ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Ranji Trophy: ತಮಿಳುನಾಡು ವಿರುದ್ಧ ಪಂದ್ಯದಲ್ಲಿ 7 ವಿಕೆಟ್ ಪಡೆದು ಮಿಂಚಿದ ರವೀಂದ್ರ ಜಡೇಜಾ

Ranji Trophy : Seven Wicket Haul For Ravindra Jadeja Against Tamil Nadu

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ತಮಿಳುನಾಡು ವಿರುದ್ಧದ ರಣಜಿ ಪಂದ್ಯದಲ್ಲಿ ರವೀಂದ್ರ ಜಡೇಜಾ 7 ವಿಕೆಟ್ ಪಡೆದು ಮಿಂಚಿದ್ದಾರೆ. ಸೌರಾಷ್ಟ್ರ ಪರವಾಗಿ ಆಡುತ್ತಿರುವ ಅವರು, ನಾಯಕತ್ವವನ್ನು ಕೂಡ ವಹಿಸಿಕೊಂಡಿದ್ದರು.

ಮೊದಲನೇ ಇನ್ನಿಂಗ್ಸ್‌ನಲ್ಲಿ ಕೇವಲ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದ ರವೀಂದ್ರ ಜಡೇಜಾ ಎರಡನೇ ಇನ್ನಿಂಗ್ಸ್‌ನಲ್ಲಿ ಮೋಡಿ ಮಾಡಿದರು. 17.1 ಓವರ್ ಬೌಲಿಂಗ್ ಮಾಡಿದ ಸ್ಟಾರ್ ಆಲ್‌ರೌಂಡರ್ 53 ರನ್ ನೀಡಿ 7 ವಿಕೆಟ್ ಕಬಳಿಸಿದರು.

Ranji Trophy: ಜಾರ್ಖಂಡ್ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ಕರ್ನಾಟಕRanji Trophy: ಜಾರ್ಖಂಡ್ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ಕರ್ನಾಟಕ

ರವೀಂದ್ರ ಜಡೇಜಾ ಮಾರಕ ಬೌಲಿಂಗ್ ದಾಳಿಗೆ ಸಿಲುಕಿದ ತಮಿಳುನಾಡು ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 133 ರನ್‌ಗಳಿಗೆ ಆಲೌಟ್ ಆಯಿತು. ರವೀಂದ್ರ ಜಡೇಜಾರನ್ನು ಹೊರತುಪಡಿಸಿ ಧರ್ಮೇಂದ್ರ ಜಡೇಜಾ ಉಳಿದ 3 ವಿಕೆಟ್ ಪಡೆದು ಮಿಂಚಿದರು.

ಜಡೇಜಾ ಅದ್ಭುತ ಪ್ರದರ್ಶನದ ಹೊರತಾಗಿ ಸೌರಾಷ್ಟ್ರ ಗೆಲ್ಲಲು ಕಠಿಣ ಸವಾಲನ್ನು ಮೆಟ್ಟಿನಿಲ್ಲಬೇಕಿದೆ. ತಮಿಳುನಾಡು 133 ರನ್‌ಗಳಿಗೆ ಆಲೌಟ್ ಆದರು, ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಿದ್ದರಿಂದ ಒಟ್ಟು 265 ರನ್‌ಗಳ ಮುನ್ನಡೆ ಪಡೆದುಕೊಂಡಿತು, ಎರಡನೇ ಇನ್ನಿಂಗ್ಸ್ ಆರಂಭಿಸಿದ ಸೌರಾಷ್ಟ್ರ 3ನೇ ದಿನದಾಟದ ಅಂತ್ಯಕ್ಕೆ 4 ರನ್ ಗಳಿಸುವಷ್ಟರಲ್ಲಿ 1 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

Ranji Trophy : Seven Wicket Haul For Ravindra Jadeja Against Tamil Nadu

ಫಿಟ್ ಆಗಿರುವ ಸೂಚನೆ ನೀಡಿದ ರವೀಂದ್ರ ಜಡೇಜಾ

ಫೆಬ್ರವರಿ 9ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಘೋಷಿಸಲಾದ ಭಾರತ ತಂಡದಲ್ಲಿ ರವೀಂದ್ರ ಜಡೇಜಾ ಸ್ಥಾನ ಪಡೆದುಕೊಂಡಿದ್ದಾರೆ. 2022ರ ಏಷ್ಯಾಕಪ್‌ ಸಂದರ್ಭದಲ್ಲಿ ಗಾಯಗೊಂಡಿದ್ದ ಅವರು ಕ್ರಿಕೆಟ್‌ನಿಂದ ದೂರವುಳಿದಿದ್ದರು.

ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಆಡಬೇಕೆಂದರೆ ಫಿಟ್‌ನೆಸ್ ಸಾಬೀತುಪಡಿಸುವಂತೆ ಬಿಸಿಸಿಐ ಕೇಳಿಕೊಂಡಿತ್ತು. ಅದರಂತೆ ರಣಜಿ ಟ್ರೋಫಿಯ ಪಂದ್ಯದಲ್ಲಿ ಆಡುವ ಮೂಲಕ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದ್ದಾರೆ.

ತಮಿಳುನಾಡು ವಿರುದ್ಧದ ರಣಜಿ ಪಂದ್ಯದಲ್ಲಿ ಸೌರಾಷ್ಟ್ರ ತಂಡವನ್ನು ಮುನ್ನಡೆಸುತ್ತಿರುವ ರವೀಂದ್ರ ಜಡೇಜಾ ಒಟ್ಟು 8 ವಿಕೆಟ್ ಪಡೆದುಕೊಂಡಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ 1 ವಿಕೆಟ್ ಪಡೆದಿದ್ದ ಅವರು, ಎರಡನೇ ಇನ್ನಿಂಗ್ಸ್‌ನಲ್ಲಿ 7 ವಿಕೆಟ್ ಪಡೆದರು.

ತಮಿಳುನಾಡು ಮೊದಲ ಇನ್ನಿಂಗ್ಸ್‌ನಲ್ಲಿ 324 ರನ್‌ಗಳಿಗೆ ಆಲೌಟ್ ಆಗಿದ್ದರೆ, ಸೌರಾಷ್ಟ್ರ ಮೊದಲ ಇನ್ನಿಂಗ್ಸ್‌ನಲ್ಲಿ 192 ರನ್‌ ಗಳಿಸುವಷ್ಟರಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡಿತ್ತು, ರವೀಂದ್ರ ಜಡೇಜಾ 15 ರನ್ ಗಳಿಸಿದ್ದರು.

ಎರಡನೇ ಇನ್ನಿಂಗ್ಸ್‌ನಲ್ಲಿ ತಮಿಳುನಾಡು 133 ರನ್‌ಗಳಿಗೆ ಆಲೌಟ್ ಆಗುವ ಮೂಲಕ 265 ರನ್‌ಗಳ ಮುನ್ನಡೆ ಪಡೆದುಕೊಂಡಿದೆ. ಇನ್ನೂ ಒಂದು ದಿನದ ಆಟ ಬಾಕಿ ಇದ್ದು, ಪಿಚ್‌ ಬೌಲಿಂಗ್‌ಗೆ ಹೆಚ್ಚಿನ ನೆರವು ನೀಡುತ್ತಿದೆ. ಸೌರಾಷ್ಟ್ರ ಈ ಪಂದ್ಯದವನ್ನು ಡ್ರಾ ಮಾಡಿಕೊಳ್ಳಲು ಇಡೀ ದಿನ ಬ್ಯಾಟಿಂಗ್ ಮಾಡಬೇಕಿದೆ. ಬೌಲಿಂಗ್‌ನಲ್ಲಿ ಮಿಂಚಿದ ಜಡೇಜಾ ಬ್ಯಾಟಿಂಗ್‌ನಲ್ಲಿ ಮಿಂಚಿದರೆ ಸೌರಾಷ್ಟ್ರವನ್ನು ಸೋಲಿನಿಂದ ತಪ್ಪಿಸಬಹುದಾಗಿದೆ.

Story first published: Thursday, January 26, 2023, 18:36 [IST]
Other articles published on Jan 26, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X