Ranji Trophy: ಭರ್ಜರಿ ಶತಕ ಬಾರಿಸಿ ಫಾರ್ಮ್‌ಗೆ ಮರಳಿದ ಮಯಾಂಕ್; ಗುಜರಾತ್ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2024ರ ರಣಜಿ ಟ್ರೋಫಿಯ ತನ್ನ ಎರಡನೇ ಪಂದ್ಯದಲ್ಲಿ ಕರ್ನಾಟಕ ತಂಡವು ಗುಜರಾತ್ ವಿರುದ್ಧ ಸೆಣಸಾಡುತ್ತಿದೆ.
ಶುಕ್ರವಾರದಂದು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆತಿಥೇಯ ಗುಜರಾತ್ ತಂಡವನ್ನು 264 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಕರ್ನಾಟಕ ಬೌಲರ್‌ಗಳು ಯಶಸ್ವಿಯಾಗಿದ್ದರು. ಗುಜರಾತ್ ಪರ ಕ್ಷಿತಿಜ್ ಪಟೇಲ್ 95 ರನ್‌ಗಳ ಕೊಡುಗಡೆ ನೀಡಿದ್ದರು.
ಬೌಲಿಂಗ್‌ನಲ್ಲಿ ಕರ್ನಾಟಕ ತಂಡದ ವಾಸುಕಿ ಕೌಶಿಕ್ 4 ವಿಕೆಟ್ ಕಬಳಿಸಿದರೆ, ಪ್ರಸಿದ್ಧ್ ಕೃಷ್ಣ, ವಿಜಯ್‌ಕುಮಾರ್ ವೈಶಾಕ್ ಮತ್ತು ರೋಹಿತ್ ಕುಮಾರ್ ತಲಾ ಎರಡು ವಿಕೆಟ್ ಪಡೆದು ಮಿಂಚಿದರು.

ಪ್ರತ್ಯುತ್ತರವಾಗಿ, ಶನಿವಾರ ಕರ್ನಾಟಕ ತನ್ನ ಮೊದಲ ಇನಿಂಗ್ಸ್ ಆರಂಭಿಸಿ ಭರ್ಜರಿ ಮೇಲುಗೈ ಸಾಧಿಸಿದೆ. ಎರಡನೇ ದಿನದಾಟದ ಮುಕ್ತಾಯದ ನಂತರ, ಕರ್ನಾಟಕ ತಂಡ 90 ಓವರ್‌ಗಳಲ್ಲಿ 5 ವಿಕೆಟ್‌ಗೆ 328 ರನ್ ಗಳಿಸಿ 64 ರನ್‌ಗಳ ಮುನ್ನಡೆ ಕಾಯ್ದುಕೊಂಡಿದೆ.
ಇನ್ನು ಕರ್ನಾಟಕ ಪರ ನಾಯಕ ಮಯಾಂಕ್ ಅಗರ್ವಾಲ್ ಅಮೋಘ ಶತಕ ಬಾರಿಸಿ ಫಾರ್ಮ್‌ಗೆ ಮರಳಿದ್ದಾರೆ. ಪ್ರಸಕ್ತ ರಣಜಿ ಆವೃತ್ತಿಯ ಎರಡನೇ ಪಂದ್ಯದಲ್ಲಿ ತಮ್ಮ ಮೊದಲ ಶತಕ ದಾಖಲಿಸಿದ್ದಾರೆ.
ವೈಯಕ್ತಿಕವಾಗಿ ಮಯಾಂಕ್ ಅಗರ್ವಾಲ್ ಶತಕ ಗಳಿಸಿದ್ದಲ್ಲದೆ, ಸಹ ಆರಂಭಿಕ ರವಿಕುಮಾರ್ ಸಮರ್ಥ್ ಜೊತೆಗೂಡಿ ಮೊದಲ ವಿಕೆಟ್‌ಗೆ 231 ಎಸೆತಗಳಲ್ಲಿ 172 ರನ್‌ಗಳ ಜೊತೆಯಾಟ ನೀಡಿ ಉತ್ತಮ ಆರಂಭ ಒದಗಿಸಿದರು. ಆರ್ ಸಮರ್ಥ್ ಕೂಡ 60 ರನ್‌ಗಳ ಅರ್ಧಶತಕದ ಇನ್ನಿಂಗ್ಸ್ ಆಡಿದರು.

ನಾಯಕ ಮಯಾಂಕ್ ಅಗರ್ವಾಲ್ 124 ಎಸೆತಗಳನ್ನು ಎದುರಿಸಿ 17 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 109 ರನ್ ಬಾರಿಸಿದರು. ಅಂತಿಮವಾಗಿ ಚಿಂತನ್ ಗಜ ಬೌಲಿಂಗ್‌ನಲ್ಲಿ ಮಯಾಂಕ್ ವಿಕೆಟ್ ಒಪ್ಪಿಸಿ ಪೆವಿಲಿಯನ್ ದಾರಿ ಹಿಡಿದರು.
ಉಳಿದಂತೆ ದೇವದತ್ ಪಡಿಕ್ಕಲ್ 42 ರನ್, ನಿಕಿನ್ ಜೋಸ್ 22 ರನ್, ಶುಭಾಂಗ್ ಹೆಗ್ಡೆ 11 ರನ್ ಗಳಿಸಿ ಔಟಾದರೆ, ಮನೀಶ್ ಪಾಂಡೆ ಅಜೇಯ 56 ರನ್ ಮತ್ತು ಸುಜಯ್ ಸತೇರಿ ಅಜೇಯ 24 ರನ್ ಗಳಿಸಿ ಮೂರನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಮೊದಲ ಪಂದ್ಯದಲ್ಲಿ ಶೂನ್ಯ, ಎರಡನೇ ಪಂದ್ಯದಲ್ಲಿ ಶತಕ
2024ರ ರಣಜಿ ಟ್ರೋಫಿಯಲ್ಲಿ ಮಯಾಂಕ್ ಅಗರ್ವಾಲ್ ಕರ್ನಾಟಕ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈ ಆವೃತ್ತಿಯಲ್ಲಿ ಎರಡನೇ ಪಂದ್ಯವನ್ನಾಡುತ್ತಿರುವ ಮಯಾಂಕ್, ಪಂಜಾಬ್ ವಿರುದ್ಧ ಆಡಿದ ಮೊದಲ ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಆಡಿದ ಎರಡೂ ಇನ್ನಿಂಗ್ಸ್‌ಗಳಲ್ಲಿ ಮಯಾಂಕ್ಗೆ ಖಾತೆ ತೆರೆಯಲು ಸಾಧ್ಯವಾಗಿರಲಿಲ್ಲ. ಅದಾಗ್ಯೂ, ಕರ್ನಾಟಕ ತಂಡ ಆ ಪಂದ್ಯವನ್ನು 7 ವಿಕೆಟ್‌ಗಳಿಂದ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.
2 ವರ್ಷಗಳಿಂದ ಟೀಮ್ ಇಂಡಿಯಾದಿಂದ ದೂರ
ಭಾರತ ಟೆಸ್ಟ್ ತಂಡದ ಖಾಯಂ ಸದಸ್ಯನಾಗಿದ್ದ ಮಯಾಂಕ್ ಅಗರ್ವಾಲ್ ಬ್ಯಾಟಿಂಗ್ ಫಾರ್ಮ್ ಕಳೆದುಕೊಂಡು ಸುಮಾರು 2 ವರ್ಷಗಳಿಂದ ಹೊರಗುಳಿದಿದ್ದಾರೆ. 2022ರ ಮಾರ್ಚ್‌ನಲ್ಲಿ ಶ್ರೀಲಂಕಾ ವಿರುದ್ಧ ಕೊನೆಯ ಟೆಸ್ಟ್ ಪಂದ್ಯ ಆಡಿದ್ದ ಮಯಾಂಕ್ ಅಗರ್ವಾಲ್ ಆ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ 26 ರನ್ ಗಳಿಸಿದ್ದರು.
ಅಂದಿನಿಂದ ಮಯಾಂಕ್ ಅಗರ್ವಾಲ್ಗೆ ಭಾರತ ತಂಡದಲ್ಲಿ ಮತ್ತೊಂದು ಅವಕಾಶ ಸಿಕ್ಕಿಲ್ಲ. ಕಳೆದ ವರ್ಷ ನಡೆದ ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ಪರವಾಗಿ ಆಡಿದ 9 ಪಂದ್ಯಗಳಲ್ಲಿ 93ರ ಸ್ಟ್ರೈಕ್ ರೇಟ್‌ನಲ್ಲಿ 328 ರನ್ ಕಲೆಹಾಕಿದ್ದರು. ಇದರಲ್ಲಿ ಒಂದು ಶತಕ ಮತ್ತು ಒಂದು ಅರ್ಧ ಶತಕ ಕೂಡ ಒಳಗೊಂಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications