KKR vs GT: ಐಪಿಎಲ್‌ನಲ್ಲಿ ಮಹತ್ವದ ಮೈಲಿಗಲ್ಲು ಸ್ಥಾಪಿಸಿದ ರಶೀದ್ ಖಾನ್

ಐಪಿಎಲ್ 2022ರ ರೋಚಕತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಟೂರ್ನಿಯಲ್ಲಿ ಪ್ರತಿ ದಿನವೂ ಹೊಸ ದಾಖಲೆಗಳು, ನೂತನ ಮೈಲುಗಲ್ಲುಗಳು ಸ್ಥಾಪನೆಯಾಗುತ್ತಿದೆ. ಭಾರತ ಮಾತ್ರವಲ್ಲದೆ ವಿದೇಶಿ ಪ್ರತಿಭೆಗಳಿಗೂ ಉತ್ತಮ ವೇದಿಕೆಯಾಗಿರುವ ಐಪಿಎಲ್‌ನಲ್ಲಿ ಅಫ್ಘಾನಿಸ್ತಾನದ ಸ್ಟಾರ್ ಆಟಗಾರ ರಶೀದ್ ಖಾನ್ ಅವರು ನೂತನ ದಾಖಲೆಯನ್ನು ನಿರ್ಮಿಸಿದ್ದಾರೆ.
ಶನಿವಾರ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಪಂದ್ಯದಲ್ಲಿ ವೆಂಕಟೇಶ್ ಅಯ್ಯರ್ ಅವರನ್ನು ಔಟ್ ಮಾಡಿದ ಲೆಗ್ ಸ್ಪಿನ್ನರ್ ರಶೀದ್ ಖಾನ್ ಐಪಿಎಲ್‌ನಲ್ಲಿ ನೂತನ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ 100ನೇ ವಿಕೆಟ್ ಸಂಪಾದಿಸಿದ ರಶೀದ್ ಖಾನ್ ಟೂರ್ನಿಯ ಇತಿಹಾಸದಲ್ಲಿ ಈ ಮೈಲಿಗಲ್ಲು ಸಾಧಿಸಿದ ಎರಡನೇ ವಿದೇಶಿ ಸ್ಪಿನ್ನರ್ ಎನಿಸಿಕೊಂಡಿದ್ದಾರೆ.
ಅಫ್ಘಾನಿಸ್ತಾನ ಮೂಲದ ಪ್ರತಿಭಾನ್ವಿತ ಲೆಗ್ ಸ್ಪಿನ್ನರ್ ರಶೀದ್ ಖಾನ್ 2017ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮೂಲಕ ಐಪಿಎಲ್ ಪಾದಾರ್ಪಣೆ ಮಾಡಿದ್ದರು. ಆರಂಭಿಕ ಆವೃತ್ತಿಯಲ್ಲಿಯೇ ಛಾಪು ಮೂಡಿಸಿದ್ದ ರಶೀದ್ ಖಾನ್ 17 ವಿಕೆಟ್‌ಗಳನ್ನು ಪಡೆದು ಮಿಂಚಿದ್ದರು. ತಮ್ಮ 83ನೇ ಪಂದ್ಯದಲ್ಲಿ ಈ ಮಹತ್ವದ ಮೈಲುಗಲ್ಲು ತಲುಪಿರುವ ಅವರು ಶನಿವಾರ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ವೆಂಕಟೇಶ್ ಅಯ್ಯರ್ ಅವರನ್ನು ತಮ್ಮ 3ನೇ ಓವರ್‌ನಲ್ಲಿ ಔಟ್ ಮಾಡುವ ಮೂಲಕ ಈ ಸಾಧನೆ ಮಾಡಿದ್ದಾರೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ಟೈಟನ್ಸ್ ತಂಡ 20 ಓವರ್‌ಗಳಿಗೆ 9 ವಿಕೆಟ್‌ಗಳನ್ನು ಕಳೆದುಕೊಂಡು 159 ರನ್ ಹಾಕುವಲ್ಲಿ ಯಶಸ್ವಿಯಾಗಿತ್ತು. ನಾಯಕ ಹಾರ್ದಿಕ್ ಪಾಂಡ್ಯ 49 ಎಸೆತಗಳಲ್ಲಿ 67 ರನ್ ಗಳಿಸಿದ್ದರು. ನಂತರ 159 ರನ್ ಗುರಿ ಬೆನ್ನಟ್ಟಿದ್ದ ಕೆಕೆಆರ್ 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 148 ರನ್ ಗಳಿಸಲಷ್ಟೇ ಶಕ್ತವಾಯಿತು. ಜಿಟಿ ತಂಡ ಉತ್ತಮವಾಗಿ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ 8 ರನ್‌ಗಳ ವಿರೋಚಿತ ಜಯಗಳಿಸಿತು. ಈ ಪಂದ್ಯದಲ್ಲಿ ರಶೀದ್ ಖಾನ್, ಮೊಹ್ಮಮದ ಶಮಿ, ಯಶ್ ದಯಾಲ್ ತಲಾ ಎರಡು ವಿಕೆಟ್‌ಗಳನ್ನು ಪಡೆದುಕೊಂಡರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications