Rashid Khan: ತಾಲಿಬಾನಿಗಳನ್ನು ಎದುರು ಹಾಕಿಕೊಂಡ ರಶೀದ್ ಖಾನ್!
ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ನ ಹೊಸ ಆದೇಶಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆದೇಶ ವಿರುದ್ಧ ಅಫ್ಘಾನಿಸ್ತಾನದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ತೀವ್ರವಾಗಿ ವಿರೋಧಿಸಿದ್ದಾರೆ. ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ವೈದ್ಯಕೀಯ ತರಬೇತಿಯನ್ನು ನಿಷೇಧಿಸಿ ತಾಲಿಬಾನ್ ಆದೇಶ ಹೊರಡಿಸಿದೆ. ತಾಲಿಬಾನ್ ಸಚಿವ ಹಿಬತುಲ್ಲಾ ಅಖುಂದ್ಜಾದಾ ಅವರು ಡಿಸೆಂಬರ್ 2 ರಂದು ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ವೈದ್ಯಕೀಯ ತರಬೇತಿಯನ್ನು ನಿಷೇಧಿಸುವುದಾಗಿ ಘೋಷಿಸಿದ್ದರು.
ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ವೈದ್ಯಕೀಯ ತರಬೇತಿಯನ್ನು ನಿಷೇಧಿಸಿರುವ ವಿರುದ್ಧ ರಶೀದ್ ಖಾನ್ ಧ್ವನಿ ಎತ್ತಿದ್ದಾರೆ. ಅಫ್ಘಾನಿಸ್ತಾನದ ಮಹಿಳೆಯರ ಪರ ನಿಂತಿರುವ ರಶೀದ್ ಖಾನ್ ತಾಲಿಬಾನ್ ಸರ್ಕಾರವನ್ನೇ ಎದುರು ಹಾಕಿಕೊಂಡಿದ್ಧಾರೆ. ರಶೀದ್ ಖಾನ್ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಸುದೀರ್ಘ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ರಶೀದ್ ಖಾನ್ ತಮ್ಮ ದೇಶದ ಮಹಿಳೆಯರ ಬೆಂಬಲಕ್ಕೆ ನಿಂತಿರುವುದು ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ತಾಲಿಬಾನಿಗಳ ಸರ್ಕಾರ ರಚನೆಯಾದ ಮೇಲೆ ಅಫ್ಘಾನಿಸ್ತಾನದಲ್ಲಿ ಸಂಪೂರ್ಣ ವ್ಯವಸ್ಥೆ ಹಾಳಾಗಿದೆ. ಅಲ್ಲಿನ ಜನರು ತಾಲಿಬಾನಿಗಳ ಸರ್ಕಾರದ ಬೇಜಾವ್ದಾರಿ ಆಡಳಿತಕ್ಕೆ ಬೇಸತ್ತು ಹೋಗಿದ್ದಾರೆ. ಅಫ್ಘಾನಿಸ್ತಾನದಲ್ಲಿ 2021ರ ಸೆಪ್ಟೆಂಬರ್ ತಿಂಗಳಲ್ಲಿ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಇದಾದ ಒಂದು ತಿಂಗಳ ಬಳಿಕ ಅಫ್ಘಾನಿಸ್ತಾನದಲ್ಲಿ ಆರನೇ ತರಗತಿಯ ನಂತರ ಹುಡುಗಿಯರ ಶಾಲಾ ಶಿಕ್ಷಣಕ್ಕೆ ತಾಲಿಬಾನ್ ಸರ್ಕಾರ ನಿಷೇಧ ಹೇರಿತ್ತು. ನಂತರ 2022ರ ಡಿಸೆಂಬರ್‌ನಲ್ಲಿ ಮಹಿಳೆಯರು ವಿಶ್ವವಿದ್ಯಾಲಯಕ್ಕೆ ಹೋಗುವುದಕ್ಕೆ ಬ್ರೇಕ್ ಹಾಕಿತ್ತು. ಇದೀಗ ಮಹಿಳೆಯರಿಗೆ ವೈದ್ಯಕೀಯ ತರಬೇತಿಯನ್ನು ನಿಷೇಧಿಸಿ ಆದೇಶ ಹೊರಡಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ತಾಲಿಬಾನಿಗಳ ಆದೇಶಕ್ಕೆ ಕಳವಳ ವ್ಯಕ್ತಪಡಿಸಿರವ ರಶೀದ್ ಖಾನ್, ಮಹಿಳೆಯರ ಶಿಕ್ಷಣದ ಮಹತ್ವದ ಬಗ್ಗೆ ಒತ್ತಿ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ (ಎಕ್ಸ್) ಮಾಡುವ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.'ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗಾಗಿ ವೈದ್ಯಕೀಯ ಸಂಸ್ಥೆಗಳನ್ನು ಮುಚ್ಚಿರುವುದು ನನಗೆ ನೋವು ತಂದಿದೆ. ಶಿಕ್ಷಣವು ಇಸ್ಲಾಮಿಕ್ ಬೋಧನೆಗಳಲ್ಲಿ ಉನ್ನತ ಸ್ಥಾನಗಳನ್ನು ಹೊಂದಿದೆ. ಹೀಗಾಗಿ ಶಿಕ್ಷಣ ಪ್ರತಿಯೊಬ್ಬರಿಗೂ ಕಡ್ಡಾಯವಾಗಿದೆ. ಶಿಕ್ಷಣದಿಂದ ಪುರುಷರಾಗಲಿ ಅಥವಾ ಮಹಿಳೆಯರಾಗಲಿ ವಂಚಿತರಾಗಲು ಸಾಧ್ಯವಿಲ್ಲ. ಆದರೆ ಈ ಸರ್ಕಾರದ ನಡೆಯಿಂದ ಬೇಸರಗೊಂಡಿದ್ದೇನೆ ಎಂದು ರಶೀದ್ ಖಾನ್ ತಿಳಿಸಿದ್ದಾರೆ.
ಮಹಿಳೆಯರ ಪರ ನಿಂತ ರಶೀದ್
ನಮ್ಮ ಪ್ರೀತಿಯ ದೇಶ ಅಫ್ಘಾನಿಸ್ತಾನ ನಿರ್ಣಾಯಕ ಘಟ್ಟದಲ್ಲಿ ನಿಂತಿದೆ. ದೇಶಕ್ಕೆ ಪ್ರತಿಯೊಂದು ಕ್ಷೇತ್ರದಲ್ಲೂ ವೃತ್ತಿಪರರ ಅವಶ್ಯಕತೆಯಿದೆ. ವಿಶೇಷವಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಮಹಿಳಾ ವೈದ್ಯರು ಮತ್ತು ದಾದಿಯರ ತೀವ್ರ ಕೊರತೆಯು ದೇಶದಲ್ಲಿ ಎದುರಾಗಿದೆ. ಇದು ಮಹಿಳೆಯರ ಆರೋಗ್ಯ ಮತ್ತು ಘನತೆಯ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ರಶೀದ್ ಖಾನ್ ಹೇಳಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications