುಧವಾರ, ಫೆಬ್ರವರಿ 8) ಆರಂಭಗೊಂಡಿದ್ದು, ನಾಲ್ಕು ತಂಡಗಳು ಈ ಋತುವಿನ ಫೈನಲ್ ಹಂತ ತಲುಪಲು ಪೈಪೋಟಿ ನಡೆಸುತ್ತಿವೆ. ಇಲ್ಲಿ ಗೆದ್ದ ಎರಡು ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ.
2022-23ನೇ ರಣಜಿ ಟ್ರೋಫಿ ಕ್ವಾರ್ಟರ್‌ಫೈನಲ್‌ನಲ್ಲಿ ಗೆಲುವು ಹಾಗೂ ಮುನ್ನಡೆಗಳ ಆಧಾರದ ಮೇಲೆ ಮಧ್ಯಪ್ರದೇಶ, ಕರ್ನಾಟಕ, ಪಶ್ಚಿಮ ಬಂಗಾಳ ಮತ್ತು ಸೌರಾಷ್ಟ್ರ ತಂಡಗಳು ಅಂತಿಮ ನಾಲ್ಕರ ಘಟ್ಟಕ್ಕೆ ಅರ್ಹತೆ ಪಡೆದಿವೆ.
ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ಮತ್ತು ಸೌರಾಷ್ಟ್ರ ತಂಡಗಳು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಣಸಾಡುತ್ತಿದ್ದು, ಟಾಸ್ ಗೆದ್ದ ಸೌರಾಷ್ಟ್ರ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಕರ್ನಾಟಕ ತಂಡ ಆರಂಭಿಕ ಆಘಾತ ಎದುರಿಸಿತು. 5.5 ಓವರ್‌ಗಳಲ್ಲಿ ತಂಡದ ಮೊತ್ತ 12 ರನ್‌ಗಳಾಗಿದ್ದಾಗ ರವಿಕುಮಾರ್ ಸಮರ್ಥ್ 3 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ನಂತರ ಬಂದ ದೇವದತ್ ಪಡಿಕ್ಕಲ್ ಕೂಡ ಹೆಚ್ಚು ಹೊತ್ತು ನಿಲ್ಲದೆ, 9 ರನ್ ಗಳಿಸಿ ಔಟಾದರು. ನಿಕಿನ್ ಜೋಸ್ 18 ರನ್ ಬಾರಿಸಿ ವಿಕೆಟ್ ನೀಡಿದರು. ಆರಂಭಿಕರಾಗಿ ಬಂದ ನಾಯಕ ಮಯಾಂಕ್ ಅಗರ್ವಾಲ್ 38 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಮನಿಶ್ ಪಾಂಡೆ ಕೂಡ 7 ರನ್ ಗಳಿಸಿ ಮಯಾಂಕ್ ಅಗರ್ವಾಲ್ ಜೊತೆ ಆಡುತ್ತಿದ್ದಾರೆ.
ಊಟದ ವಿರಾಮದ ಹೊತ್ತಿಗೆ ಕರ್ನಾಟಕ ತಂಡದ ಮೊತ್ತ 31 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 78 ರನ್ ಗಳಿಸಿದೆ.
ಕರ್ನಾಟಕ ಮತ್ತು ಸೌರಾಷ್ಟ್ರ ತಂಡಗಳ ಆಡುವ 11ರ ಬಳಗ
ಕರ್ನಾಟಕ: ದೇವದತ್ ಪಡಿಕ್ಕಲ್, ಕೃಷ್ಣಪ್ಪ ಗೌತಮ್, ವಾಸುಕಿ ಕೌಶಿಕ್, ಮನೀಷ್ ಪಾಂಡೆ, ಮಯಾಂಕ್ ಅಗರ್ವಾಲ್ (ನಾಯಕ), ನಿಕಿನ್ ಜೋಸ್, ಶ್ರೀನಿವಾಸ್ ಶರತ್ (ವಿಕೆಟ್ ಕೀಪರ್), ರವಿಕುಮಾರ್ ಸಮರ್ಥ್, ಶ್ರೇಯಸ್ ಗೋಪಾಲ್, ವಿಜಯ್ ಕುಮಾರ್ ವೈಶಾಕ್, ವಿಧ್ವತ್ ಕಾವೇರಪ್ಪ.
ಸೌರಾಷ್ಟ್ರ: ಅರ್ಪಿತ್ ವಾಸವಾಡ (ನಾಯಕ), ಚೇತನ್ ಸಕರಿಯಾ, ಚಿರಾಗ್ ಜಾನಿ, ಧರ್ಮೇಂದ್ರಸಿನ್ಹ್ ಜಡೇಜಾ, ಹಾರ್ವಿಕ್ ದೇಸಾಯಿ (ವಿಕೆಟ್ ಕೀಪರ್), ಕುಶಾಂಗ್ ಪಟೇಲ್, ಪಾರ್ಥ್ ಭುತ್, ಪ್ರೇರಕ್ ಮಂಕಡ್, ಶೆಲ್ಡನ್ ಜಾಕ್ಸನ್, ಸ್ನೆಲ್ ಪಟೇಲ್, ವಿಶ್ವರಾಜ್ ಜಡೇಜಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications