Rashid Khan: ಕಾಬೂಲ್‌ನಲ್ಲಿ ರಶೀದ್ ಖಾನ್ ಅದ್ಧೂರಿ ಮದುವೆ
ಅಫ್ಘಾನಿಸ್ತಾನದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಗುರುವಾರ ಕಾಬೂಲ್‌ನಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಐಷರಾಮಿ ಹೊಟೇಲ್‌ನಲ್ಲಿ ಅದ್ಧೂರಿ ವಿವಾಹ ಸಮಾರಂಭ ನಡೆದಿವೆ. ರಶೀದ್ ಖಾನ್ ಮದುವೆಗೆ ಸಂಬಂಧಿಸಿದ ಫೋಟೋ ಮತ್ತು ವಿಡಿಯೋಗಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ನಾಯಕ ರಶೀದ್ ಖಾನ್ ಮದುವೆಗೆ ಅಫ್ಘಾನಿಸ್ತಾನದ ಹಲವು ಕ್ರಿಕೆಟಿಗರು ಆಗಮಿಸಿ ಶುಭ ಕೋರಿದ್ದಾರೆ. ಮೂಲಗಳ ಪ್ರಕಾರ ರಶೀದ್ ಖಾನ್ ಜೊತೆಗೆ ಅವರ ಮೂವರು ಸಹೋದರರು ಕೂಡ ಮದುವೆ ಮಾಡಿಕೊಂಡಿದ್ದಾರೆ. ರಶೀದ್ ಖಾನ್ ಮದುವೆಯಾಗಿರುವ ಹುಡುಗಿ ಯಾರೆಂಬುದು ಇನ್ನು ತಿಳಿದು ಬಂದಿಲ್ಲ. ಆದರೆ, ಅವರು ತಮ್ಮ ಸಂಬಂಧಿಯನ್ನೇ ಮದುವೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಕಾಬೂಲ್‌ನಲ್ಲಿರುವ ಐಷರಾಮಿ ಹೊಟೇಲ್ ಹೊರಗೆ ಮದುವೆ ಸಂಭ್ರಮಾಚರಣೆ ವೇಳೆ ಪಟಾಕಿ ಸಿಡಿಸಲಾಗಿದೆ. ಇದಲ್ಲದೆ, ರಶೀದ್ ಅವರ ಮದುವೆ ಸಂದರ್ಭದಲ್ಲಿ ಹಲವರ ಬಂದೂಕುಗಳೊಂದಿಗೆ ತಿರುಗಾಡುತ್ತಿರುವುದು ಕಂಡುಬಂದಿದೆ. ಹಲವು ಕ್ರಿಕೆಟಿಗರು ರಶೀದ್ ಅವರ ಮದುವೆಗೆ ಸಾಮಾಜಿಕ ಜಾಲತಾಣಗಳ ಮೂಲಕ ಶುಭ ಕೋರಿದ್ದಾರೆ.
ಮಾತು ತಪ್ಪಿದ ರಶೀದ್
ರಶೀದ್ ಖಾನ್ ಅವರು ಅದ್ದೂರಿಯಾಗಿ ಮದುವೆಯಾಗುವ ಮೂಲಕ ಕೊಟ್ಟ ಮಾತಿಗೆ ತಪ್ಪಿದ್ದಾರೆ. ಕೆಲ ವರ್ಷಗಳ ಹಿಂದೆ ಸಂದರ್ಶನವೊಂದರಲ್ಲಿ ರಶೀದ್ ಖಾನ್ ಅವರಿಗೆ ಮದುವೆ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಈ ವೇಳೆ ಅಘ್ಘಾನಿಸ್ತಾನ ತಂಡ ವಿಶ್ವಕಪ್ ಗೆದ್ದ ನಂತರ ಮದುವೆಯಾಗುತ್ತೇನೆ ಎಂದುನ ಉತ್ತರಿಸಿದ್ದರು. ಆದರೆ, ಇದೀಗ ಈ ಮಾತಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಅಭಿಮಾನಿಗಳು ಪ್ರತಿಕ್ರಿಯಿಸುತ್ತಿದ್ದಾರೆ. 2024ರ ಟಿ20 ವಿಶ್ವಕಪ್‌ನಲ್ಲಿ ಮೊದಲ ಬಾರಿ ಅಘ್ಫಾನಿಸ್ತಾನ ಸೆಮಿಫೈನಲ್ ತಲುಪಿ ಇತಿಹಾಸ ಸೃಷ್ಟಿಸಿತ್ತು.
ರಶೀದ್ ಖಾನ್ ವಿಶ್ವ ಕ್ರಿಕೆಟ್‌ನ ಅಗ್ರ ಸ್ಪಿನ್ನರ್‌ಗಳಲ್ಲಿ ಒಬ್ಬರು. ವಿಶೇಷವಾಗಿ ಅವರು ವೈಟ್-ಬಾಲ್ ಕ್ರಿಕೆಟ್‌ನಲ್ಲಿ ತಮ್ಮ ಸ್ಪಿನ್ ಬೌಲಿಂಗ್ ಮೂಲಕ ಪ್ರಾಬಲ್ಯ ಸಾಧಿಸಿದ್ದಾರೆ. ಟಿ20ಯಲ್ಲಿ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವಾಗಲೂ ಹಲವು ಅದ್ಭುತ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಇತ್ತೀಚಿನ ಪ್ರದರ್ಶನವು ಕ್ರಿಕೆಟ್ ಜಗತ್ತಿನಲ್ಲಿ ಅವರ ಸ್ಥಾನವನ್ನು ಮತ್ತಷ್ಟು ಮೇಲೆತ್ತಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಅಫ್ಘಾನಿಸ್ತಾನ ಸರಣಿ ಗೆಲುವಿನಲ್ಲಿ ರಶೀದ್ ಖಾನ್ ಪ್ರಮುಖ ಪಾತ್ರ ವಹಿಸಿದ್ದರು. 93 ಟಿ20 ಪಂದ್ಯಗಳಲ್ಲಿ 152 ವಿಕೆಟ್ ಹಾಗೂ 105 ಏಕದಿನ ಪಂದ್ಯಗಳಲ್ಲಿ 190 ವಿಕೆಟ್ ಕಬಳಿಸಿದ್ದಾರೆ.
ಜೊತೆಗೆ ಪ್ರಪಂಚದಾದ್ಯಂತದ ವಿವಿಧ ಫ್ರಾಂಚೈಸಿ ಕ್ರಿಕೆಟ್ ಲೀಗ್‌ಗಳಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಮೊದಲ ಬಾರಿಗೆ ಸನ್‌ರೈಸರ್ಸ್ ಹೈದರಾಬಾದ್‌ಗಾಗಿ ಆಡಿದ್ದು, ಸದ್ಯ ಗುಜರಾತ್ ಟೈಟಾನ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications