Ranji Trophy: ಕರ್ನಾಟಕದ ವಿರುದ್ದ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಜಾರ್ಖಂಡ್

ಕರ್ನಾಟಕ ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ ಟಾಸ್ ಗೆದ್ದಿರುವ ಜಾರ್ಖಂಡ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ, ಜೆಮ್‌ಶೆಡ್‌ಪುರದ ಕೀನನ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದೆ.
ರಣಜಿ ಟ್ರೋಫಿಯಲ್ಲಿ ಎಲೈಟ್ ಸಿ ಗ್ರೂಪ್‌ನಲ್ಲಿ ಅಗ್ರಸ್ಥಾನದಲ್ಲಿರುವ ಕರ್ನಾಟಕ ಈಗಾಗಲೇ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ. ಇದುವರೆಗೂ ಆಡಿರುವ 6 ಪಂದ್ಯಗಳಲ್ಲಿ 3 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, 3 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವ ಮೂಲಕ ಅಜೇಯವಾಗಿ ಉಳಿದಕೊಂಡಿದೆ.
ಪಾಯಿಂಟ್ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ಜಾರ್ಖಂಡ್ ಈ ಪಂದ್ಯವನ್ನು ಗೆಲ್ಲುವ ಯೋಜನೆಯಲ್ಲಿದೆ. ಆದರೆ, ಇಡೀ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಕರ್ನಾಟಕವನ್ನು ಸೋಲಿಸುವುದು ಜಾರ್ಖಂಡ್ ತಂಡಕ್ಕೆ ಸುಲಭವಲ್ಲ.

ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಉತ್ತಮ ಫಾರ್ಮ್‌ನಲ್ಲಿರುವುದು ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಕೇರಳ ವಿರುದ್ಧದ ಪಂದ್ಯದಲ್ಲಿ ದ್ವಿಶತಕ ಗಳಿಸಿದ್ದ ಮಯಾಂಕ್ ಅಗರ್ವಾಲ್ ಅದೇ ಫಾರ್ಮ್ ಅನ್ನು ಮುಂದುವರೆಸುವ ವಿಶ್ವಾಸದಲ್ಲಿದ್ದಾರೆ. ಮನೀಶ್ ಪಾಂಡೆ, ದೇವದತ್ ಪಡಿಕ್ಕಲ್ ಕೂಡ ತಮ್ಮ ಫಾರ್ಮ್ ಕಂಡುಕೊಂಡರೆ ಕರ್ನಾಟಕ ಈ ಪಂದ್ಯದಲ್ಲಿ ಗೆಲುವು ಸಾಧಿಸುವುದು ಸುಲಭವಾಗಲಿದೆ.
ಬಲಿಷ್ಠವಾಗಿದೆ ಕರ್ನಾಟಕ ಬೌಲಿಂಗ್
ಕರ್ನಾಟಕದ ಬೌಲರ್ ಗಳು ಉತ್ತಮ ಫಾರ್ಮ್‌ನಲ್ಲಿದ್ದಾರೆ. ವಾಸುಕಿ ಕೌಶಿಕ್, ಶ್ರೇಯಸ್ ಗೋಪಾಲ್, ವಿದ್ವತ್ ಕಾವೇರಪ್ಪ ಎದುರಾಳಿಗಳನ್ನು ಕಟ್ಟಿ ಹಾಕುವ ಸಾಮರ್ಥ್ಯ ಹೊಂದಿದ್ದಾರೆ. ಮತ್ತೊಬ್ಬ ಪ್ರಮುಖ ವೇಗಿ ವಿಜಯ್ ಕುಮಾರ್ ವೈಶಾಕ್‌ಗೆ ಈ ಪಂದ್ಯದಲ್ಲಿ ವಿಶ್ರಾಂತಿ ನೀಡಲಾಗಿದೆ. ಶ್ರೇಯಸ್ ಗೋಪಾಲ್, ಕೃಷ್ಣಪ್ಪ ಗೌತಮ್ ತಂಡದ ಪ್ರಮುಖ ಆಲ್‌ರೌಂಡರ್ ಗಳಾಗಿದ್ದಾರೆ.

ಈ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಕ್ವಾರ್ಟರ್ ಫೈನಲ್ ಪಂದ್ಯಕ್ಕೆ ಆತ್ಮವಿಶ್ವಾಸದಿಂದ ಸಜ್ಜಾಗುವ ಉತ್ಸಾಹದಲ್ಲಿದೆ ಮಯಾಂಕ್ ಅಗರ್ವಾಲ್ ಬಳಗ.
ಉಭಯ ತಂಡಗಳ ಆಡುವ ಬಳಗ
ಕರ್ನಾಟಕ: ರವಿಕುಮಾರ್ ಸಮರ್ಥ್, ಮಯಾಂಕ್ ಅಗರ್ವಾಲ್(ನಾಯಕ), ದೇವದತ್ ಪಡಿಕ್ಕಲ್, ಮನೀಶ್ ಪಾಂಡೆ, ನಿಕಿನ್ ಜೋಸ್, ಶರತ್ ಬಿಆರ್(ವಿಕೆಟ್ ಕೀಪರ್), ಶುಭಾಂಗ್ ಹೆಗ್ಡೆ, ಕೃಷ್ಣಪ್ಪ ಗೌತಮ್, ವಾಸುಕಿ ಕೌಶಿಕ್, ಶ್ರೇಯಸ್ ಗೋಪಾಲ್, ವಿಧ್ವತ್ ಕಾವೇರಪ್ಪ
ಜಾರ್ಖಂಡ್: ಕುಮಾರ್ ದಿಯೋಬ್ರತ್, ಆರ್ಯಮನ್ ಸೇನ್, ಕುಮಾರ್ ಸೂರಜ್, ವಿರಾಟ್ ಸಿಂಗ್ (ನಾಯಕ), ಸೌರಭ್ ತಿವಾರಿ, ಕುಮಾರ್ ಕುಶಾಗ್ರಾ (ವಿಕೆಟ್ ಕೀಪರ್), ಅನುಕುಲ್ ರಾಯ್, ಶಹಬಾಜ್ ನದೀಮ್, ಸುಪ್ರಿಯೋ ಚಕ್ರವರ್ತಿ, ವಿನಾಯಕ್ ವಿಕ್ರಮ್, ಆಶಿಶ್ ಕುಮಾರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications