Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ravindra Jadeja: ಬಿಸಿಸಿಐ ನಿರ್ಧಾರಕ್ಕೆ ತಲೆ ಬಾಗಿದ ರವೀಂದ್ರ ಜಡೇಜಾ

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರ್ಧಾರಕ್ಕೆ ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ರವೀಂದ್ರ ಜಡೇಜಾ ತಲೆ ಬಾಗಿದ್ದಾರೆ. ಬಿಸಿಸಿಐ ನಿಯಮದ ಪ್ರಕಾರ ಜಡೇಜಾ ದೇಶೀಯ ಕ್ರಿಕೆಟ್ ಆಡಲು ನಿರ್ಧರಿಸಿದ್ದಾರೆ. ರಣಜಿ ಟ್ರೋಫಿಯಲ್ಲಿ ದೆಹಲಿ ವಿರುದ್ಧ ಸೌರಾಷ್ಟ್ರ ಪರ ರವೀಂದ್ರ ಜಡೇಜಾ ಪಂದ್ಯ ಆಡಲಿದ್ದಾರೆ. ರವೀಂದ್ರ ಜಡೇಜಾ ರಾಜ್‌ಕೋಟ್‌ನಲ್ಲಿ ತಂಡದ ಅಭ್ಯಾಸದಲ್ಲಿ ಭಾಗವಹಿಸಿದ್ದಾರೆ.

ವರದಿಗಳ ಪ್ರಕಾರ, ರವಿಂದ್ರ ಜಡೇಜಾ ಅವರು ಭಾನುವಾರ ಬೆಳಿಗ್ಗೆ ಸೌರಾಷ್ಟ್ರದ ನೆಟ್ ಅಭ್ಯಾಸವನ್ನು ಸೇರಿಕೊಂಡಿದ್ದಾರೆ. ಎಡಗೈ ವೇಗದ ಬೌಲರ್ ಜಯದೇವ್ ಉನದ್ಕತ್ ನಾಯಕತ್ವದ ತಂಡದೊಂದಿಗೆ ಅವರು ತರಬೇತಿ ಪಡೆಯುತ್ತಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಹಾಗೂ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡಕ್ಕೆ ರವೀಂದ್ರ ಜಡೇಜಾ ಆಯ್ಕೆಯಾಗಿದ್ದಾರೆ.

Ranji Trophy Ravindra Jadeja will play for Saurashtra against Delhi

ರವೀಂದ್ರ ಜಡೇಜಾ ಕೊನೆಯ ಬಾರಿಗೆ 2023 ರ ಜನವರಿಯಲ್ಲಿ ತಮಿಳುನಾಡು ವಿರುದ್ಧ ರಣಜಿ ಟ್ರೋಫಿಯಲ್ಲಿ ಸೌರಾಷ್ಟ್ರ ಪರ ಆಡಿದ್ದರು. ಮೊಣಕಾಲಿನ ಗಾಯದಿಂದ ಚೇತರಿಸಿಕೊಂಡ ನಂತರ ಇದು ಅವರ ಮೊದಲ ಪಂದ್ಯವಾಗಿತ್ತು. ಈ ಟೂರ್ನಿಯಲ್ಲಿ ಅವರು 8 ವಿಕೆಟ್‌ಗಳನ್ನು ಪಡೆದಿದ್ದರು. ಇತ್ತೀಚೆಗೆ, ಅವರು ಆಸ್ಟ್ರೇಲಿಯಾ ವಿರುದ್ದ ಐದು ಪಂದ್ಯಗಳ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಭಾರತ ಪರ ಅವರು ಮೂರು ಪಂದ್ಯಗಳನ್ನು ಆಡಿದ್ದರು. ಈ ಸರಣಿಯನ್ನು 1-3 ಅಂತರದಲ್ಲಿ ಭಾರತ ಸೋತಿತ್ತು.

ಆಸ್ಟ್ರೇಲಿಯಾ ವಿರುದ್ದ ಟೆಸ್ಟ್ ಸರಣಿ ಸೋಲಿನ ಬಳಿಕ ಬಿಸಿಸಿಐ ಹೊಸ 10 ನಿಯಮಗಳನ್ನು ಮಾಡಿತ್ತು. ಇದರಲ್ಲಿ ದೇಶೀಯ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ಆಟಗಾರರು ಆಡುವುದನ್ನು ಕಡ್ಡಾಯಗೊಳಿಸಲಾಯಿತು. ಈ ನಿಯಮವನ್ನು ಅನುಸರಿಸಲು ವಿಫಲವಾದರೆ ಅಂತಾರಾಷ್ಟ್ರೀಯ ಆಯ್ಕೆ ಮತ್ತು ಕೇಂದ್ರ ಒಪ್ಪಂದಗಳ ಮೇಲೆ ಪರಿಣಾಮ ಬೀರಬಹುದು ಎಂದು ಎಚ್ಚರಿಸಿತ್ತು. ಸೌರಾಷ್ಟ್ರ ಪ್ರಸ್ತುತ 11 ಅಂಕಗಳೊಂದಿಗೆ ಎಲೈಟ್ ಗ್ರೂಪ್ ಡಿ ಪಾಯಿಂಟ್ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಅವರ ಮುಂದಿನ ಪಂದ್ಯ ಜನವರಿ 23 ರಂದು ನಿರಂಜನ್ ಶಾ ಕ್ರೀಡಾಂಗಣದಲ್ಲಿ ದೆಹಲಿ ವಿರುದ್ಧ ನಡೆಯಲಿದೆ. ದೆಹಲಿ 14 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ರವೀಂದ್ರ ಜಡೇಜಾ ಹೊರತುಪಡಿಸಿ, ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ತಂಡದಲ್ಲಿ ಆಯ್ಕೆಯಾಗದ ಹಲವಾರು ಟೀಮ್ ಇಂಡಿಯಾ ಆಟಗಾರರು ರಣಜಿ ಟ್ರೋಫಿಯ ಎರಡನೇ ಹಂತದಲ್ಲಿ ತಮ್ಮ ತಂಡಗಳಿಗಾಗಿ ಆಡಲಿದ್ದಾರೆ. ರಿಷಬ್ ಪಂತ್ ದೆಹಲಿ ಪರ ರಾಜ್ ಕೋಟ್ ನಲ್ಲಿ ಆಡಲಿದ್ದಾರೆ. ಭಾರತದ ಟೆಸ್ಟ್ ಮತ್ತು ಏಕದಿನ ನಾಯಕ ರೋಹಿತ್ ಶರ್ಮಾ ಮತ್ತು ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರು ಮುಂಬೈ ಪರ ಜಮ್ಮು ಮತ್ತು ಕಾಶ್ಮೀರ ವಿರುದ್ಧ ಎಂಸಿಎ ಗ್ರೌಂಡ್ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಆಡಲಿದ್ದಾರೆ.

ಭಾರತ ಏಕದಿನ ತಂಡದ ಉಪನಾಯಕ ಶುಭಮನ್ ಗಿಲ್ ಕರ್ನಾಟಕ ವಿರುದ್ಧ ಪಂದ್ಯದಲ್ಲಿ ಪಂಜಾಬ್ ಪರ ಆಡಬಹುದು. ಕರ್ನಾಟಕದ ಪರ ಆಡುತ್ತಿರುವ ಕೆಎಲ್ ರಾಹುಲ್ ಗಾಯದ ಸಮಸ್ಯೆಯಿಂದ ಈ ಪಂದ್ಯದಲ್ಲಿ ಆಡುವಂತಿಲ್ಲ. ವಿರಾಟ್ ಕೊಹ್ಲಿ ಕುತ್ತಿಗೆ ಗಾಯದ ಕಾರಣ ದೆಹಲಿಯ ಉಳಿದ ರಣಜಿ ಟ್ರೋಫಿ ಪಂದ್ಯಗಳಲ್ಲಿ ಭಾಗವಹಿಸುವುದು ಅನುಮಾನವಾಗಿದೆ.

Story first published: Sunday, January 19, 2025, 16:15 [IST]
Other articles published on Jan 19, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+