For Quick Alerts
ALLOW NOTIFICATIONS  
For Daily Alerts
 

Virat Kohli: ಫಾರ್ಮ್ ಕಂಡುಕೊಳ್ಳಲು ವಿರಾಟ್ ಮಾಸ್ಟರ್ ಪ್ಲಾನ್

ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಫಾರ್ಮ್ ಸಮಸ್ಯೆ ಎದುರಿಸುತ್ತಿದ್ದಾರೆ. ಅವರು ತಮ್ಮ ಲಯ ಕಂಡುಕೊಳ್ಳಲು ಪರದಾಟ ನಡೆಸುತ್ತಿದ್ದಾರೆ. ಇದೀಗ ಅವರು ಫಾರ್ಮ್ ಕಂಡುಕೊಳ್ಳಲು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ವಿರಾಟ್ ಕೊಹ್ಲಿ ಅವರು ರಣಜಿ ಟ್ರೋಫಿಯಲ್ಲಿ ಆಡಲು ಸಜ್ಜಾಗಿದ್ದಾರೆ. ಸುಮಾರು 12 ವರ್ಷಗಳ ನಂತರ ವಿರಾಟ್ ಕೊಹ್ಲಿ ತಮ್ಮ ತವರು ತಂಡ ದೆಹಲಿ ಪರ ಆಡಲಿದ್ದಾರೆ. ಜನವರಿ 30 ರಂದು ನಡೆಯಲಿರುವ ರೈಲ್ವೇಸ್ ವಿರುದ್ಧದ ಪಂದ್ಯದಲ್ಲಿ ದೆಹಲಿ ತಂಡದ ಪರ ಕಣಕ್ಕಿಳಿದ್ದಾರೆ.

ಇತ್ತೀಚೆಗೆ ನಡೆದ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ದದ ಟೆಸ್ಟ್ ಸರಣಿಗಳಲ್ಲಿ ವಿರಾಟ್ ಕೊಹ್ಲಿ ಕಳಪೆ ಪ್ರದರ್ಶನ ನೀಡಿದ್ದರು. ಹೀಗಾಗಿ ವಿರಾಟ್ ಕೊಹ್ಲಿ ಹಲವು ಟೀಕೆಗಳನ್ನು ಎದುರಿಸುವಂತಾಗಿತ್ತು. ಇದೀಗ ತಮ್ಮ ಹಳೆಯ ರೂಪಕ್ಕೆ ಮರಳಲು ವಿರಾಟ್ ರಣಜಿ ಟ್ರೋಫಿ ಟೂರ್ನಿಯಲ್ಲಿ ಆಡಲಿದ್ದಾರೆ.

Ranji Trophy Virat Kohli will play for Delhi in the match against Railways

ದೆಹಲಿ ತಂಡವನ್ನು ಆಯುಷ್ ಬಡೋನಿ ನಾಯಕನ್ನಾಗಿ ಮುನ್ನಡೆಸುತ್ತಿದ್ದು, ಯುವ ಆಟಗಾರನ ನಾಯಕತ್ವದಲ್ಲಿ ವಿರಾಟ್ ಕೊಹ್ಲಿ ಆಡಲಿದ್ದಾರೆ. ಕೊಹ್ಲಿ ಕೊನೆಯ ಬಾರಿಗೆ ರಣಜಿ ಟ್ರೋಫಿ ಪಂದ್ಯವನ್ನು 2012 ರಲ್ಲಿ ಆಡಿದ್ದರು. ಕುತ್ತಿಗೆ ಉಳುಕಿರುವ ಕಾರಣ ಈ ಬಾರಿ ವಿರಾಟ್ ಕೊಹ್ಲಿ ರಣಜಿ ಟ್ರೋಫಿಯಲ್ಲಿ ಆಡುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇರಲಿಲ್ಲ. ಇದೀಗ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ರಣಜಿ ಟ್ರೋಫಿಯ ದೆಹಲಿ ತಂಡದ ಕೊನೆಯ ಲೀಗ್ ಪಂದ್ಯಕ್ಕೆ ವಿರಾಟ್ ಕೊಹ್ಲಿ ಲಭ್ಯವಿದ್ದಾರೆ ಎಂದು ತಿಳಿಸಿದೆ.

ರೈಲ್ವೇಸ್ ವಿರುದ್ಧದ ಪಂದ್ಯಕ್ಕೆ ವಿರಾಟ್ ಅವರು ಲಭ್ಯವಿದ್ದಾರೆ ಎಂದು ಡಿಡಿಸಿಎ ಅಧ್ಯಕ್ಷ ರೋಹನ್ ಜೇಟ್ಲಿ ತಂಡದ ಮ್ಯಾನೇಜ್‌ಮೆಂಟ್‌ಗೆ ತಿಳಿಸಿದ್ದಾರೆ. ಅಲ್ಲದೆ, ದೆಹಲಿ ತಂಡದ ಮುಖ್ಯ ಕೋಚ್ ಸರನ್‌ದೀಪ್ ಸಿಂಗ್ ಮಾಧ್ಯಮಗಳಿಗೆ ವಿರಾಟ್ ಕೊಹ್ಲಿ ಆಡುವ ಬಗ್ಗೆ ಮಾಹಿತಿ ನೀಡಿದ್ದಾರೆ. ವಿರಾಟ್ ಕೊಹ್ಲಿ ಹೊರೆತುಪಡಿಸಿ ರಿಷಬ್ ಪಂತ್ ಕೂಡ ಸೌರಾಷ್ಟ್ರ ವಿರುದ್ಧ ಆಡಲಿದ್ದಾರೆ.

ರಣಜಿ ಟ್ರೋಫಿ ದಾಖಲೆ

ವಿರಾಟ್ ಕೊಹ್ಲಿ ರಣಜಿ ಟ್ರೋಫಿಯಲ್ಲಿ ದೆಹಲಿ ಪರ 23 ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ ಅವರು 50.77 ಸರಾಸರಿಯಲ್ಲಿ 1574 ರನ್ ಗಳಿಸಿದ್ದಾರೆ. ರಣಜಿ ಟ್ರೋಫಿಯಲ್ಲಿ ದೆಹಲಿ ತಂಡದ ಪರ ವಿರಾಟ್ ಕೊಹ್ಲಿ ಐದು ಶತಕಗಳನ್ನು ಸಿಡಿಸಿದ್ದರು. 2009-10ರಲ್ಲಿ ಅವರು ಕೇವಲ ಮೂರು ಪಂದ್ಯಗಳಲ್ಲಿ 93.50 ಸರಾಸರಿಯಲ್ಲಿ 374 ರನ್ ಗಳಿಸಿದರು. ಇದಾದ ಬಳಿಕ 2012-13ರ ಋತುವಿನಲ್ಲಿ ಉತ್ತರ ಪ್ರದೇಶ ವಿರುದ್ಧದ ಪಂದ್ಯದಲ್ಲಿ ದೆಹಲಿ ಪರ ಕೊನೆಯ ರಣಜಿ ಟ್ರೋಫಿ ಪಂದ್ಯದಲ್ಲಿ ವಿರಾಟ್ ಕೊಹ್ಲಿ 57 ರನ್ ಬಾರಿಸಿದ್ದರು.

Story first published: Tuesday, January 21, 2025, 11:22 [IST]
Other articles published on Jan 21, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+