Ranji Trophy: ನಾಯಕ ಮಯಾಂಕ್ ಅಗರ್ವಾಲ್ ಭರ್ಜರಿ ಶತಕ : ಉತ್ತಮ ಸ್ಥಿತಿಯಲ್ಲಿ ಕರ್ನಾಟಕ

ರಣಜಿ ಟ್ರೋಫಿ ಟೂರ್ನಿಯ ಕರ್ನಾಟಕ ಸೌರಾಷ್ಟ್ರ ನಡುವಿನ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ಮೊದಲನೇ ದಿನ 5 ವಿಕೆಟ್ ಕಳೆದುಕೊಂಡು 229 ರನ್ ಕಲೆಹಾಕುವ ಮೂಲಕ ಉತ್ತಮ ಸ್ಥಿತಿಯಲ್ಲಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಸೌರಾಷ್ಟ್ರ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಆರಂಭಿಸಿದ ಕರ್ನಾಟಕ ತಂಡಕ್ಕೆ ಆರಂಭದಲ್ಲೇ ಆಘಾತ ನೀಡಿದ್ದು ಸೌರಾಷ್ಟ್ರ ಬೌಲರ್ ಕುಶಾಂಗ್ ಪಟೇಲ್.
ಕರ್ನಾಟಕ ಆರಂಭಿಕ ಆಟಗಾರ ರವಿಕುಮಾರ್ ಸಮರ್ಥ್ 3 ರನ್ ಗಳಿಸಿದ್ದಾಗ ಕುಶಾಂಗ್ ಪಟೇಲ್ ಅವರ ವಿಕೆಟ್ ಪಡೆದು ಸೌರಾಷ್ಟ್ರ ತಂಡಕ್ಕೆ ಉತ್ತಮ ಆರಂಭ ನೀಡಿದರು.
ನಂತರ ಬಂದ ದೇವದತ್ ಪಡಿಕ್ಕಲ್ ಕೂಡ 9 ರನ್ ಗಳಿಸುವಷ್ಟರಲ್ಲಿ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ನಿಕಿನ್ ಜೋಸ್ ಕೂಡ 18 ರನ್ ಗಳಿಸಿ ನಾಯಕ ಮಯಾಂಕ್ ಅಗರ್ವಾಲ್ ಜೊತೆ ಅಮೂಲ್ಯ ಜೊತೆಯಾಟ ಆಡಿದರು. ಈ ಜೋಡಿ 3ನೇ ವಿಕೆಟ್‌ಗೆ 47 ರನ್‌ಗಳನ್ನು ಕಲೆಹಾಕಿತು.
ಅನುಭವಿ ಬ್ಯಾಟರ್ ಮನೀಶ್ ಪಾಂಡೆ 7 ರನ್ ಗಳಿಸಿದ್ದಾಗ ತಮ್ಮ ವಿಕೆಟ್ ಕೈಚೆಲ್ಲಿದರು. ಕಳೆದ ಪಂದ್ಯದಲ್ಲಿ ಶತಕ ಗಳಿಸಿ ಮಿಂಚಿದ್ದ ಶ್ರೇಯಸ್ ಗೋಪಾಲ್ ಕೂಡ 15 ರನ್ ಗಳಿಸಿ ಔಟಾದರು.

ಮಯಾಂಕ್ ನಾಯಕನ ಆಟ
112 ರನ್ ಗಳಿಸುವುಷ್ಟರಲ್ಲಿ ಪ್ರಮುಖ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ಆಸರೆಯಾಗಿದ್ದು ನಾಯಕ ಮಯಾಂಕ್ ಅಗರ್ವಾಲ್. ರಣಜಿ ಟ್ರೋಫಿಯಲ್ಲಿ ಉತ್ತಮ ಫಾರ್ಮ್‌ನಲ್ಲಿರುವ ಅವರು ಸೆಮಿಫೈನಲ್ ಪಂದ್ಯದಲ್ಲಿ ತಾಳ್ಮೆಯ ಆಟವಾಡಿದರು.
ಇಡೀ ದಿನ ಆಟವಾಡಿದ ಮಯಾಂಕ್ ಅಗರ್ವಾಲ್ ಶತಕ ಗಳಿಸಿ ತಂಡಕ್ಕೆ ಆಸರೆಯಾದರು. ಒಂದು ಕಡೆ ವಿಕೆಟ್ ಬೀಳುತ್ತಿದ್ದರೆ ಅಗರ್ವಾಲ್ ಮಾತ್ರ ಕ್ರೀಸ್‌ಗೆ ಕಚ್ಚಿ ನಿಂತು ರನ್ ಗಳಿಸಿದರು.
246 ಎಸೆತಗಳನ್ನು ಎದುರಿಸಿ ಮಯಾಂಕ್ ಅಗರ್ವಾಲ್ 11 ಬೌಂಡರಿ ಮತ್ತು 1 ಸಿಕ್ಸರ್ ಸಹಿತ ಅಜೇಯ 110 ರನ್ ಗಳಿಸುವ ಮೂಲಕ ಎರಡನೇ ದಿನಕ್ಕೆ ವಿಕೆಟ್ ಕಾಯ್ದುಕೊಂಡಿದ್ದಾರೆ.

ನಾಯಕನಿಗೆ ಜೊತೆಯಾದ ಶರತ್
ಇನ್ನು 5ನೇ ವಿಕೆಟ್ ಪತನದ ನಂತರ ಕ್ರೀಸ್‌ಗೆ ಬಂದ ವಿಕೆಟ್ ಕೀಪರ್ ಬ್ಯಾಟರ್ ಶ್ರೀನಿವಾಸ್ ಶರತ್ ಅಮೋಘ ಆಟವಾಡಿದರು. ನಾಯಕ ಮಯಾಂಕ್‌ಗೆ ಅತ್ಯುತ್ತಮ ಸಾಥ್ ನೀಡಿದರು. ಈ ಜೋಡಿ ಅಜೇಯ 117 ರನ್ ಕಲೆಹಾಕುವ ಮೂಲಕ ತಂಡಕ್ಕೆ ಚೇತರಿಕೆ ನೀಡಿದರು.
143 ಎಸೆತಗಳನ್ನು ಎದುರಿಸಿದ ಶ್ರೀನಿವಾಸ್ ಶರತ್ 4 ಬೌಂಡರಿ ಸಹಿತ ಅಜೇಯ 58 ರನ್ ಗಳಿಸುವ ಮೂಲಕ ಅರ್ಧಶತಕವನ್ನು ಪೂರೈಸಿದರು.
ಮೊದಲನೇ ದಿನದಾಟದ ಅಂತ್ಯಕ್ಕೆ ಕರ್ನಾಟಕ 5 ವಿಕೆಟ್ ಕಳೆದುಕೊಂಡು 229 ರನ್ ಕಲೆ ಹಾಕಿದೆ. ಎರಡನೇ ದಿನ ಈ ಜೋಡಿ ಮತ್ತಷ್ಟು ರನ್ ಕಲೆಹಾಕುವ ವಿಶ್ವಾಸದಲ್ಲಿದ್ದಾರೆ. ಇವರಿಬ್ಬರು ಮತ್ತಷ್ಟು ರನ್ ಗಳಿಸಿದರೆ ಕರ್ನಾಟಕ ಉತ್ತಮ ಮೊತ್ತ ಕಲೆಹಾಕುವುದರಲ್ಲಿ ಸಂಶಯವಿಲ್ಲ.

ಕರ್ನಾಟಕ, ಸೌರಾಷ್ಟ್ರ ಪ್ಲೇಯಿಂಗ್ XI
ಕರ್ನಾಟಕ: ದೇವದತ್ ಪಡಿಕ್ಕಲ್, ಕೃಷ್ಣಪ್ಪ ಗೌತಮ್, ವಾಸುಕಿ ಕೌಶಿಕ್, ಮನೀಶ್ ಪಾಂಡೆ, ಮಯಾಂಕ್ ಅಗರ್ವಾಲ್ (ನಾಯಕ), ನಿಕಿನ್ ಜೋಸ್, ಶ್ರೀನಿವಾಸ್ ಶರತ್ (ವಿಕೆಟ್ ಕೀಪರ್), ರವಿಕುಮಾರ್ ಸಮರ್ಥ್, ಶ್ರೇಯಸ್ ಗೋಪಾಲ್, ವಿಜಯ್ ಕುಮಾರ್ ವೈಶಾಕ್, ವಿದ್ವತ್ ಕಾವೇರಪ್ಪ.
ಸೌರಾಷ್ಟ್ರ: ಅರ್ಪಿತ್ ವಾಸವಾಡ (ನಾಯಕ), ಚೇತನ್ ಸಕರಿಯಾ, ಚಿರಾಗ್ ಜಾನಿ, ಧರ್ಮೇಂದ್ರಸಿನ್ಹ್ ಜಡೇಜಾ, ಹಾರ್ವಿಕ್ ದೇಸಾಯಿ (ವಿಕೆಟ್ ಕೀಪರ್), ಕುಶಾಂಗ್ ಪಟೇಲ್, ಪಾರ್ಥ್ ಭುತ್, ಪ್ರೇರಕ್ ಮಂಕಡ್, ಶೆಲ್ಡನ್ ಜಾಕ್ಸನ್, ಸ್ನೆಲ್ ಪಟೇಲ್, ವಿಶ್ವರಾಜ್ ಜಡೇಜಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications